Monday, December 23, 2024

ಡಬಲ್ ಇಂಜಿನ್ ಸರ್ಕಾರ SC-STಗೆ ಆಗುತ್ತಿದ್ದ ಅನ್ಯಾಯ ಸರಿಪಡಿಸಿದೆ : ಸಿಎಂ ಬೊಮ್ಮಾಯಿ

ಬೆಂಗಳೂರು : ದಶಕಗಳ ಕಾಲ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ಆಗುತ್ತಿದ್ದ ಅನ್ಯಾಯವನ್ನು ಡಬಲ್ ಇಂಜಿನ್ ಸರ್ಕಾರ ಸರಿಪಡಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ರಾಯಚೂರಿನಲ್ಲಿ ಪರಿಶಿಷ್ಟ ಸಮುದಾಯದ ವತಿಯಿಂದ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದ್ದಾರೆ.

ರಾಜಕೀಯ ಇಚ್ಛಾಶಕ್ತಿಯ ಕೊರತೆಯಿಂದ ಹಿಂದಿನ ಸರ್ಕಾರಗಳಿಗೆ, ಎಸ್ಸಿ, ಎಸ್ಟಿ ಸಮುದಾಯಗಳ ಮೀಸಲಾತಿ ಹೆಚ್ಚಿಸಲು ಸಾಧ್ಯವಾಗಲಿಲ್ಲ. ಕೇವಲ ಭಾಷಣದಿಂದ ಸಾಮಾಜಿಕ ನ್ಯಾಯ ತರಲು ಸಾಧ್ಯವಿಲ್ಲ. ಭಾಷಣ ಮಾಡಿದವರು ತಾವು ಮಾತ್ರ ಮುಂದುವರಿದರು. ಸಮುದಾಯ ಹಿಂದೆ ಉಳಿಯಿತು ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ : ‘ಮುಖ್ಯಮಂತ್ರಿ ಪಟ್ಟ ನನಗೆ ಬೇಡ’ : ಖರ್ಗೆ ಹೇಳಿಕೆಗೆ ‘ಡಿಕೆಶಿ, ಸಿದ್ದು’ ಫುಲ್ ಖುಷ್

102 ಜಾತಿಗಳಿಗೆ ಎಸ್ಸಿ ಮೀಸಲಾತಿ

ಭಾರತಕ್ಕೆ ಸ್ವಾತಂತ್ರ್ಯ ಬಂದ ಸಮಯದಲ್ಲಿ ಈ ದೇಶದ ಜನಸಂಖ್ಯೆ 33 ಕೋಟಿ ಹಾಗೂ ಆ ಸಮಯದಲ್ಲಿ ಕರ್ನಾಟಕದಲ್ಲಿ 6 ಜಾತಿಗಳು ಎಸ್ಸಿ ಮೀಸಲಾತಿ ಪಡೆಯುತ್ತಿದ್ದವು. ಪ್ರಸ್ತುತ ಭಾರತದ ಜನಸಂಖ್ಯೆ 133 ಕೋಟಿ ತಲುಪಿದೆ. ಕರ್ನಾಟಕದಲ್ಲಿ ಒಟ್ಟು 102 ಜಾತಿಗಳು ಎಸ್ಸಿ ಮೀಸಲಾತಿಯನ್ನು ಪಡೆಯುತ್ತಿವೆ ಎಂದು ಹೇಳಿದ್ದಾರೆ.

ಶೋಷಿತರಿಗೆ ಡಬಲ್ ಇಂಜಿನ್ ಭರವಸೆ

ರಾಜ್ಯದ ಎಸ್ಸಿ, ಎಸ್ಟಿ ಸಮುದಾಯಗಳ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಿ, ಪರಿಚ್ಛೇದ 9ಕ್ಕೆ ಸೇರಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಐತಿಹಾಸಿಕ ನಿರ್ಧಾರಕ್ಕೆ ಡಬಲ್ ಇಂಜಿನ್ ಸರ್ಕಾರದ ರಾಜಕೀಯ ಬದ್ಧತೆ ಹಾಗೂ ಇಚ್ಛಾಶಕ್ತಿ ಕಾರಣವಾಗಿದೆ. ಕೇವಲ ಡಬಲ್ ಇಂಜಿನ್ ಸರ್ಕಾರ ಮಾತ್ರ ನೊಂದವರ, ಶೋಷಿತರ, ದಮನಿತರಿಗೆ ಭರವಸೆಯಾಗಿದೆ ಎಂದು ತಿಳಿಸಿದ್ದಾರೆ.

ಸ್ವಾತಂತ್ರ್ಯ ಬಂದ ನಂತರ ಅಧಿಕಾರಕ್ಕೇರಿದ ಸರ್ಕಾರಗಳು ಎಸ್ಸಿ ಮೀಸಲಾತಿಗೆ ಸಮುದಾಯಗಳನ್ನು ಸೇರಿಸುತ್ತಾ ಹೊರಟವೇ ವಿನಃ, ಎಸ್ಸಿ ಸಮುದಾಯದ ಮೀಸಲಾತಿಯನ್ನು ಜನಸಂಖ್ಯೆಗೆ ಅನುಗುಣವಾಗಿ ಹೆಚ್ಚಿಸಲಿಲ್ಲ ಎಂದು ಸಿಎಂ ಬೊಮ್ಮಾಯಿ ಕುಟುಕಿದ್ದಾರೆ.

RELATED ARTICLES

Related Articles

TRENDING ARTICLES