Monday, December 23, 2024

ತಂದೆಯ ಸಮಾಧಿಗೆ ಅಶೋಕ್ ಜಯರಾಮ್ ನಮನ

ಬೆಂಗಳೂರು : ಮಂಡ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಅಶೋಕ್ ಜಯರಾಮ್ ಅವರು ಇಂದು ತಮ್ಮ ತಂದೆ ಸಮಾಧಿಗೆ ಭೇಟಿ ನೀಡಿ, ಆಶೀರ್ವಾದ ಪಡೆದಿದ್ದಾರೆ.

ತಂದೆಯವರ ಹುಟ್ಟೂರಾದ ಮಂಡ್ಯ ತಾಲ್ಲೂಕು ಸೂನಗಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ತಂದೆ ಎಸ್.ಡಿ.ಜಯರಾಮ್ ಅವರ ಪುಣ್ಯ ಸ್ಮಾರಕಕ್ಕೆ ಪುಷ್ಪಾರ್ಚನೆ ಮಾಡಿ ನಮನಗಳನ್ನು ಸಲ್ಲಿಸಿದ್ದಾರೆ. ಬಳಿಕ ಗ್ರಾಮದ ಶ್ರೀ ವರದರಾಜ ಸ್ವಾಮಿ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿ ಪೂಜೆ ಸಲ್ಲಿಸಿ, ಬಸವಣ್ಣನಿಂದ ಆಶೀರ್ವಾದ ಪಡೆದಿದ್ದಾರೆ.

ಈಡಿಗ ಸಮಾಜದ ಮುಖಂಡರ ಭೇಟಿ

ಮಂಡ್ಯ ಜಿಲ್ಲಾ ಈಡಿಗ ಸಮಾಜದ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರನ್ನು ಮಂಡ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಶೋಕ್ ಜಯರಾಮ್ ಅವರು ಭೇಟಿ ಮಾಡಿ ಮುಂಬರುವ ವಿಧಾನಸಭಾ ಚುನಾವಣೆಯ ಪ್ರಯುಕ್ತ ಸಮಾಲೋಚನೆ ನಡೆಸಿದ್ದಾರೆ. ಅಲ್ಲದೆ, ತಮಗೆ ಆಶೀರ್ವಾದ ಮತ್ತು ಬೆಂಬಲವನ್ನು ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ : ನನ್ನ ಸಾವಾದರೆ ಶಿಗ್ಗಾವಿಯಲ್ಲೇ ಮಣ್ಣು ಮಾಡಿ : ಸಿಎಂ ಬೊಮ್ಮಾಯಿ

ಬ್ರಾಹ್ಮಣ ಸಭಾದ ನಾಯಕರೊಂದಿಗೆ ಸಭೆ

ಮಂಡ್ಯ ಜಿಲ್ಲಾ ಬ್ರಾಹ್ಮಣ ಸಭಾದ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರನ್ನು ಭೇಟಿ ಮಾಡಿರುವ ಅಶೋಕ್ ಜಯರಾಮ್ ಅವರು ಚುನಾವಣೆ ಪ್ರಯುಕ್ತ ಸಮಾಲೋಚನೆ ನಡೆಸಿದ್ದಾರೆ. ಇದೇ ವೇಳೆ ಮುಖಂಡರು ತಮ್ಮ ಬೆಂಬಲವನ್ನು ನೀಡುವುದಾಗಿ ಘೋಷಿಸಿದ್ದಾರೆ.

ಬಳಿಕ, ಮಂಡ್ಯ ಜಿಲ್ಲಾ ಮರಾಠ ಸಮಾಜದ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರುಗಳನ್ನು ಭೇಟಿ ಮಾಡಿದ್ದಾರೆ. ಅವರೊಂದಿಗೆ ಸಮಾಲೋಚನೆ ನಡೆಸಿ ಬಿಜೆಪಿ ಪಕ್ಷದ ಗೆಲುವಿಗೆ ಬೆಂಬಲ ನಿಡುವಂತೆ ಮನವಿ ಮಾಡಿದ್ದಾರೆ.

RELATED ARTICLES

Related Articles

TRENDING ARTICLES