Monday, December 23, 2024

Jagadish Shettar: ಜಗದೀಶ್​ ಶೆಟ್ಟರ್​ ಇಂದೇ ಕಾಂಗ್ರೆಸ್​​ ಸೇರೋದು ಫಿಕ್ಸ್..​​?

ಬೆಂಗಳೂರು : ಬಿಜೆಪಿ ಜೊತೆಗಿನ ನಾಲ್ಕು ದಶಕಗಳ ನಂಟನ್ನ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಕಳಚಿ ಕೊಂಡಿದ್ದಾರೆ. ಈ ಬಾರೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಅವಕಾಶ ನೀಡದ್ದಕ್ಕೆ ಮುಖಂಡರ ವಿರುದ್ದ ಗುಡುಗಿ ಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಮಲ ಪಕ್ಷಕ್ಕೆ ಗುಡ್‌ ಬೈ ಹೇಳಿದ್ದಾರೆ.

ಹೌದು, ಮಾಜಿ ಡಿಸಿಎಂ ಬೆಳಗಾವಿಯ ಪ್ರಭಾವಿ ಬಿಜೆಪಿ ನಾಯಕ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆಯಾದ ಬೆನ್ನಲ್ಲೇ ಮತ್ತೊಂದು ದೊಡ್ಡ ವಿಕೆಟ್ ಪತನವಾಗಿದ್ದು,ಬಿಜೆಪಿಗೆ ಶಾಕ್​ ಆಗಿದೆ. ಇನ್ನೂ ಜಗದೀಶ್ ಶೆಟ್ಟರ್ ರಾತ್ರಿ ಇಡೀ ಕಾಂಗ್ರೆಸ್​ ನಾಯಕರ ಜೊತೆ ಸತತ 5 ಗಂಟೆಗಳ ಕಾಲ ಸುದೀರ್ಘ ಚರ್ಚೆ ನಡೆಸಿದ್ದಾರೆ.

ಕೈ ಹಿಡಿಯಲು ಇದೇ ಮುಹೂರ್ತ ಫಿಕ್ಸ್

ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ 7ನೇ ಬಾರಿ ಸ್ಪರ್ಧಿಸಲು ಟಿಕೆಟ್ ನೀಡಲಿಲ್ಲ ಅನ್ನೋ ಕಾರಣಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಮಲ ಪಕ್ಷಕ್ಕೆ ಗುಡ್‌ ಬೈ ಹೇಳಿದ್ದು, ಕಾಂಗ್ರೆಸ್ ಸೇರ್ಪಡೆಗೆ ಸಜ್ಜಾಗಿದ್ದಾರೆ.

ನಿರೀಕ್ಷೆಯಂತೆ ಶೆಟ್ಟರ್‌ಗೆ ಗಾಳ ಹಾಕಿ ಕಾದು ಕುಳಿತ್ತಿದ್ದ ಕೈ ನಾಯಕರು ಫುಲ್ ಅಲರ್ಟ್ ಆಗಿದ್ರು. ಕಾಂಗ್ರೆಸ್‌ನ ಪ್ರಭಾವಿ ವೀರಶೈವ ಲಿಂಗಾಯತ ಮುಖಂಡ ಶಾಮನೂರು ಶಿವಶಂಕರಪ್ಪರನ್ನೇ ಮುಂದೆ ಬಿಟ್ಟಿದ್ರು. ಬೆಂಗಳೂರಿನ ರಿಚ್ಮಂಡ್​ಟೌನ್​ನಲ್ಲಿರುವ ಶಾಮನೂರು ಶಿವಶಂಕರಪ್ಪ ಅವರ ಸ್ಕೈಗಾರ್ಡನ್ ಅಪಾರ್ಟ್​ಮೆಂಟ್‌ನ ಫ್ಲ್ಯಾಟ್‌ನಲ್ಲಿ ಸಭೆ ನಡೆಸಿ ಮಾತುಕತೆ ನಡೆಸಿದ್ದಾರೆ.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ, ಸಿಎಲ್‌ಪಿ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಉಪಸ್ಥಿತಿಯಲ್ಲಿ ನಿನ್ನೆ ರಾತ್ರಿ ಇಡೀ ಶೆಟ್ಟರ್ ಕಾಂಗ್ರೆಸ್‌ ಸೇರ್ಪಡೆ ಕುರಿತಂತೆ ಸುದೀರ್ಘ ಐದು ಗಂಟೆಗಳ ಕಾಲ ರಹಸ್ಯ ಚರ್ಚೆ ನಡೆಯಿತು.

ಬಿಜೆಪಿ ವರಿಷ್ಠರ ಸಂಧಾನಕ್ಕೆ ಡೋಂಟ್ ಕೇರ್ ಅಂದಿರೋ ಶೆಟ್ಟರ್ ಕಾಂಗ್ರೆಸ್ ಸೇರೋಕೆ ಮುಹೂರ್ತ ಫಿಕ್ಸ್ ಆಗಿದೆ. ಕೆಪಿಸಿಸಿ ಕಚೇರಿಯಲ್ಲಿ ಇಂದು ಬೆಳಗ್ಗೆ 8.15ಕ್ಕೆ ಶೆಟ್ಟರ್ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಇತರೆ ಕಾಂಗ್ರೆಸ್ ನಾಯಕರು ಶೆಟ್ಟರ್‌ರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲಿದ್ದಾರೆ.

 

RELATED ARTICLES

Related Articles

TRENDING ARTICLES