ಬೆಂಗಳೂರು : ಶಿಡ್ಲಘಟ್ಟದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಗೆ ಶಾಕ್ ಎದುರಾಗಿದ್ದು, ನೂರಾರು ಕಾರ್ಯಕರ್ತರು ಬಿಜೆಪಿ ಸಿದ್ಧಾಂತ ಹಾಗೂ ಶಿಡ್ಲಘಟ್ಟ ಬಿಜೆಪಿ ಅಭ್ಯರ್ಥಿ ಸೀಕಲ್ ರಾಮಚಂದ್ರಗೌಡರ ಜನಪರ ಕಾಳಜಿ ಮೆಚ್ಚಿ ಬಿಜೆಪಿ ಪಕ್ಷ ಸೇರ್ಪಡೆಯಾಗಿದ್ದಾರೆ.
ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ದಿನ ಕಳೆದಂತೆ ಬಿಜೆಪಿ ಪಕ್ಷದ ತತ್ವ ಸಿದ್ಧಾಂತಗಳನ್ನು ಒಪ್ಪಿಕೊಂಡು ಪಕ್ಷ ಸೇರುತ್ತಿರುವ ಕಾರ್ಯಕರ್ತರ ಸಂಖ್ಯೆ ಒಂದಕ್ಕೆ 100 ಪಟ್ಟು ಹೆಚ್ಚಾಗುತ್ತಿದೆ. ನಗರ ಮತ್ತು ಗ್ರಾಮೀಣ ಭಾಗಗಳ ಯುವ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ.
ಶುಕ್ರವಾರ ರಾತ್ರಿ ಹೊಸಪೇಟೆ ಗ್ರಾಮ ಪಂಚಾಯಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ತೊರೆದು ನೂರಾರು ಕಾರ್ಯಕರ್ತರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಇದನ್ನೂ ಓದಿ : ನಾಯಿ-ನರಿ ಮಾತಿಗೆಲ್ಲಾ ಪ್ರತಿಕ್ರಿಯಿಸಲ್ಲ : ಸಚಿವ ಸೋಮಣ್ಣ ಕಿಡಿ
ಮಾಜಿ ಶಾಸಕ ಎಂ. ರಾಜಣ್ಣ, ಮುಖಂಡ ಸೀಕಲ್ ಆನಂದ ಗೌಡ, ತಾದೂರು ರಮೇಶ್ ಅವರ ಸಮ್ಮುಖದಲ್ಲಿ ಹೊಸಪೇಟೆಯ ಬಿಎಂಆರ್ ರಾಜಣ್ಣ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಎಚ್.ವಿ. ನಾರಾಯಣಸ್ವಾಮಿ ನೇತೃತ್ವದಲ್ಲಿ ಹಲವು ಕಾರ್ಯಕರ್ತರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಜಿಲ್ಲಾ ಯೂನಿಯನ್ ಮಾಜಿ ನಿರ್ದೇಶಕ ರಮೇಶ್ ಗೌಡ, ನಂಜುಂಡ, ಹೆಬ್ಬಾಳ ಸುರೇಶ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಮುನಿರಾಜು, ಮನಮಾಲಪಲ್ಲಿ ರವಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
ದಲಿತರ ಮನೆಯಲ್ಲಿ ಭರ್ಜರಿ ಭೋಜನ
ಹೊಸಪೇಟೆಯ ದಲಿತ ಮುಖಂಡ ಸುರೇಶ ಅವರ ಮನೆಯಲ್ಲಿ ಬಿಜೆಪಿ ಮುಖಂಡರಿಗೆ ವಿಶೇಷ ಭೋಜನ ವ್ಯವಸ್ಥೆ ಮಾಡಲಾಗಿತ್ತು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಮತಯಾಚಿಸಿದ ಮಾಜಿ ಶಾಸಕ ಎಂ.ರಾಜಣ್ಣ ಮುಖಂಡ, ಸೀಕಲ್ ಆನಂದ ಗೌಡ ಮತ್ತಿತರರು ದಲಿತಮ್ ಕಂಡ ಸುರೇಶ ಅವರ ಮನೆಯಲ್ಲಿ ವಿಶೇಷ ಭೋಜನ ಸೇವಿಸಿದರು.