Sunday, November 24, 2024

ಬಿಜೆಪಿಗೆ ಮತ್ತೊಂದು ಬಿಗ್​ ಶಾಕ್ : ಆಯನೂರು ಮಂಜುನಾಥ್ ರಾಜೀನಾಮೆ

ಶಿವಮೊಗ್ಗ: ರಾಜ್ಯ ವಿಧಾನಸಭೆ ಚುನಾವಣೆಗೆ (Karnataka Assembly Elections 2023) ಇನ್ನೂ ಕೆಲವು ದಿನಗಳು ಮಾತ್ರ ಬಾಕಿ ಉಳಿದಿವೆ. ಇನ್ನೂ ಟಿಕೆಟ್ ಹಂಚಿಕೆ ಸಂಬಂಧ ಬಿಜೆಪಿಯಲ್ಲಿ ಬಂಡಾಯ ಜೋರಾಗಿದೆ. ಟಿಕೆಟ್​ ಕೈತಪ್ಪಿದ್ದರಿಂದ ಒಬ್ಬೊಬ್ಬರೇ ಪ್ರಭಾವಿ ನಾಯಕರು ಬಿಜೆಪಿ ತೊರೆಯುತ್ತಿದ್ದಾರೆ.

ಹೌದು, ವಿಧಾನ ಪರಿಷತ್ ಸದಸ್ಯತ್ವ ಹಾಗೂ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಬಿಜೆಪಿ ಮುಖಂಡ ಆಯನೂರು ಮಂಜುನಾಥ್ (Ayanur Manjunath) ಘೋಷಣೆ ಮಾಡಿದ್ದಾರೆ.

ಇದನ್ನೂ ಓದಿನಾಳೆ ಸಮೃದ್ಧಿ ಮಂಜುನಾಥ್ ನಾಮಪತ್ರ ಸಲ್ಲಿಕೆ : ದೇವೇಗೌಡರ ಆಶೀರ್ವಾದ

ಬುಧವಾರ ಬೆಳಗ್ಗೆ ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದು ಹುಬ್ಬಳ್ಳಿಗೆ ತೆರಳಿ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸುವುದಾಗಿ ಹೇಳಿದ್ದಾರೆ.

ನಾಳೆ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುತ್ತೇನೆ. ಯಾವ ಪಕ್ಷದಿಂದ ಸ್ಪರ್ಧೆ ಎಂಬುದನ್ನು ಮಧ್ಯಾಹ್ನದ ಬಳಿಕ ತಿಳಿಸುವೆ ಎಂದು ಸ್ಪಷ್ಟಪಡಿಸಿದರು.

ನನ್ನ ಮೂಲ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಅದಕ್ಕೆ ನಾನು ಬದ್ಧ. ಪರಿಷತ್ ಸದಸ್ಯನಾಗಿ ಎಲ್ಲಾ ವರ್ಗದ ಪರವಾಗಿ ಪರಿಣಾಮಕಾರಿಯಾಗಿ ಕೆಲಸ ಮಾಡಲು ಆಗಿಲ್ಲ. ಹಾಗಾಗೀ ಕಾನೂನು ಸಿದ್ಧವಾಗುವ ಕೆಳಮನೆ ಪ್ರವೇಶ ಮಾಡಲು ನಿರ್ಧಾರ ಮಾಡಿದ್ದೇ. ಶ್ರಮಿಕ ವರ್ಗಗಳಿಗೆ ನ್ಯಾಯ ಕೊಡಲು ವಿಧಾನಸಭೆಗೆ ಹೋಗಲು ನಿರ್ಧರಿಸಿದ್ದೇನೆ ಎಂದು ಹೇಳಿದರು.

ಇನ್ನೂ ಟಿಕೆಟ್ ಗೋಸ್ಕರ ನಾನು ಪಕ್ಷವನ್ನು ಬಿಡುತ್ತಿಲ್ಲ. ನಾನು ನನ್ನ ಗುರಿ ಸಾಧನೆಗಾಗಿ ಹೊರಬರುತ್ತಿದ್ದೇನೆ ಎಂದರು.

 

RELATED ARTICLES

Related Articles

TRENDING ARTICLES