Monday, December 23, 2024

‘ಜೈ ಭಾರತ್‌’ ಸಮಾವೇಶಕ್ಕೆ ರಾಹುಲ್‌ ಗಾಂಧಿ ಭಾಗಿ

ಬೆಂಗಳೂರು : ‘ಕೈ’ ನಾಯಕ ರಾಹುಲ್​ ಗಾಂಧಿ ಇಂದು ರಾಜ್ಯಕ್ಕೆ ಆಗಮಿಸಲಿದ್ದಾರೆ. ಕೋಲಾರದಲ್ಲಿ ನಡೆಯಲಿರುವ ಜೈ ಭಾರತ್‌ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ಹೌದು, ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ ಎರಡು ದಿನಗಳ ಪ್ರವಾಸಕ್ಕಾಗಿ ರಾಜ್ಯಕ್ಕೆ ಆಗಮಿಸಲಿದ್ದು, ಮೊದಲ ದಿನ ಕೋಲಾರದಲ್ಲಿ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಂದ ಕನಿಷ್ಠ ಒಂದು ಲಕ್ಷಕ್ಕೂ ಅಧಿಕ ಕಾರ್ಯಕರ್ತರು ಭಾಗವಹಿಸುವ ನಿರೀಕ್ಷೆ ಇದೆ.

ಇದನ್ನೂ ಓದಿ : ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳಿದ ವಿ.ಶ್ರೀನಿವಾಸ ಪ್ರಸಾದ್

ಇನ್ನೂ ಕಳೆದ ಲೋಕಸಭಾ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಕೋಲಾರಕ್ಕೆ ಬಂದಿದ್ದ ರಾಹುಲ್‌ ಗಾಂಧಿ ಅವರು ‘ಮೋದಿ’ ಉಪನಾಮದ ಬಗ್ಗೆ ಲೇವಡಿ ಮಾಡಿದ್ದರು. ಬಳಿಕ ಆ ವಿಚಾರ ಕೋರ್ಟ್‌ ಮೇಟ್ಟಿಲೇರಿ, ರಾಹುಲ್‌ ಅವರಿಗೂ ಎರಡು ವರ್ಷ ಶಿಕ್ಷೆಯೂ ಪ್ರಕಟಗೊಂಡ ಹಿನ್ನೆಲೆಯಲ್ಲಿ ಕಾನೂನು ಪ್ರಕಾರ ಅವರ ಲೋಕಸಭಾ ಸದಸ್ಯತ್ವ ಅನರ್ಹಗೊಂಡಿದೆ. ಈ ವಿಚಾರ ಈಗ ಸುಪ್ರೀಂಕೋರ್ಟ್‌ನಲ್ಲಿದೆ. ಈ ಮಧ್ಯೆ, ಎಲ್ಲಿ ರಾಹುಲ್‌ ಗಾಂಧಿ ಅವರು ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದರೋ ಅಲ್ಲಿಂದಲೇ ಹೋರಾಟ ಆರಂಭಿಸಲು ಕಾಂಗ್ರೆಸ್‌ ಮುಂದಾಗಿದೆ.

ಬೆಳಗ್ಗೆ 11.30ಕ್ಕೆ ರಾಹುಲ್‌ ಎಂಟ್ರಿ-ಪ್ರಿಯಾಂಕಾ ಗಾಂಧಿಯೂ ಭಾಗಿ

ಬೆಳಗ್ಗೆ 11.30ಕ್ಕೆ ರಾಹುಲ್‌ ಗಾಂಧಿ ಆಗಮಿಸಲಿದ್ದು, ಮಧ್ಯಾಹ್ನ 1.30ರಿಂದ 2 ಗಂಟೆಯವರೆಗೆ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಇವರೊಂದಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ, ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌, ಕಾಂಗ್ರೆಸ್‌ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು, ರಾಷ್ಟ್ರ ಹಾಗೂ ರಾಜ್ಯದ ನಾಯಕರು ಪಾಲ್ಗೊಳ್ಳಲಿದ್ದಾರೆ.

 

 

RELATED ARTICLES

Related Articles

TRENDING ARTICLES