Friday, November 22, 2024

ಅಧಿಕೃತವಾಗಿ ಕಾಂಗ್ರೆಸ್​ ಸೇರಿದ ಜಗದೀಶ್​ ಶೆಟ್ಟರ್​​​

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್​ ಶೆಟ್ಟರ್​ ಅವರು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.

ಹೌದು ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಜಗದೀಶ್​ ಶೆಟ್ಟರ್​​​ ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿ ಕಟ್ಟಿ ನಾನು ಬೆಳೆಸಿದ್ದೇನೆ. ಬಿಜೆಪಿ ನನಗೆ ಎಲ್ಲಾ ಗೌರವ ಹಾಗೂ ಸ್ಥಾನಮಾನ ಕೊಟ್ಟಿದೆ. ಅದಕ್ಕೆ ಪ್ರತಿಯಾಗಿ ಬಿಜೆಪಿ ಕಟ್ಟಿ ಬೆಳೆಸುವ ಕೆಲಸ ನಾನು ಮಾಡಿದ್ದೇನೆ. ಪಕ್ಷ ಕೊಟ್ಟ ಎಲ್ಲಾ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸಿದ್ದೇನೆ. ಅದ್ರೆ ಟಿಕೆಟ್​ ಇಲ್ಲ ಎಂದಾಗ ನನಗೆ ಆಘಾತವಾಯಿತು. ಕಳೆದ 6 ತಿಂಗಳಿನಿಂದ ನನ್ನನ್ನು ಕಡೆಗಣಿಸಿದ್ದರು ಅದಕ್ಕಾಗಿ ನಾನು ಬಿಕೆಪಿ ಪಕ್ಷ ತೊರೆದಿದ್ದಾನೆ. ಎಂದು ಕಾಂಗ್ರೆಸ್ ಸೇರ್ಪಡೆ ಬಳಿಕ ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಹೇಳಿಕೆ ನೀಡಿದ್ದಾರೆ.

ಮೂರು ದಶಕಗಳ ಹೆಚ್ಚಿನ ನಂಟು ಮುರಿದುಕೊಂಡ ಮಾಜಿ ಸಿಎಂ

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್(Jagadish Shettar) ಅವರು ಅಧಿಕೃತವಾಗಿ ಬಿಜೆಪಿ ತೊರೆದು ಕಾಂಗ್ರೆಸ್(Congress) ಸೇರ್ಪಡೆಯಾದರು. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಕಾಂಗ್ರೆಸ್​ ಸೇರಿ ಇದರೊಂದಿಗೆ 35 ವರ್ಷಕ್ಕೂ ಹೆಚ್ಚು ಕಾಲ ಬಿಜೆಪಿಯೊಂದಿಗಿ ನಂಟು ಕಳೆದುಕೊಂಡರು.

RELATED ARTICLES

Related Articles

TRENDING ARTICLES