ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆ ಫೀವರ್ ಹೆಚ್ಚಾಗುತ್ತಿದ್ದು, ಆಡಳಿತರೂಢ ಬಿಜೆಪಿ ಸೇರಿದಂತೆ ವಿಪಕ್ಷಗಳು ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡುತ್ತಿವೆ. ಈ ಬಗ್ಗೆ ಸ್ವತಃ ಸಿದ್ದರಾಮಯ್ಯ ಅವರೇ ಮಾತನಾಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನನ್ನ ಮೇಲಿನ ಭಯಕ್ಕೆ ಬಿಜೆಪಿ ಹಾಗೂ ಜೆಡಿಎಸ್ನವರು ನನ್ನನ್ನು ಮುಗಿಸಲು ಹೊರಟಿದ್ದಾರೆ ಎಂದು ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.
ಬಿಜೆಪಿ, ಜೆಡಿಎಸ್ ಎಲ್ಲರಿಗೂ ನಾನೇ ಟಾರ್ಗೆಟ್. ಈ ನಾಡಿಗೆ ನಾನು ಮಾಡಿರುವ ಅನ್ಯಾಯವಾದರೂ ಏನು?. ನನ್ನ ಮೇಲಿನ ಭಯಕ್ಕೆ ಎರಡೂ ಪಕ್ಷದವರು ಸೇರಿಕೊಂಡು ನನ್ನನ್ನು ಮುಗಿಸಬೇಕು ಎಂದು ಹೊರಟಿದ್ದಾರೆ. ರಾಜ್ಯದ ಜನರ ಆಶೀರ್ವಾದ ಇರುವವರೆಗೆ ಯಾರಿಂದಲೂ ನನ್ನನ್ನು ಮುಗಿಸಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಇದನ್ನೂ ಓದಿ : ರಾಜ್ಯದಲ್ಲಿ ‘ಕಮಲ ಅರಳುವುದು ನಿಶ್ಚಿತ’ : ಡಾ.ಕೆ ಸುಧಾಕರ್ ವಿಶ್ವಾಸ
ಏ.18ರಂದು ನಾಮಪತ್ರ ಸಲ್ಲಿಸುವೆ
ವರುಣಾ ಕಾಂಗ್ರೆಸ್ ಅಭ್ಯರ್ಥಿಯಾಗಿ ಏಪ್ರಿಲ್ ೧೯ರಂದು ನಾಮಪತ್ರ ಸಲ್ಲಿಸುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಬಿಜೆಪಿಯವರಿಗೆ ನನ್ನನ್ನು ಕಂಡರೆ ಭಯ. ಹಾಗಾಗಿ, ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಆದರೆ ನನ್ನ ವಿರುದ್ಧ ಯಾರು ಸ್ಪರ್ಧಿಸಿದ್ದಾರೆಂಬ ಬಗ್ಗೆ ನಾನು ಎಂದಿಗೂ ಯೋಚಿಸಲ್ಲ ಎಂದಿದ್ದಾರೆ.
ವರುಣಾದ ಜನ ನನ್ನನ್ನು ಗೆಲ್ಲಿಸುತ್ತಾರೆಂಬ ವಿಶ್ವಾಸವಿದೆ. ಕೋಲಾರದಲ್ಲಿ ನಾನು ಸ್ಪರ್ಧಿಸುವ ಕುರಿತು ವರಿಷ್ಠರು ನಿರ್ಧರಿಸುತ್ತಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.