Friday, May 17, 2024

ಕಾಂಗ್ರೆಸ್ ನತ್ತ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಚಿತ್ತ…!

ಹುಬ್ಬಳಿ/ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹೊಸ್ತಿನಲ್ಲಿಯೇ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ. ಇಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿರುವ ಶೆಟ್ಟರ್ ಇಂದು ಶಿರಸಿಗೆ ಹೋಗಿ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿಗೆ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ.

ಹೌದು, ಬಿಜೆಪಿ ನಾಯಕರ ಸಂಧಾನ ಸಭೆ ವಿಫಲವಾದ ಹಿನ್ನಲೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದು, ಅವರ ಮುಂದಿನ ರಾಜಕೀಯ ನಡೆ ಯಾವ ಕಡೆ ಎಂಬುವುದು ಬಾರಿ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

ಅದ್ರೆ ಕಾಂಗ್ರೆಸ್ ಸೇರುವ ಬಗ್ಗೆ ಕೈ ಹಿರಿಯ ಮುಖಂಡ ಶಾಸಕ ಶಾಮನೂರ್ ಶಿವಶಂಕರಪ್ಪ ಜತೆ ಮಾತುಕತೆ ಪ್ರಾರಂಭಿಸಿದ್ದಾರೆ ಎಂದು ಶೆಟ್ಟರ್ ಆಪ್ತ ವಲಯ ಖಚಿತ ಪಡಿಸಿದೆ.

ಇನ್ನೂ ಶೆಟ್ಟರ್ ಅವರಿಗೆ ಹುಬ್ಬಳ್ಳಿ-ಧಾರವಾಡ ವಿಧಾನಸಭೆ ಟಿಕೆಟ್ ಕೈ ತಪ್ಪಿದ್ದ ಕಾರಣ, ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದಾರೆ. ನಾಳೆ ಶಿರಸಿಗೆ ತೆರಳಿ ಸ್ಪೀಕರ್ ಕಾಗೇರಿ ಅವರಿಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಳಿಕ ಪಕ್ಷಕ್ಕೆ ರಾಜೀನಾಮೆ ನೀಡಲಿದ್ದಾರೆ.

ಇದನ್ನೂ ಓದಿ : ‘ಸತ್ಯವೇ ನನ್ನ ಅಸ್ತ್ರ, ಸತ್ಯವೇ ನನಗೆ ಆಸರೆ’ : ರಾಹುಲ್ ಗಾಂಧಿ

ನನ್ನ ವಿರುದ್ದ ಷಡ್ಯಂತ್ರ ಮಾಡಿ ಟಿಕೆಟ್ ತಪ್ಪಿಸುವ ಕೆಲಸ ಮಾಡಲಾಗಿದೆ,ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಪಕ್ಷೇತರನಾಗಿ ಸ್ಪರ್ಧಿಸಬೇಕೋ ಅಥವಾ ಬೇರೆ ನಿರ್ಧಾರ ಕೈಗೊಳ್ಳಬೇಕೆಂಬ ಬಗ್ಗೆ ಕಾರ್ಯಕರ್ತರ ಅಭಿಪ್ರಾಯ ಪಡೆದು ತೀರ್ಮಾನ ಮಾಡುತ್ತೇನೆ’ ಎಂದು ಹೇಳಿದರು.

ಇನ್ನೊಂದೆಡೆಗೆ ಹುಬ್ಬಳ್ಳಿ-ಧಾರವಾಡ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷವು ಅಭ್ಯರ್ಥಿಯನ್ನು ಘೋಷಿಸದ ಹಿನ್ನೆಲೆಯಲ್ಲಿ ಜಗದೀಶ್ ಶೆಟ್ಟರ್ ಅವರನ್ನು ಪಕ್ಷದ ಅಭ್ಯರ್ಥಿಯನ್ನಾಗಿ ಕಣಕ್ಕೆ ಇಳಿಸುವ ಸಾಧ್ಯತೆ ಇದೆ ಎಂದು ಸುದ್ದಿ ಮೂಲಗಳು ತಿಳಿಸಿವೆ.

RELATED ARTICLES

Related Articles

TRENDING ARTICLES