Monday, December 23, 2024

ಬಿಜೆಪಿ ಒಡೆದು, ಕೆಜೆಪಿ ಕಟ್ಟಿದ್ದು ಯಾಕೆ? : ಯಡಿಯೂರಪ್ಪಗೆ ಶೆಟ್ಟರ್ ಟಾಂಗ್

ಹುಬ್ಬಳ್ಳಿ : ಬಿಜೆಪಿ ಟಿಕೆಟ್ ಕೈ ತಪ್ಪಿರುವುದರಿಂದ ಕಮಲ ನಾಯಕರು ಬಿಜೆಪಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ಕೆರಳಿ ಕೆಂಡವಾಗಿದ್ದಾರೆ. ಜಗದೀಶ್ ಶೆಟ್ಟರ್ ನಿರ್ಧಾರವನ್ನು ಪ್ರಶ್ನಿಸಿರುವುದಕ್ಕೆ ಶೆಟ್ಟರ್ ಸಹ ಟಾಂಗ್ ಕೊಟ್ಟಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನನ್ನ ನಿರ್ಧಾರವನ್ನು ಪ್ರಶ್ನಿಸುತ್ತಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು 2012ರಲ್ಲಿ ಬಿಜೆಪಿ ಒಡೆದು, ಕೆಜೆಪಿ ಪಕ್ಷ ಕಟ್ಟಿದ್ದು ಯಾಕೆ? ಎಂದು ಜಗದೀಶ್ ಶೆಟ್ಟರ್ ಟಾಂಗ್ ಕೊಟ್ಟಿದ್ದಾರೆ.

ಹುಬ್ಬಳ್ಳಿ-ಧಾರವಾಡದಲ್ಲಿ ನಾನೇ ಬೆಳೆಸಿದ ಹುಡುಗರು ಇದ್ದಾರೆ. ಅವರನ್ನು ಎಷ್ಟು ದಿನ ಅಂತಾ ಹಿಡಿದಿಟ್ಟುಕೊಳ್ಳಲು ಆಗುತ್ತದೆ. ದೈಹಿಕವಾಗಿ ಬಿಜೆಪಿಯಲ್ಲಿದ್ದರೂ ಮಾನಸಿಕವಾಗಿ ನನ್ನ ಜತೆಗಿದ್ದಾರೆ. ಇದುವರೆಗೆ ಬೇರೆ ಪಕ್ಷಗಳ ನಾಯಕರು ನನ್ನನ್ನು ಸಂಪರ್ಕಿಸಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಕಾಂಗ್ರೆಸ್ ನತ್ತ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಚಿತ್ತ!

ಸಂಜೆ ಬಳಿಕ ನಿರ್ಧಾರ ತಿಳಿಸುವೆ

ನಾನು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಬೇಕು. ಬಿಜೆಪಿಗೆ ರಾಜೀನಾಮೆ ನೀಡಿದ ನಂತರ ಮುಂದಿನ ತೀರ್ಮಾನ ಮಾಡುತ್ತೇನೆ. ಇಂದು ಸಂಜೆ ಬೆಂಗಳೂರಿಗೆ ತೆರಳಿದ ನಂತರ ಒಂದು ನಿರ್ಧಾರಕ್ಕೆ ಬಂದು ಮಾಹಿತಿ ನೀಡುತ್ತೇನೆ ಎಂದು ಜಗದೀಶ್ ಶೆಟ್ಟರ್ ಮಾಹಿತಿ ನೀಡಿದ್ದಾರೆ.

ನಾನು ಹುಬ್ಬಳ್ಳಿ-ಧಾರವಾಡ ಸೆಂಟ್ರಲ್​ ಕ್ಷೇತ್ರದ ಟಿಕೆಟ್ ಮಾತ್ರ ಕೇಳಿದ್ದೆ. ಆದರೆ, ರಾಜ್ಯಸಭೆಗೆ ಕಳಿಸುವುದಾಗಿ ಬಿಜೆಪಿ ನಾಯಕರು ಹೇಳಿದ್ದಾರೆ. ಯಾಕೆ ಮೂಲೆಗೆ ಕೂರಿಸಲು ಯತ್ನಿಸುತ್ತಿದ್ದೀರಿ ಎಂದು ಪ್ರಶ್ನಿಸಿದೆ. ನಾನು ಕೇಳುತ್ತಿರುವುದು ಒಂದು ಟಿಕೆಟ್​ ಎಂದರೂ ಒಪ್ಪಲೇ ಇಲ್ಲ. ಹೀಗಾಗಿ, ಅನಿವಾರ್ಯವಾಗಿ ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

RELATED ARTICLES

Related Articles

TRENDING ARTICLES