ಬೆಂಗಳೂರು : ಅಥಣಿ ಕ್ಷೇತ್ರದ ಬಿಜೆಪಿ ಟಿಕೆಟ್ ವಂಚಿತರಾಗಿರುವ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರು ಬಿಜೆಪಿಗೆ ಸೆಡ್ಡೊಡೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಮ್ಮುಖದಲ್ಲಿ ಅಧಿಕೃತವಾಗಿ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಕಾಂಗ್ರೆಸ್ ಸೇರ್ಪಡೆ ಬಳಿಕ ಮಾತನಾಡಿರುವ ಅವರು, ಈಗ ಒಂದು ಚರ್ಚೆ, ಟೀಕೆ ಮಾಡುತ್ತಿದ್ದಾರೆ. ನಾನು ಸೋತರು ನನಗೆ ಉಪ ಮುಖ್ಯಮಂತ್ರಿ ಸ್ಥಾನ ಕೊಟ್ಟಿದ್ರು. ಅದನ್ನು ಮರೆತು ಈಗ ಪಕ್ಷ ಬಿಡುತ್ತಿದ್ದಾರೆ ಅಂತಾ ಟೀಕೆ ಮಾಡುತ್ತೀದ್ದಾರೆ ಎಂದಿದ್ದಾರೆ.
ಇಂದು ಶ್ರೀ ಲಕ್ಷ್ಮಣ ಸವದಿಯವರು ಇತರ ನಾಯಕರೊಡಗೂಡಿ ಕಾಂಗ್ರೆಸ್ ಪಕ್ಷವನ್ನು ಸೇರಿದರು. ಕಾಂಗ್ರೆಸ್ ಪಕ್ಷವೊಂದೇ ಈ ನಾಡಿನ ಭರವಸೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ. ಈ ಕುರಿತಂತೆ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಸಂದರ್ಭ ಇಲ್ಲಿದೆ. pic.twitter.com/1nXuTPEhnd
— DK Shivakumar (@DKShivakumar) April 14, 2023
ಇದನ್ನೂ ಓದಿ : ಎರಡೇ ದಿನದಲ್ಲಿ ‘ಯೂಟರ್ನ್’ ಹೊಡೆದ ಬಿಜೆಪಿ ಶಾಸಕ ಅಂಗಾರ
ಹೈಕಮಾಂಡ್ ನಾಯಕರು ಒಂದು ವಚನ ಕೊಟ್ಟಿದ್ರು. ಚುನಾವಣೆಯ ಟಿಕೆಟ್ ನೀಡುತ್ತೇನೆ ಎಂದಿದ್ದರು. ಯಾವುದೇ ಮಾಹಿತಿ ಇಲ್ಲದೆ ನನ್ನನ್ನ ಉಪಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸಿದ್ರು. ಯಾವುದೇ ಜವಾಬ್ದಾರಿಯನ್ನು ನೀಡಲಿಲ್ಲ. ಕೊಟ್ಟ ಮಾತಿನಂತೆ ಈ ಬಾರಿಯ ಚುನಾವಣೆಗೆ ಟಿಕೆಟ್ ನೀಡುವಂತೆ ಕೇಳಿದೆ. ವಲಸೆ ಬಂದ 17 ಜನರಿಗೆ ಟಿಕೆಟ್ ಕೊಡುತ್ತೇವೆ ಅಂತ ಮಾತು ಕೊಟ್ಟಿದ್ದೇವೆ ಅಂತ ಹೇಳಿ ಮಾತು ತಪ್ಪಿದ್ರು ಎಂದು ವಾಗ್ದಾಳಿ ನಡೆಸಿದ್ದಾರೆ.
ಇವ್ರು ವಚನ ಭ್ರಷ್ಟರು..!
ಇವರು ವಚನ ಭ್ರಷ್ಟರು ಅನ್ನೋದನ್ನ ಈಗ ಒಪ್ಪುತ್ತಾರೋ?ನಾನು ಎಲ್ಲಿ ಇರುತ್ತೇನೋ ಅಲ್ಲಿ ಪ್ರಾಮಾಣಿಕತೆ, ಶ್ರದ್ದೆ ಇರುತ್ತೆ. ಕಾಂಗ್ರೆಸ್ ಪಕ್ಷದಲ್ಲಿ ಬಿಜೆಪಿ ಗಿಂತ ಹೆಚ್ಚಿನ ಶ್ರದ್ದೆ ಯಿಂದ ದುಡಿಯುತ್ತೇನೆ ಎಂದು ಲಕ್ಷ್ಮಣ ಸವದಿ ಹೇಳಿದ್ದಾರೆ.
ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಹಲವು ಬಿಜೆಪಿ ಮುಖಂಡರು ಹಾಗೂ ಸವದಿಯ ಬೆಂಬಲಿಗರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.