Monday, December 23, 2024

‘ಡಿಕೆಶಿ ಬಹಳ ಲಕ್ಕಿ’ ಇದ್ದಾನೆ, ಆದ್ರೆ ಸ್ವಲ್ಪ ‘ಮುಂಗೋಪಿ’ : ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಶಂಸೆಯ ಮಾತುಗಳನ್ನಾಡಿದ್ದಾರೆ.

ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿ ನಿರ್ಮಿಸಿರುವ ಇಂದಿರಾಗಾಂಧಿ ಭವನ ಉದ್ಘಾಟಿಸಿದ ಬಳಿಕ ಭಾಷಣ ಮಾಡಿರುವ ಮಲ್ಲಿಕಾರ್ಜುನ ಖರ್ಗೆ ಅವರು ಡಿ.ಕೆ ಶಿವಕುಮಾರ್​ ಅವರನ್ನು ಹಾಡಿ ಹೊಗಳಿದ್ದಾರೆ.

ಡಿ.ಕೆ ಶಿವಕುಮಾರ್ ಬಹಳ ಲಕ್ಕಿ ಇದ್ದಾನೆ, ಹೈಟೆಕ್ ಆಗಿ ಕಟ್ಟಡ ನಿರ್ಮಿಸಿದ್ದಾರೆ. ಇಡೀ ದೇಶದಲ್ಲಿ ಈ ರೀತಿಯ ಹೈಟೆಕ್ ಕಚೇರಿ ಕಾಂಗ್ರೆಸ್‌ಗೆ ಇಲ್ಲ. ಈ ಕಚೇರಿಯನ್ನು ಉದ್ಘಾಟಿಸುತ್ತಿರುವುದಕ್ಕೆ ಸಂತೋಷವಾಗುತ್ತಿದೆ ಎಂದು ಖರ್ಗೆ ಅಭಿಪ್ರಾಯಪಟ್ಟಿದ್ದಾರೆ.

ಸಿದ್ದು ಮುಂದಯೇ ಡಿಕೆಶಿ ಕೊಂಡಾಡಿದ ಖರ್ಗೆ

ಡಿ.ಕೆ ಶಿವಕುಮಾರ್ ಸ್ವಲ್ಪ ಮುಂಗೋಪಿ ಅನ್ನೋದು ಬಿಟ್ರೆ ಒಳ್ಳೆಯ ಕೆಲಸಗಾರ. ಡಿ.ಕೆ.ಶಿವಕುಮಾರ್‌ ಹಿಡಿದ ಕೆಲಸ ಬಿಡದೆ ಮಾಡಿ ಮುಗಿಸುತ್ತಾನೆ. ಸಿದ್ದರಾಮಯ್ಯ ಸೇರಿ ಎಲ್ಲರನ್ನೂ ಒಗ್ಗೂಡಿಸಿಕೊಂಡು ಕೆಲಸ ಮಾಡ್ತಾರೆ ಎಂದು ಸಿದ್ದರಾಮಯ್ಯ ಮುಂದಯೇ ಕೊಂಡಾಡಿದ್ದಾರೆ.

ಇದನ್ನೂ ಓದಿ : ಜಗದೀಶ್ ಶೆಟ್ಟರ್ ಸೇರ್ಪಡೆಯಿಂದ ಕಾಂಗ್ರೆಸ್​ಗೆ ಮತ್ತಷ್ಟು ಬಲ : ಸಿದ್ದರಾಮಯ್ಯ

ಸೋನಿಯಾಗೆ ಡಿಕೆಶಿ ಅಂದ್ರೆ ಇಷ್ಟ

ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿಗೆ ಡಿಕೆಶಿ ಅಂದ್ರೆ ಇಷ್ಟ. ಕಟ್ಟಡಕ್ಕೆ ಇಂದಿರಾ ಗಾಂಧಿ ಹೆಸರಿಡಲು ನಾನೇ ಹೇಳಿದ್ದೆ. ರಾಜ್ಯದಲ್ಲಿ ಕಾಂಗ್ರೆಸ್ 150 ಸೀಟ್ ಗೆಲ್ಲಬೇಕು ಅಂತಾ ರಾಹುಲ್ ಗಾಂಧಿ ಹೇಳಿದ್ದಾರೆ ಎಂದು ತಿಳಿಸಿದ್ದಾರೆ.

ರಾಹುಲ್ ಗಾಂಧಿ ಅವರು ಸುಮ್ಮನೆ ನಂಬರ್‌ಗಳನ್ನು ಹೇಳಲ್ಲ. ನಮ್ಮ ಗ್ಯಾರಂಟಿಗಳ ಮೂಲಕ 150ಕ್ಕೂ ಹೆಚ್ಚು ಸೀಟ್ ಗೆಲ್ಲಬೇಕು. ಅಧಿಕಾರಕ್ಕೆ ಬಂದ ಮೇಲೆ ಗ್ಯಾರಂಟಿಗಳನ್ನು ಜಾರಿಗೆ ತರಬೇಕು. ಈ ಮೂಲಕ ಜನರ ವಿಶ್ವಾಸಗಳಿಸಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

RELATED ARTICLES

Related Articles

TRENDING ARTICLES