Wednesday, January 22, 2025

‘ಅಂಬೇಡ್ಕರ್ ವಿಶ್ವಕಂಡ ಮಹಾನ್ ಮಾನವತಾವಾದಿ’ : ಸೀಕಲ್ ರಾಮಚಂದ್ರಗೌಡ ಬಣ್ಣನೆ

ಬೆಂಗಳೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಹಿನ್ನೆಲೆಯಲ್ಲಿ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸೀಕಲ್ ರಾಮಚಂದ್ರಗೌಡ ಅವರು ಭಾವಚಿತ್ರ ಮತ್ತು ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.

ಶಿಡ್ಲಘಟ್ಟ ತಾಲೂಕಿನ ಹಲವು ಭಾಗಗಳಲ್ಲಿ ನಡೆದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನಾಚರಣೆ  ಕಾರ್ಯಕ್ರಮದಲ್ಲಿ ಬಿಜೆಪಿ ಅಭ್ಯರ್ಥಿ ಸೀಕಲ್ ರಾಮಚಂದ್ರಗೌಡ, ಮಾಜಿ ಶಾಸಕ ಎಂ.ರಾಜಣ್ಣ ಅವರುಗಳು ಪಾಲ್ಗೊಂಡರು.

ಈ ವೇಳೆ ಬಿಜೆಪಿ ಅಭ್ಯರ್ಥಿ ಸೀಕಲ್ ರಾಮಚಂದ್ರಗೌಡ ಮಾತನಾಡಿ, ಅಂಬೇಡ್ಕರ್ ಅವರು ಇಡೀ ವಿಶ್ವಕಂಡ ಮಹಾನ್ ಮಾನವತಾವಾದಿ ಆಗಿದ್ದು, ಇವರನ್ನು ಪಡೆದ ಭಾರತೀಯರಾದ ನಾವುಗಳು ಪುಣ್ಯವಂತರೆಂದು ಎಂದು ಹೇಳಿದರು.

ಇದನ್ನೂ ಓದಿ : ಬಿ.ಸಿ ಪಾಟೀಲ್ ಗೃಹದಲ್ಲಿ ಅಂಬೇಡ್ಕರ್ ಜಯಂತಿ : ‘ನನಗೆ ಮತ್ತೊಮ್ಮೆ ಅವಕಾಶ ಕಲ್ಪಿಸಿ’ ಎಂದ ಕೌರವ

ಮೀಸಲಾತಿ ಜಾರಿಗೊಳಿಸಿದ್ದು ಬಿಜೆಪಿ

ಮಾಜಿ ಶಾಸಕ ಎಂ.ರಾಜಣ್ಣ ಮಾತನಾಡಿ, ಇಂದು ದೇಶದಲ್ಲಿ ಸಾಮಾಜಿಕ ನ್ಯಾಯ ಉಳಿದುಕೊಂಡಿದೆ ಎಂಬುದಕ್ಕೆ ಅಂಬೇಡ್ಕರ್ ಅವರ ಸಂವಿಧಾನ ಸಾಕ್ಷಿಯಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ಸಮನಾದ ಮೀಸಲಾತಿ ಕಲ್ಪಿಸಿದ ಏಕೈಕ ರಾಜ್ಯ ಕರ್ನಾಟಕ. ಅದರಲ್ಲಿಯೂ ಮೀಸಲಾತಿಯನ್ನು ಜಾರಿಗೊಳಿಸಿದ್ದು ಬಿಜೆಪಿ ಪಕ್ಷ ಎಂಬುದು ಹೆಮ್ಮೆಯ ಸಂಗತಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಅಭಿವೃದ್ಧಿ ಮಾನದಂಡದಿಂದ ಬಿರುಸಿನ ಪ್ರಚಾರ

ಶಿಡ್ಲಘಟ್ಟ ಬಿಜೆಪಿ ಟಿಕೆಟ್ ಘೋಷಣೆ ಹಿನ್ನೆಲೆಯಲ್ಲಿ ಅಭ್ಯರ್ಥಿ ಸೀಕಲ್ ರಾಮಚಂದ್ರಗೌಡ ಅವರು ಬಿರುಸಿನ ಕಾರ್ಯ ಚಟುವಟಿಕೆ ಆರಂಭಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅಭಿವೃದ್ಧಿ ಕಾರ್ಯಗಳನ್ನು ಮಾನದಂಡವಾಗಿರಿಸಿಕೊಂಡು ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ.

ಬಿಜೆಪಿ ಬಾವುಟ ಹಾರಿಸುವ ಪಣ

ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಬಾವುಟ ಹಾರಿಸಲು ಪಣತೊಟ್ಟಿರುವ ಸೀಕಲ್ ರಾಮಚಂದ್ರಗೌಡ ಎದುರಾಳಿಗಳನ್ನು ಬಗ್ಗುಬಡಿಯಲು ರಣತಂತ್ರ ರೂಪಿಸಿದ್ದಾರೆ. ಈ ಬಾರಿ ಶಿಡ್ಲಘಟ್ಟ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಜಯಗಳಿಸಲಿದೆ. ಆ ಮೂಲಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಇದೇ ವೇಳೆ ಸೀಕಲ್ ರಾಮಚಂದ್ರಗೌಡ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಸಂದರ್ಭದಲ್ಲಿ ಬಿಜೆಪಿ ನಗರ ಜಿಲ್ಲಾ ಉಪಾಧ್ಯಕ್ಷ ನಂದೀಶ್, ಜಿಲ್ಲಾ ವಕ್ತಾರ ರಮೇಶ್ ಬಾಯರಿ, ಯುವ ಮೋರ್ಚಾ ಅಧ್ಯಕ್ಷ ಭರತ್ ಕುಮಾರ್, ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಮಣಿ, ಓಬಿಸಿ ಮೋರ್ಚಾ ನಗರ ಮಂಡಲ ಅಧ್ಯಕ್ಷ ಕಿರಣ್, ನಗರಸಭೆ ನಾಮ ನಿರ್ದೇಶಕ ಸದಸ್ಯ ಪ್ರಕಾಶ್, ಕಾರ್ಮಿಕ ಪ್ರಕೋಷ್ಠ ಜಿಲ್ಲಾ ಸಂಚಾಲಕ ನರೇಶ್, ಎಸ್ಸಿ ಮೋರ್ಚ ನಗರ ಮಂಡಲ ಉಪಾಧ್ಯಕ್ಷ ನರಸಿಂಹಮೂರ್ತಿ, ಪ್ರಧಾನ ಕಾರ್ಯದರ್ಶಿ ಮುರಳಿ, ರಘು, ಮಣಿ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

RELATED ARTICLES

Related Articles

TRENDING ARTICLES