Wednesday, January 22, 2025

ಕಾಂಗ್ರೆಸ್ ನವರು ‘ಬಿಜೆಪಿ ಅಭ್ಯರ್ಥಿಗಳ ಕೈ ಕಾಲು’ ಹಿಡಿಯುತ್ತಿದ್ದಾರೆ : ಗೋವಿಂದ ಕಾರಜೋಳ

ಬೆಂಗಳೂರು : ಕಾಂಗ್ರೆಸ್ ನಾಯಕರು ಕೈ ಕಾಲು ಹಿಡಿದು ಬಿಜೆಪಿ ಪಕ್ಷದ ಅಭ್ಯರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದಾರೆ ಎಂದು ಸಚಿವ ಗೋವಿಂದ ಎಂ.ಕಾರಜೋಳ ಲೇವಡಿ ಮಾಡಿದ್ದಾರೆ.

ರಾಯಚೂರಿನಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್​​, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬಿಜೆಪಿ ತೊರೆದ ಬಗ್ಗೆ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಸಚಿವ ಗೋವಿಂದ ಕಾರಜೋಳ, ಆತುರದ ನಿರ್ಧಾರ ನಮ್ಮ ಮೂಗನ್ನು ನಾವೇ ಕುಯ್ದುಕೊಂಡಂತೆ ಎಂದು ಹೇಳಿದ್ದಾರೆ.

ಕಾಂಗ್ರೆಸ್​ ಪಕ್ಷಕ್ಕೆ ನೆಲೆಯಿಲ್ಲ. ಹಾಗಾಗಿ ಅಭ್ಯರ್ಥಿಗಾಗಿ ಹುಡುಕುತ್ತಿದೆ. ಹೀಗಾಗಿ, ಬಿಜೆಪಿ ಟಿಕೆಟ್ ವಂಚಿತರನ್ನು ಕರೆದೊಯ್ಯುತ್ತಿದೆ. ಕೈ ಕಾಲು ಹಿಡಿದು ಅಭ್ಯರ್ಥಿಗಳನ್ನು ಕರೆದೊಯ್ಯುತ್ತಿದ್ದಾರೆ ಎಂದು ಗೋವಿಂದ ಕಾರಜೋಳ ಕುಟುಕಿದ್ದಾರೆ.

ಇದನ್ನೂ ಓದಿ : ಕೆಜೆಪಿ ಕಟ್ಟಿದ್ದು ‘ನನ್ನ ಬದುಕಿನ ಅಕ್ಷಮ್ಯ ಅಪರಾಧ’ : ಯಡಿಯೂರಪ್ಪ

ಆತುರದ ನಿರ್ಧಾರ ಕೈಗೊಳ್ಳಬೇಡಿ

ಬಿಜೆಪಿ ಟಿಕೆಟ್ ವಂಚಿತ ಯಾವುದೇ ನಾಯಕರು ಅವಸರದ ನಿರ್ಧಾರ ಕೈಗೊಳ್ಳಬಾರದು. ಕೈ ಮುಗಿದು ಕೇಳುತ್ತೇನೆ. ಯಾರೂ ಆತುರದ ನಿರ್ಧಾರ ಕೈಗೊಳ್ಳಬೇಡಿ. ಆತುರದ ನಿರ್ಧಾರ ನಮ್ಮ ಮೂಗನ್ನು ನಾವೇ ಕುಯ್ದುಕೊಂಡಂತೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಶೆಟ್ಟರ್

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಬೆಂಗಳೂರಿಗೆ ಬಂದಿದ್ದು, ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ. ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಅವರು ಕಳುಹಿಸಿದ ವಿಶೇಷ ವಿಮಾನದಲ್ಲಿ ಜಗದೀಶ್ ಶೆಟ್ಟರ್ ಬೆಂಗಳೂರಿಗೆ ಆಗಮಿಸಿದ್ದಾರೆ. ಈ ಸಂದರ್ಭದಲ್ಲಿ ಉದ್ಯಮಿ ಯು.ಬಿ.ಶೆಟ್ಟಿ, ಹುಬ್ಬಳ್ಳಿ-ಧಾರವಾಡ ಸೆಂಟ್ರಲ್​ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ರಜತ್ ಉಳ್ಳಾಗಡ್ಡಿ ಸಹ ಜೊತೆಗಿದ್ದಾರೆ ಎನ್ನಲಾಗಿದೆ.

RELATED ARTICLES

Related Articles

TRENDING ARTICLES