Wednesday, January 22, 2025

‘ಕೈ’​ ಸೇರ್ಪಡೆ ನಂತರ ಬಿಜೆಪಿ ಬಗ್ಗೆ ಜಗದೀಶ್​ ಶೆಟ್ಟರ್ ಹೇಳಿದ್ದೇನು…?

ಬೆಂಗಳೂರು : ಕಾಂಗ್ರೆಸ್​ ಸೇರಿದ ಜಗದೀಶ್​ ಶೆಟ್ಟರ್ ನಾನು ಯಾಕೆ ಬಿಜೆಪಿ ಪಕ್ಷ ತೊರೆದೆ ಎಂಬ ಮಾಹಿತಿಯನ್ನು ಎಳೆ ಎಳೆಯಾಗಿ ಹೇಳಿಕೊಂಡಿದ್ದಾರೆ.

ಹೌದು, ಬಿಜೆಪಿ ಜೊತೆಗಿನ ನಾಲ್ಕು ದಶಕಗಳ ನಂಟನ್ನ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಕಳಚಿ ಕೊಂಡು,ಈ ಬಾರೀಯ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಅವಕಾಶ ನೀಡದ್ದಕ್ಕೆ ಮುಖಂಡರ ವಿರುದ್ದ ಗುಡುಗಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಮಲ ಪಕ್ಷಕ್ಕೆ ಗುಡ್‌ ಬೈ ಹೇಳಿದ್ದಾರೆ.

ಇದನ್ನೂ ಓದಿ: Jagadish Shettar: ಜಗದೀಶ್​ ಶೆಟ್ಟರ್​ ಇಂದೇ ಕಾಂಗ್ರೆಸ್​​ ಸೇರೋದು ಫಿಕ್ಸ್..​​?

ಲಿಂಗಾಯತ ನಾಯಕರಲ್ಲಿ ಬಿಎಸ್​ವೈ ಬಿಟ್ಟರೆ ನಾನೇ ಹಿರಿಯ

ಕೈ ಪಡೆ ಸೇರಿದ ಬಳಿಕ ಜಗದೀಶ್​ ಶೆಟ್ಟರ್ ಬಿಜೆಪಿಯೊಳಗಿನ ಆಂತರಿಕ ಬೆಳವಣಿಗೆಗಳ ಬಗ್ಗೆ ಮಾತನಾಡಿ, ಅವರು ರಾಜ್ಯ ಬಿಜೆಪಿ ಬೆಳವಣಿಗೆ ವರಿಷ್ಠರ ಗಮನಕ್ಕೆ ಬಂದಿಲ್ಲ ಅನ್ನಿಸುತ್ತೆ. ನಾನು ಮಂತ್ರಿ, ಮುಖ್ಯಮಂತ್ರಿ ಆಗಿದ್ದೇನೆ, ನನಗೆ ಅಧಿಕಾರ ಬೇಕಿಲ್ಲ. ರಾಜ್ಯ ಬಿಜೆಪಿ ಕೆಲವೇ ಕೆಲವು ವ್ಯಕ್ತಿಗಳ ಕಂಟ್ರೋಲ್​ನಲ್ಲಿ ಇದೆ. ರಾಜ್ಯ ಬಿಜೆಪಿ ಕೆಲವು ವ್ಯಕ್ತಿಗಳ ಹಿಡಿತದಲ್ಲಿದೆ. ಕೆಲ ಬಿಜೆಪಿ ನಾಯಕರು ತಮ್ಮ ಹಿತಾಸಕ್ತಿಗಾಗಿ ಕೆಲಸ ಮಾಡ್ತಿದ್ದಾರೆ. ನಾನು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಟೀಕೆ ಮಾಡುತ್ತಿಲ್ಲ. ಲಿಂಗಾಯತ ನಾಯಕರಲ್ಲಿ ಬಿಎಸ್​ವೈ ಬಿಟ್ಟರೆ ನಾನೇ ಹಿರಿಯ. ಅದಕ್ಕಾಗಿ ನನ್ನನ್ನು ಪಕ್ಷದಿಂದ ಹೊರಹಾಕಿರಬೇಕು ಎಂದು ಈ ರೀತಿ ಮಾಡಿದರು. ಕಾಂಗ್ರೆಸ್​ ತತ್ವ, ಸಿದ್ಧಾಂತ ಒಪ್ಪಿ ಪಕ್ಷ ಸೇರ್ಪಡೆಯಾಗಿದ್ದೇನೆ.

 ಬಿಜೆಪಿ ಹಿರಿಯ ನಾಯಕನಾಗಿ ನನಗೆ ಗೌರವ ಕೊಡಲಿಲ್ಲ

 ಇಂದು ರಾಜ್ಯದಲ್ಲಿ ಬಹಳ ಜನರಿಗೆ ಅಶ್ಚರ್ಯ ಆಗಿದೆ. ಯಾಕೆ ಕಾಂಗ್ರೆಸ್ ಸೇರ್ತಿದ್ದಾರೆ ಎಂಬ ಚರ್ಚೆ ನಡೆಯುತ್ತಿವೆ ಅಂದ್ರೆ ಹಲವಾರು ತಿಂಗಳ ಹಿಂದೆ ಹಿರಿಯ ನಾಯಕನಾಗಿ ನನಗೆ ಏನು ವೇದನೆ ಆಗಿದೆ ಅದು ಯಾರ ಗಮನಕ್ಕೂ ಬರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್​ ಶೆಟ್ಟರ್​ ಹೇಳಿದ್ದಾರೆ.

ಇದನ್ನೂ ಓದಿ: ಅಧಿಕೃತವಾಗಿ ಕಾಂಗ್ರೆಸ್​ ಸೇರಿದ ಜಗದೀಶ್​ ಶೆಟ್ಟರ್​​​

ಇನ್ನೂ ನಾನು ಮಾಜಿ ಸಿಎಂ ಬಿಎಸ್​  ಯಡಿಯೂರಪ್ಪ, ದಿವಂಗತ ಮಾನಿ ಸಂಸದ ಅನಂತ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಬಿಜೆಪಿ ಕಟ್ಟಿ ಬೆಳೆಸಿದ್ದೇನೆ. ಬಿಜೆಪಿ ಎಲ್ಲ ರೀತಿ ಗೌರವ ಸ್ಥಾನಮಾನ ನೀಡಿದೆ. ಅದಕ್ಕೆ ಪ್ರತಿಯಾಗಿ ನಾನೂ ಬಿಜೆಪಿ ಕಟ್ಟಿ ಬೆಳೆಸುವ ಕೆಲಸ ಮಾಡಿದ್ದೇನೆ. ಆದರೆ ಆರು ಬಾರಿ 1994 ರಿಂದ ಸ್ಪರ್ಧೆ ಮಾಡಿದ್ದೇನೆ. ಇದು ಏಳನೇ ಬಾರಿ ನಾನು ಸ್ಪರ್ಧೆ ಮಾಡಬೇಕಾಗಿದೆ. ಸಹಜವಾಗಿ ಟಿಕೇಟ್ ಇಲ್ಲ ಅಂದಾಗ ಆಘಾತ ಆಯ್ತು ವೇದನೆ ಆಯ್ತು. ಹಿರಿಯ ನಾಯಕನಾಗಿ ನನಗೆ ಗೌರವ ಕೊಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

 

RELATED ARTICLES

Related Articles

TRENDING ARTICLES