Monday, December 23, 2024

ಬಿಜೆಪಿ ಟಿಕೆಟ್​ ಕೈ ತಪ್ಪಲು ಬಿಎಲ್ ಸಂತೋಷ್​ ಕಾರಣ ; ಮಾಜಿ ಸಿಎಂ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಬಿಜೆಪಿಯಲ್ಲಿ ಈ ಬಾರಿ ನನಗೆ ಬಿಜೆಪಿ ಕೈ ಟಿಕೆಟ್ ತಪ್ಪಲು ಬಿಎಲ್ ಸಂತೋಷ್ (BL Santosh) ಕಾರಣ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ (Former CM Jagadish Shettar) ಆರೋಪ ಮಾಡಿದ್ದಾರೆ.

ಹೌದು, ಇಂದು ಹುಬ್ಬಳ್ಳಿಯ ತಮ್ಮ ನಿವಾಸದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಮಹೇಶ್ ತೆಂಗಿನಕಾಯಿ ಅವರಿಗೆ ಟಿಕೆಟ್ ನೀಡಲಾಗಿದೆ. ಅವರು ಪಕ್ಷಕ್ಕಾಗಿ ದುಡಿದಿದ್ದಾರೆ. ಅವರ ಮೇಲೆ ಪಕ್ಷಕ್ಕೆ ಅಷ್ಟು ಗೌರವವಿದ್ದರೆ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿಸಬಹುದಿತ್ತು. ಎಂದು ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ : Jagadish Shettar : ಜಗದೀಶ್ ಶೆಟ್ಟರ್ ಕಾಂಗ್ರೆಸ್‌ಗೆ ಸೇರ್ಪಡೆ

ನನ್ನ ವಿರುದ್ಧ ಬಿ.ಎಲ್.ಸಂತೋಷ್ ಅನೇಕ ಷಡ್ಯಂತ್ರ ಮಾಡಿ ಟಿಕೆಟ್ ತಪ್ಪಿಸಿದ್ದಾರೆ. ಜೊತೆಯಲ್ಲಿ ಹಲವರು ಕೈ ಜೋಡಿಸಿದ್ದಾರೆ ಎಂದು ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ. ಬಿಜೆಪಿಯಲ್ಲಿ ವ್ಯಕ್ತಿ ಮುಖ್ಯ ಅಲ್ಲ, ಪಕ್ಷ ಮುಖ್ಯ ಅಂತಾರೆ. ಆದ್ರೆ ಇಲ್ಲ ಒಬ್ಬನೇ ವ್ಯಕ್ತಿ ಮುಖ್ಯವಾಗಿದ್ದಾನೆ. ಬಿಜೆಪಿ ಕಚೇರಿಯನ್ನು ಕಪಿಮುಷ್ಟಿಯಲ್ಲಿಟ್ಟುಕೊಂಡಿದ್ದಾನೆ. ಎಂದು ಶೆಟ್ಟರ್​ ಕಿಡಿಕಾರಿದ್ದಾರೆ.

 

RELATED ARTICLES

Related Articles

TRENDING ARTICLES