Wednesday, January 22, 2025

ಧೀರಜ್ ಮುನಿರಾಜು ಶಕ್ತಿ ಪ್ರದರ್ಶನ : ಶೋಭಾ ಕರಂದ್ಲಾಜೆ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಕೆ

ದೊಡ್ಡಬಳ್ಳಾಪುರ : ದೊಡ್ಡಬಳ್ಳಾಪುರ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜು ಅವರು ಸಾವಿರಾರು ಕಾರ್ಯಕರ್ತರ ಬೆಂಬಲದೊಂದಿಗೆ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ದೊಡ್ಡಬಳ್ಳಾಪುರ ಬಿಜೆಪಿ ಪಕ್ಷದಲ್ಲಿ ಇಂದು ಇತಿಹಾಸವೇ ಸೃಷ್ಟಿ ಆಗಿದೆ. ಇದೇ ಮೊದಲ ಬಾರಿಗೆ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಅಭ್ಯರ್ಥಿಗೆ ಇಷ್ಟೊಂದು ಅಪಾರ ಬೆಂಬಲಿಗರು ಬಲ ನೀಡಿದರು. ಈ ವೇಳೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಇದ್ದರು.

ನಾಮಪತ್ರ ಸಲ್ಲಿಕೆಗೂ ಮುನ್ನ ನೆಲದಾಂಜನೆಯ ಸ್ವಾಮಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ದೇವಸ್ಥಾನದಿಂದ ದೊಡ್ಡಬಳ್ಳಾಪುರದ ತಾಲ್ಲೂಕು ಕಚೇರಿಯವರೆಗೆ ಬಿಜೆಪಿ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಸಮ್ಮುಖದಲ್ಲಿ ಭರ್ಜರಿ ರೋಡ್ ಶೋ ನಡೆಸಿದರು.

ಇದನ್ನೂ ಓದಿ : ಅವ್ರು ‘ಹೆತ್ತ ತಾಯಿಯನ್ನ ತುಳಿದು’ ಹೋಗಿದ್ದಾರೆ : ಶೋಭಾ ಕರಂದ್ಲಾಜೆ ಫುಲ್ ಗರಂ

ನಗರದ ತಾಲೂಕು ಕಚೇರಿ ವೃತ್ತದಲ್ಲಿ ಸಮಾವೇಶಗೊಂಡ ಬಿಜೆಪಿ ಕಾರ್ಯಕರ್ತರು, ಬಿಜೆಪಿ ಅಭ್ಯರ್ಥಿಯಾಗಿ ಧೀರಜ್ ಮುನಿರಾಜು ಅವರಪರ ಘೋಷಣೆ ಕೂಗಿದರು. ಬಳಿಕ, ಚುನಾವಣಾಧಿಕಾರಿ ತೇಜಸ್ ಕುಮಾರ್ ಅವರಿಗೆ ಧೀರಜ್ ಮುನಿರಾಜ್ ನಾಮ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಧೀರಜ್ ಮುನಿರಾಜು ಅವರ ಕುಟುಂಬ ಸದಸ್ಯರು ಸೇರಿದಂತೆ ಸಹಾಯಕ ಚುನಾವಣಾಧಿಕಾರಿ‌ ಮೋಹನ ಕುಮಾರಿ ಉಪಸ್ಥಿತರಿದ್ದರು.

ಐದು ಮಂದಿ ನಾಮಪತ್ರ ಸಲ್ಲಿಕೆ

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಗಳಾಗಿ ಇಂದು ಕಾಂಗ್ರೆಸ್, ಬಿಜೆಪಿ, ಎಎಪಿ, ಪ್ರಜಾಕೀಯ, ಪಕ್ಷೇತರ ಸೇರಿದಂತೆ 5 ಅಭ್ಯರ್ಥಿಗಳು ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ಧೀರಜ್ ಮುನಿರಾಜು, ಹಾಲಿ ಶಾಸಕ ಟಿ.ವೆಂಕಟರಮಣಯ್ಯ ಅವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ, ಎಎಪಿ ಪಕ್ಷದ ಅಭ್ಯರ್ಥಿ ಪುರುಷೋತ್ತಮ್, ಪ್ರಜಾಕೀಯ ಪಕ್ಷದ ಅಭ್ಯರ್ಥಿಯಾಗಿ ರವಿಕುಮಾರ್ ಎಂ, ಪಕ್ಷೇತರ ಅಭ್ಯರ್ಥಿಯಾಗಿ ನಾದೇನಹಳ್ಳಿಯ ಆನಂದಮೂರ್ತಿ ಅವರು ನಾಮಪತ್ರ ಸಲ್ಲಿಸಿದ್ದಾರೆ.

RELATED ARTICLES

Related Articles

TRENDING ARTICLES