Monday, December 23, 2024

ಕೆಜೆಪಿ ಕಟ್ಟಿದ್ದು ‘ನನ್ನ ಬದುಕಿನ ಅಕ್ಷಮ್ಯ ಅಪರಾಧ’ : ಯಡಿಯೂರಪ್ಪ

ಬೆಂಗಳೂರು : ನಾನು ಹಿಂದೆ ಕೆಜೆಪಿ ಪಕ್ಷ ಕಟ್ಟಿದ್ದಕ್ಕೆ ಜನರ ಬಳಿ ಕ್ಷಮೆ ಕೇಳಿದ್ದೇನೆ. ಅದು ನನ್ನ ಬದುಕಿನಲ್ಲಿ ಮಾಡಿದ ಅಕ್ಷಮ್ಯ ಅಪರಾಧ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನನ್ನ ಸಂಪೂರ್ಣ ಬದುಕನ್ನು ಬಿಜೆಪಿ ಪಕ್ಷ ಹಾಗೂ ದೇಶಕ್ಕೆ ಮುಡಿಪಿಟ್ಟಿದ್ದೇನೆ. ಬಿಜೆಪಿ ಅಧಿಕಾರಕ್ಕೆ ಬರುವುದನ್ನು ತಡೆಯಲು ಯಾರಿಂದಲೂ ಆಗಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಹೊಸಮುಖಗಳಿಗೆ ಅವಕಾಶ ಕೊಟ್ಟಿದೆ. ಎಲ್ಲಾ ಸಮುದಾಯಗಳ ಕೊಂಡೊಯ್ಯುವ ಪ್ರಯತ್ನ ಮಾಡಿದ್ದೇವೆ. ಕಾಂಗ್ರೆಸ್ ಕೇವಲ ವೋಟ್​ ಬ್ಯಾಂಕ್​ ರಾಜಕಾರಣ ಮಾಡುತ್ತಿದೆ. ಮೀಸಲಾತಿ ಹೆಚ್ಚಿಸಿ ಅನೇಕ ದಶಕಗಳ ಬೇಡಿಕೆ ಈಡೇರಿಸಿದ್ದೇವೆ. ಮೀಸಲಾತಿ ವಿಚಾರದಲ್ಲಿ ಯಾರಿಗೂ ಅನ್ಯಾಯ ಮಾಡಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ನನ್ನನ್ನು ಜೈಲಿಗೆ ಹಾಕಿ, ಅನರ್ಹ ಮಾಡಿ ನಾನು ಹೆದರಲ್ಲ : ರಾಹುಲ್ ಗಾಂಧಿ ಗುಡುಗು

ಸವದಿ, ಶೆಟ್ಟರ್ ಅನ್ನು ಕ್ಷಮಿಸಲ್ಲ

ಬಿಜೆಪಿ ಪಕ್ಷ ಅವರನ್ನು ಯಾವ ಅನ್ಯಾಯವೂ ಮಾಡಿಲ್ಲ. ನಿವೃತ್ತಿಯಾಗಿ ಎಂದು ಜಗದೀಶ್ ಶೆಟ್ಟರ್ ಅವರಿಗೆ ಯಾರೂ ಹೇಳಿಲ್ಲ. ನಿನ್ನೆ ಪ್ರಧಾನ್, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹುಬ್ಬಳ್ಳಿಗೆ ತೆರಳಿ ಶೆಟ್ಟರ್ ಮನವೊಲಿಸುವ ಪ್ರಯತ್ನ ಮಾಡಿದರು. ಕೇಂದ್ರದಲ್ಲಿ ಅವಕಾಶ, ಕುಟುಂಬದಲ್ಲಿ ಟಿಕೆಟ್ ಭರವಸೆ ಕೊಟ್ಟಿದ್ದರು. ಆದರೂ, ಅವರು ಬಿಜೆಪಿ ಬಿಟ್ಟಿದಾರೆ. ಜನರು ಅವರನ್ನು ಕ್ಷಮಿಸಲ್ಲ ಎಂದು ಹೇಳಿದ್ದಾರೆ.

ನಾನು ಜಗದೀಶ್ ಶೆಟ್ಟರ್ ಅವರ ಹತ್ತಿರ ಎರಡ್ಮೂರು ಬಾರಿ ಮಾತಾಡಿದೆ. ಯಾರೇ ಪಕ್ಷ ಬಿಟ್ಟರೂ ನಮಗೆ ಸಮಸ್ಯೆ ಆಗಲ್ಲ. ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ್ ಸವದಿ ಅವರು ಮತ್ತೆ ಪಕ್ಷಕ್ಕೆ ಬಂದರೇ ನಾನು ಸ್ವಾಗಿತಿಸುತ್ತೇನೆ ಎಂದು ಇದೇ ವೇಳೆ ಬಿ.ಎಸ್​ ಯಡಿಯೂರಪ್ಪ ಮರಳಿ ಪಕ್ಷಕ್ಕೆ ಬರುವಂತೆ ಆಹ್ವಾನ ನೀಡಿದ್ದಾರೆ.

RELATED ARTICLES

Related Articles

TRENDING ARTICLES