ಬೆಂಗಳೂರು : ರಾಜ್ಯ ವಿಧಾನಸಭಾ ಫೀವರ್ ಒಂದೆಡೆಯಾದ್ರೆ, ಮತ್ತೊಂದು ಕಡೆ ಮುಂದಿನ ಸಿಎಂ ಯಾರು ಅನ್ನೋ ಚರ್ಚೆ. ಅದರಲ್ಲೂ ಕಾಂಗ್ರೆಸ್ ನಲ್ಲಿ ಕೂಸು ಹುಟ್ಟುವ ಮುಂಚೆಯೇ ಕುಲಾವಿ ಹೊಲಿಸುತ್ತಿದ್ದಾರೆ.
ಹೌದು, ಮುಖ್ಯಮಂತ್ರಿ ಸ್ಥಾನ(ಹುದ್ದೆ)ದ ರೇಸ್‌ನಲ್ಲಿರುವ ಕಾಂಗ್ರೆಸ್ ನಾಯಕರ ಪಟ್ಟಿಯನ್ನು ಮಾಜಿ ಸಚಿವ ಎಂ.ಬಿ ಪಾಟೀಲ್ ಬಿಡುಗಡೆ ಮಾಡಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಆರ್.ವಿ. ದೇಶಪಾಂಡೆ ಮೊದಲ ಸಾಲಿನಲ್ಲಿದ್ದಾರೆ. ಎರಡನೇ ಸಾಲಿನಲ್ಲಿ ನಾನು(ಎಂ.ಬಿ ಪಾಟೀಲ್), ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಎಚ್. ಕೆ ಪಾಟೀಲ್, ಮಾಜಿ ಡಿಸಿಎಂ ಡಾ.ಜಿ ಪರಮೇಶ್ವರ, ದಿನೇಶ್ ಗುಂಡೂರಾವ್, ಮಾಜಿ ಸಚಿವ ಕೃಷ್ಣಬೈರೇಗೌಡ, ರಾಮಲಿಂಗರೆಡ್ಡಿ ಇದ್ದಾರೆ ಎಂದು ಹೇಳಿದ್ದಾರೆ.
ಡಿಕೆಶಿಗೆ ಪಾಟೀಲ್ ಟಾಂಗ್
ಇನ್ನೂ, ಎಂ.ಬಿ ಪಾಟೀಲ್ ಮುಖ್ಯಮಂತ್ರಿ ಆಗುವ ಆಸೆ ವ್ಯಕ್ತಪಡಿದ್ದಾರೆ. ಅಲ್ಲದೆ, ಡಿ.ಕೆ ಶಿವಕುಮಾರ್ ಅವರನ್ನು ಎರಡನೇ ಸಾಲಿಗೆ ದೂಡುವ ಮೂಲಕ ಪರೋಕ್ಷವಾಗಿ ಎಂ.ಬಿ ಪಾಟೀಲ್ ಡಿಕೆಶಿಗೆ ಟಾಂಗ್ ಕೊಟ್ಟಿದ್ದಾರೆ.
ಇದನ್ನೂ ಓದಿ : ಸಿದ್ರಾಮಯ್ಯ ಅವ್ರೇ ಸುಳ್ಳು ಹೇಳೋಕೆ ನಾಚಿಕೆ ಇಲ್ಲವೆ? : ಜೆಡಿಎಸ್ ಟಾಂಗ್
ಕುಮಾರಸ್ವಾಮಿ ಹೇಳಿದ್ದೇ ಸತ್ಯ
ಬಿಜೆಪಿ ಹೈಕಮಾಂಡ್ ಲಿಂಗಾಯತ ಸಮುದಾಯವನ್ನು ಮೂಲೆಗುಂಪು ಮಾಡುತ್ತಿದೆ. ಕುಮಾರಸ್ವಾಮಿ ಹೇಳಿದ್ದಾರೆ ಅಲ್ವಾ ಅದೇ ಸತ್ಯ. ಲಿಂಗಾಯತ ಸಮುದಾಯ ಬಿಟ್ಟು ಬೇರೆ ಸಮುದಾಯಕ್ಕೆ ಮನ್ನಣೆ ಕೊಡಲು ತಯಾರಿ ನಡೆಯುತ್ತಿದೆ. ಯಾಕೆ ಬಿ.ಎಸ್ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಡೆ ಇಳಿಸಿದ್ರು? ಎಂದು ಪ್ರಶ್ನೆ ಮಾಡಿದ್ದಾರೆ.
ಲಿಂಗಾಯತ ಸಮುದಾಯದ ಪ್ರಬಲ ನಾಯಕ ಯಡಿಯೂರಪ್ಪ ಅವರನ್ನು ಸೈಡ್ ಲೈನ್ ಮಾಡಿದ್ದಾರೆ. ಬಿ.ಎಸ್ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಇಳಿಸಿ, ಬಸವರಾ0 ಬೊಮ್ಮಾಯಿಗೆ ಯಾಕೆ ಸಿಎಂ ಮಾಡಿದ್ರು? ಲಿಂಗಾಯತ ಸಮುದಾಯದವನ್ನು ಬಿಜೆಪಿ ಹೈಕಮಾಂಡ್ ಕಡೆಗಣಿಸಿದೆ ಎಂದು ಎಂ.ಬಿ ಪಾಟೀಲ್ ಕುಟುಕಿದ್ದಾರೆ.