Sunday, December 15, 2024

 IPL 2023: ಐಪಿಎಲ್​ನಲ್ಲಿಂದು ಡಬಲ್ ಧಮಾಕ ; ಹೈವೋಲ್ಟೇಜ್ ಪಂದ್ಯಕ್ಕೆ ಫ್ಯಾನ್ಸ್ ಕಾತುರ

LSG vs PBKS, IPL 2023: ಐಪಿಎಲ್​ನ  6ನೇ ಆವೃತ್ತಿಯಲ್ಲಿಂದು RCB vs DC ಹಾಗೂ ಲಖನೌ ಸೂಪರ್ ಜೇಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ನಡುವೆ ಇಂದು ಎರಡು ಪಂದ್ಯಗಳು ನಡೆಯಲಿದೆ. ಹೈವೋಲ್ಟೇಜ್ ಪಂದ್ಯಕ್ಕೆ ಫ್ಯಾನ್ಸ್ ಕಾತುರರಾಗಿದ್ದಾರೆ.

ಹೌದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ಸವಾಲ್ ಆಗಿದ್ದು, ಮತ್ತೊಂದು ಪಂದ್ಯದಲ್ಲಿ ಲಖನೌ ಸೂಪರ್ ಜೇಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಲಿದ್ದಾರೆ.

ಇಂದು ಮಧ್ಯಾಹ್ನ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಮ್ಯಾಚ್​ನಲ್ಲಿ ,ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಅನ್ನು ಎದುರಿಸಲಿದೆ.

RCB ತಂಡ

ಹರ್ಷಲ್ ಪಟೇಲ್, ವಿರಾಟ್ ಕೊಹ್ಲಿ, ಫಾಫ್ ಡುಪ್ಲೆಸಿಸ್, ಗ್ಲೆನ್ ಮ್ಯಾಕ್ಸ್​ವೆಲ್, ದಿನೇಶ್ ಕಾರ್ತಿಕ್, ಮಹಿಪಾಲ್ ಲುಮ್ರೂರ್, ಅನುಜ್ ರಾವತ್ ಇರಲಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ ತಂಡ

ಪೃಥ್ವಿ ಶಾ, ಮನೀಶ್ ಪಾಂಡೆ, ಯಶ್ ದುಲ್, ರೋಮನ್ ಪಾವೆಲ್, ಲಲಿತ್ ಯಾದವ್, ಅಕ್ಷರ್ ಪಟೇಲ್,ಮುಖೇಶ್ ಕುಮಾರ್, ಮುಸ್ತಫಿಜುರ್ ರೆಹ್ಮಾನ್, ಆ್ಯನ್ರಿಚ್ ನಾರ್ಟ್ಜೆ, ಕುಲ್ದೀಪ್ ಯಾದವ್, ಇರಲಿದ್ದಾರೆ.

ಪಂದ್ಯ ಆರಂಭ: ಮಧ್ಯಾಹ್ನ 3:30ಕ್ಕೆ

ಸ್ಥಳ: ಚಿನ್ನಸ್ವಾಮಿ ಸ್ಟೇಡಿಯಂ, ಬೆಂಗಳೂರು

ಇನ್ನೂ  ಲಖನೌದ ಏಕಾನ ಸ್ಟೇಡಿಯಂನಲ್ಲಿ ಸಂಜೆ ನಡೆಯಲಿರುವ ಮತ್ತೊಂದು ಪಂದ್ಯದಲ್ಲಿ ಕೆಎಲ್ ರಾಹುಲ್ ನೇತೃತ್ವದ ಲಖನೌ ಸೂಪರ್ ಜೇಂಟ್ಸ್ ಮತ್ತು ಶಿಖರ್ ಧವನ್ ಅವರ ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಲಿದ್ದಾರೆ.

ಪಂದ್ಯ ಆರಂಭ: ಸಂಜೆ 7: 30ಕ್ಕೆ

ಸ್ಥಳ: ಏಕಾನ ಸ್ಟೇಡಿಯಂ, ಲಖನೌ

 

 

 

 

 

 

 

 

 

 

 

 

 

RELATED ARTICLES

Related Articles

TRENDING ARTICLES