ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಈಗಾಗಲೇ ಎಲ್ಲ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿವೆ. ಆದರೆ, ಕೆಲವು ಕ್ಷೇತ್ರಗಳಿಗೆ ಮಾತ್ರ ಅಭ್ಯರ್ಥಿಗಳನ್ನು ಘೋಷಿಸಿಲ್ಲ. ಅಳೆದು ತೂಗಿ ಉಳಿದ ಕ್ಷೇತ್ರಗಳಲ್ಲಿ ಸೂಕ್ತ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಮುಂದಾಗಿವೆ.
ಬಿಜೆಪಿ ಪಕ್ಷವೂ ಇದೇ ತಂತ್ರದ ಮೊರೆ ಹೋಗಿದ್ದು, ಉಳಿದ 12 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಇಂದು ಸಂಜೆಯೊಳಗೆ ಬಿಡುಗಟೆ ಮಾಡುವ ಸಾಧ್ಯತೆಯಿದೆ. ಜಗದೀಶ್ ಶೆಟ್ಟರ್ ಸ್ಫರ್ಧೆ ಕಾಂಗ್ರೆಸ್ ನಿಂದ ಸ್ಫರ್ಧೆ ಮಾಡುತ್ತಿರುವ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರಕ್ಕೆ ಬಿಜೆಪಿ ಯಾರನ್ನು ಅಭ್ಯರ್ಥಿಯಾಗಿ ಘೋಷಿಸಲಿದೆ ಎಂದು ಕಾದುನೋಡಬೇಕಿದೆ.
ಈ ಬಗ್ಗೆ ಧಾರವಾಡ ಜಿಲ್ಲೆಯ ನವಲಗುಂದದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ. ಬಾಕಿ ಉಳಿದ 12 ಕ್ಷೇತ್ರಗಳಿಗೆ ಇಂದೇ ಅಭ್ಯರ್ಥಿ ಪಟ್ಟಿ ಪ್ರಕಟ ಆಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ಡಬಲ್ ಇಂಜಿನ್ ಸರ್ಕಾರ SC-STಗೆ ಆಗುತ್ತಿದ್ದ ಅನ್ಯಾಯ ಸರಿಪಡಿಸಿದೆ : ಸಿಎಂ ಬೊಮ್ಮಾಯಿ
ಏ.21ರಂದು ಮೋದಿ ರ್ಯಾಲಿ ಫೈನಲ್
ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರ ಸೇರಿದಂತೆ ಒಟ್ಟು 12 ಕ್ಷೇತ್ರಗಳಿಗೆ ಅಭ್ಯರ್ಥಿ ಪ್ರಕಟವಾಗಲಿದೆ. ಶೀಘ್ರದಲ್ಲೇ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಚುನಾವಣಾ ರ್ಯಾಲಿ ಮಾಡುತ್ತಾರೆ. ಎಲ್ಲೆಲ್ಲಿ ರ್ಯಾಲಿ ಮಾಡುತ್ತಾರೆ ಎಂಬುದು ಏಪ್ರಿಲ್ 21ರಂದು ಫೈನಲ್ ಆಗುತ್ತದೆ ಎಂದು ಹೇಳಿದ್ದಾರೆ.
ಇನ್ನೂ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಕುರಿತು ಮಾತನಾಡಿರುವ ಅವರು, ಜಗದೀಶ್ ಶೆಟ್ಟರ್ ಬಿಜೆಪಿ ಪಕ್ಷ ಬಿಡಬಾರದಿತ್ತು, ಕಾಂಗ್ರೆಸ್ ಪಕ್ಷಕ್ಕೆ ಹೋಗಿದ್ದಾರೆ. ಪಕ್ಷ ಬಲಪಡಿಸಲು ನಾವೆಲ್ಲರೂ ಒಗ್ಗಟ್ಟಾಗಿ ಇರುತ್ತೇವೆ ಎಂದು ತಿಳಿಸಿದ್ದಾರೆ.