Wednesday, January 22, 2025

ನಾಳೆ ದೊಡ್ಡಬಳ್ಳಾಪುರ ಅಭ್ಯರ್ಥಿ ಧೀರಜ್ ಮುನಿರಾಜು ನಾಮಪತ್ರ ಸಲ್ಲಿಕೆ

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆ ಅಧಿಸೂಚನೆ ಪ್ರಕಟವಾಗಿದ್ದು, ಈಗಾಗಲೇ ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಆರಂಭಿಸಿದ್ದಾರೆ. ಅದರಂತೆ, ನಾಳೆ ಬಿಜೆಪಿ ಅಭ್ಯರ್ಥಿಯಾಗಿ ಧೀರಜ್ ಮುನಿರಾಜು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಈಗಾಗಲೇ ದೊಡ್ಡಬಳ್ಳಾಪುರದಲ್ಲಿ ಅಬ್ಬರದ ಪ್ರಚಾರ ಶುರು ಮಾಡಿರುವ ಯುವ ನಾಯಕ ಹಾಗೂ ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜು ಏಪ್ರಿಲ್ 18ರಂದು ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಅಧಿಕೃತವಾಗಿ ನಾಮಪತ್ರ ಸಲ್ಲಿಸಲಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಧೀರಜ್ ಮುನಿರಾಜು ಅವರು, ದೊಡ್ಡಬಳ್ಳಾಪುರ ಮಹಾ ಜನತೆಯ ಬೆಂಬಲದೊಂದಿಗೆ ಮೆರವಣಿಗೆಯಲ್ಲಿ ಸಾಗಿ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಅಧಿಕೃತ ಬಿಜೆಪಿ ಅಭ್ಯರ್ಥಿಯಾಗಿ ನಾಳೆ ನಾನು ನಾಮಪತ್ರ ಸಲ್ಲಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ನಾಮಪತ್ರ ಸಲ್ಲಿಕೆಗೂ ಮುನ್ನ ದೇವರ ಆಶೀರ್ವಾದ ಪಡೆದ ರಾಮಚಂದ್ರಗೌಡ

ಬೃಹತ್ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಕೆ

ನಾಮಪತ್ರ ಸಲ್ಲಿಕೆ ವೇಳೆ ಪಕ್ಷದ ಮುಖಂಡರು,ಕಾರ್ಯಕರ್ತರು ಹಾಗೂ ಕ್ಷೇತ್ರದ ಜನರು ಬೃಹತ್ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ನನಗೆ ಬೆಂಬಲ ಸೂಚಿಸಿ ಆಶೀರ್ವದಿಸಿ ಎಂದು ಧೀರಜ್ ಮುನಿರಾಜು ಮನವಿ ಮಾಡಿದ್ದಾರೆ.

ನಾಳೆ ಬೆಳಗ್ಗೆ 11 ಗಂಟೆಗೆ ದೊಡ್ಡಬಳ್ಳಾಪುರದ ನೆಲದಾಂಜನೇಯ ಸ್ವಾಮಿ ದೇವಸ್ಥಾನದಿಂದ ಮೆರವಣಿಗೆ ಪ್ರಾರಂಭವಾಗಲಿದೆ. ಬೃಹತ್ ಮೆರವಣಿಗೆ ಮೂಲಕ ತೆರಳಿ ಪಕ್ಷದ ಮುಖಂಡರ ಸಮ್ಮುಖದಲ್ಲಿ ಉಮೇದುವಾರಿಗೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.

RELATED ARTICLES

Related Articles

TRENDING ARTICLES