Thursday, December 26, 2024

ಬಿಜೆಪಿ ಅಂತಿಮ ಪಟ್ಟಿ ಬಿಡುಗಡೆ : ಈಶ್ವರಪ್ಪ ಕುಟುಂಬಕ್ಕೆ ತಪ್ಪಿದ ಟಿಕೆಟ್

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಬಾಕಿ ಉಳಿದ ಎರಡು ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.

ಇಂದು ಬಿಡುಗಡೆಯಾದ ನಾಲ್ಕನೇ ಹಾಗೂ ಅಂತಿಮ ಪಟ್ಟಿಯಲ್ಲಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರಿಗೆ ಬಿಜೆಪಿ ಹೈಕಮಾಂಡ್ ಬಿಗ್ ಶಾಕ್ ನೀಡಿದೆ. ಕೊನೆಗೂ ಈಶ್ವರಪ್ಪ ಕುಟುಂಬಕ್ಕೆ ಟಿಕೆಟ್ ಮಿಸ್ ಆಗಿದೆ.

ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಪ್ರತಿನಿಧಿಸುತ್ತಿದ್ದ ಶಿವಮೊಗ್ಗ ನಗರ ಮತ್ತು ರಾಯಚೂರು ಜಿಲ್ಲೆ ಮನ್ವಿ ವಿಧಾನ ಸಭಾ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಬಿಜೆಪಿ ಹೈ ಕಮಾಂಡ್ ಪ್ರಕಟಿಸಿದೆ.

  • ಶಿವಮೊಗ್ಗ-ಚನ್ನಬಸಪ್ಪ
  • ಮನ್ವಿ-ಬಿ.ವಿ ನಾಯಕ್ (ಎಸ್ಟಿ ಮೀಸಲು)

ಇದನ್ನೂ ಓದಿ : 10 ಸಾವಿರ ಮನೆಗಳಲ್ಲಿ ಭಿಕ್ಷೆ ಬೇಡಿ ನಾಮಪತ್ರ ಸಲ್ಲಿಕೆ

222 ಕ್ಷೇತ್ರಗಳ ಟಿಕೆಟ್ ಘೋಷಣೆ

ಬಿಜೆಪಿ ಹೈಕಮಾಂಡ್ ಮೊದಲ ಪಟ್ಟಿಯಲ್ಲಿ 189 ಅಭ್ಯರ್ಥಿಗಳ ಹೆಸರು ಪ್ರಕಟಿಸಿತ್ತು. ಎರಡನೇ ಪಟ್ಟಿಯಲ್ಲಿ 23 ಮಂದಿಗೆ ಟಿಕೆಟ್ ನೀಡಿತ್ತು. 3ನೇ ಪಟ್ಟಿಯಲ್ಲಿ 10 ಮಂದಿಗೆ ಟಿಕೆಟ್ ಘೋಷಿಸಿತ್ತು. ಒಟ್ಟು 222 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿ, ಶಿವಮೊಗ್ಗ ನಗರ ಹಾಗೂ ಮಾನ್ವಿ ಕ್ಷೇತ್ರದ ಟಿಕೆಟ್ ಹೋಲ್ಡ್ ಮಾಡಿತ್ತು.

ಇದೀಗ 2 ಕ್ಷೇತ್ರಗಳ ಅಭ್ಯರ್ಥಿಗಳನ್ನೂ ಘೋಷಣೆ ಮಾಡುವುದರೊಂದಿಗೆ ಬಿಜೆಪಿ ರಾಜ್ಯದ ಎಲ್ಲಾ 224 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದೆ.

RELATED ARTICLES

Related Articles

TRENDING ARTICLES