Thursday, December 19, 2024

BSY ಕೂಡ ಕಾಂಗ್ರೆಸ್​ಗೆ ಬರಬಹುದು : ಶಾಮನೂರು ಸ್ಫೋಟಕ ಹೇಳಿಕೆ

ಬೆಂಗಳೂರು : ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಬಿಜೆಪಿ ತೊರೆದು ಕಾಂಗ್ರೆಸ್​ ಸೇರಿದ್ದು, ಈ ಕುರಿತು ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಅವರು, ಮುಂದೆ ಬಿ.ಎಸ್ ಯಡಿಯೂರಪ್ಪ ಅವರೂ ಕಾಂಗ್ರೆಸ್ ಪಕ್ಷಕ್ಕೆ ​ಬರಬಹುದು. ಇನ್ನು ಅನೇಕ ಹಿರಿಯ ನಾಯಕರು ಕಾಂಗ್ರೆಸ್​ಗೆ ಬರಲಿದ್ದಾರೆ ಎಂದು ಹೇಳಿದ್ದಾರೆ.

ದೆಹಲಿಯಲ್ಲಿ ಬಿಜೆಪಿ ಹೈಕಮಾಂಡ್​​ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಬಿಟ್ಟು ಸಭೆ ಮಾಡಿದ್ದಾರೆ. ಯಡಿಯೂರಪ್ಪ ಸಹ ಬೇಜಾರಾಗಿದ್ದಾರೆ ಎಂದು ಶಾಸಕ ಶಾಮನೂರು ಶಿವಶಂಕರಪ್ಪ ತಿಳಿಸಿದ್ದಾರೆ.

ವೀರಶೈವ ಮಹಾಸಭಾ ಅಧ್ಯಕ್ಷನಾಗಿ ಎಲ್ಲರನ್ನು ಸ್ವಾಗತ ಮಾಡುತ್ತೇನೆ. ಜಗದೀಶ್ ಶೆಟ್ಟರ್ ಬಿ ಫಾರಂ ತೆಗೆದುಕೊಂಡು ಹೋಗಿದ್ದಾರೆ. ಜಗದೀಶ್ ಶೆಟ್ಟರ್ ಅವರು ಸುಲಭವಾಗಿ ಗೆಲ್ಲುತ್ತಾರೆ. ಉತ್ತರ ಕರ್ನಾಟಕದಲ್ಲಿ ಜಗದೀಶ್ ಶೆಟ್ಟರ್ ಪ್ರಭಾವ ಬೀರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ‘ಅರೆಹುಚ್ಚ ರಾಹುಲ್ ಗಾಂಧಿ’ ಕಿ ಜೈ ಅನ್ನೋಕ್ ಹೋಗಿದ್ದಾರೆ : ಶಾಸಕ‌ ಯತ್ನಾಳ್ ಲೇವಡಿ

ಶೆಟ್ಟರ್ ಸಹೋದರ ವಿಷಾಧ

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಾಂಗ್ರೆಸ್​ಗೆ ಹೋಗಿರೋದು ಮನಸಿಗೆ ನೋವಾಗಿದೆ ಎಂದು ಜಗದೀಶ್ ಶೆಟ್ಟರ್ ಸಹೋದರ ಪ್ರದೀಪ್ ಶೆಟ್ಟರ್ ಅಸಮಾಧಾನ ಹೊರಹಾಕಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಾನು ಬಿಜೆಪಿಯಲ್ಲಿ ಇರುತ್ತೇನೆ. ಮನಸ್ಸಿಗೆ ನೋವಾಗಿದೆ. ನನಗೆ ಮಾತೇ ಬರ್ತಿಲ್ಲ. ನಾನು ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. ಪಕ್ಷನೇ ಬೇರೆ ವೈಯಕ್ತಿಕ ವಿಷಯವೇ ಬೇರೆ. ಈ ಬಗ್ಗೆ ನಾನು ಹೆಚ್ಚು ಮಾತಾಡುವುದಿಲ್ಲ ಎಂದು ಹೇಳಿದ್ದಾರೆ.

RELATED ARTICLES

Related Articles

TRENDING ARTICLES