Monday, December 23, 2024

ಏ.18ಕ್ಕೆ ‘ಕೌರವ ಪಾಟೀಲ್’ ನಾಮಪತ್ರ ಸಲ್ಲಿಕೆ : ನಾಳೆ ಮುಖಂಡರ ಸಭೆ

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆ ಅಧಿಸೂಚನೆ ಪ್ರಕಟವಾಗಿದ್ದು, ಈಗಾಗಲೇ ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಆರಂಭಿಸಿದ್ದಾರೆ. ಏಪ್ರಿಲ್ 18ರಂದು ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕೃಷಿ ಸಚಿವ ಬಿ.ಸಿ ಪಾಟೀಲ್ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ಹಿರೇಕೆರೂರು ವಿಧಾನಸಭಾ ವ್ಯಾಪ್ತಿಯ ಬಿಜೆಪಿ ಅಭ್ಯರ್ಥಿಯಾಗಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಏಪ್ರಿಲ್ 18ರಂದು ನಾಮಪತ್ರ ಸಲ್ಲಿಸುತ್ತಿದ್ದೇನೆ. ಈ ಹಿನ್ನೆಲೆಯಲ್ಲಿ ಏಪ್ರಿಲ್ 16ರಂದು ಬೆಳಗ್ಗೆ 11 ಗಂಟೆಗೆ ಹಿರೇಕೆರೂರು ಗೃಹ ಕಚೇರಿಯಲ್ಲಿ ಪೂರ್ವಭಾವಿ ಸಭೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಪಕ್ಷದ ಮುಖಂಡರು, ಗಣ್ಯರು, ಕಾರ್ಯಕರ್ತರು, ವಿಧಾನಸಭಾ ಕ್ಷೇತ್ರದ ಮತ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಬೆಂಬಲ ಸೂಚಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಸಚಿವ ಬಿ.ಸಿ ಪಾಟೀಲ್ ಮನವಿ ಮಾಡಿದ್ದಾರೆ.

ಇದನ್ನೂ ಓದಿ : ಬಿ.ಸಿ ಪಾಟೀಲ್ ಗೃಹದಲ್ಲಿ ಅಂಬೇಡ್ಕರ್ ಜಯಂತಿ : ‘ನನಗೆ ಮತ್ತೊಮ್ಮೆ ಅವಕಾಶ ಕಲ್ಪಿಸಿ’ ಎಂದ ಕೌರವ

ಬಿಜೆಪಿಗೆ ಬೆಂಬಲಿಸುವಂತೆ ಮನವಿ  

ಇದೇ ವೇಳೆ ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಹಂಸಭಾವಿ ಗ್ರಾಮಕ್ಕೆ ಭೇಟಿ ನೀಡಿ, ಶಿವಯೋಗಪ್ಪ ಕರಡಿ, ಮುರುಗಪ್ಪ ಗೌಡ್ರು ಪಾಟೀಲ್, ಚನ್ನಬಸಪ್ಪ ಬೋಗಾವಿ, ಮಲ್ಲಿಕಾರ್ಜುನ್ ಕೆಂಬಿ ಅವರನ್ನು ಭೇಟಿ ಮಾಡಿ, ಬಿಜೆಪಿ ಪಕ್ಷಕ್ಕೆ ಬೆಂಬಲಿಸುವಂತೆ ಕೋರಿದ್ದಾರೆ. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಗಣ್ಯರು ಮತ್ತು ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.

RELATED ARTICLES

Related Articles

TRENDING ARTICLES