ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಟಿಕೆಟ್ ಘೋಷಣೆ ಆಗುತ್ತಿದ್ದಂತೆಯೇ ಅಸಮಾಧಾನ ಭುಗಿಲೆದ್ದಿದೆ. ಇದು ಬಿಜೆಪಿ ಪಕ್ಷಕ್ಕೆ ವರವಾಗಿದೆ.
ಶಿಡ್ಲಘಟ್ಟದಲ್ಲಿ ಬದಲಾವಣೆಯ ಪರ್ವ ಶುರುವಾಗಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರಿಗೆ ಶಾಕ್ ಮೇಲೆ ಶಾಕ್ ಎದುರಾಗಿದೆ. ನೂರಾರು ಮುಖಂಡರು ಹಾಗೂ ಕಾರ್ಯಕರ್ತರು ಕೈ, ದಳ ಬಿಟ್ಟು ಕಮಲ ಹಿಡಿದಿದ್ದಾರೆ.
ಇಂದು ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸೀಕಲ್ ರಾಮಚಂದ್ರ ಗೌಡ ಅವರ ಸಮ್ಮುಖದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ವೈ ಹುಣಸೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕದಾಸೇನಹಳ್ಳಿ ಗ್ರಾಮದ 20ಕ್ಕೂ ಹೆಚ್ಚು ಜನ ಜೆಡಿಎಸ್ ಪಕ್ಷದಿಂದ ಬಿಜೆಪಿಗೆ ಸೇರ್ಪಡೆಗೊಂಡರು. ಮಾಜಿ ಶಾಸಕ ಎಂ.ರಾಜಣ್ಣ ಅವರು ಬಿಜೆಪಿ ಶಾಲು ಹಾಕಿ ಪಕ್ಷಕ್ಕೆ ಬರಮಾಡಿಕೊಂಡರು.
ಮುಖಂಡರಾದ ಮಂಜುನಾಥ್ ಅವರ ನೇತೃತ್ವದಲ್ಲಿ ಮುನೇಗೌಡ, ನಾರಾಯಣಸ್ವಾಮಿ, ರವಿಚಂದ್ರ, ಚಿಕ್ಕ ಭೂಮಪ್ಪ, ನರಸಿಂಹಗೌಡ ಮತ್ತು ಮುನಿರಾಜು ಅವರಿಂದಿಗೆ ಮತ್ತಿತರು ಸ್ವಯಂ ಪ್ರೇರಿತರಾಗಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಇದನ್ನೂ ಓದಿ : ಆದಿಚುಂಚನಗಿರಿ ಶ್ರೀಗಳ ಆಶೀರ್ವಾದ ಪಡೆದ ಸೀಕಲ್ ರಾಮಚಂದ್ರ ಗೌಡ
ಬಿಜೆಪಿ ಸಿದ್ಧಾಂತ ಮೆಚ್ಚಿ ಪಕ್ಷ ಸೇರ್ಪಡೆ
ತುಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಲ್ಲಿಶೆಟ್ಟಿಪುರ ಗ್ರಾಮದ 20ಕ್ಕೂ ಹೆಚ್ಚು ಜನ ಸೇವಾಸೌಧದಲ್ಲಿ ಮಾಜಿ ಶಾಸಕ ಎಂ.ರಾಜಣ್ಣ ಅವರ ಸಮ್ಮುಖದಲ್ಲಿ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದಾರೆ. ಪುನೀತ್, ಯಶವಂತ, ಯತೀಶ್, ಗಣೇಶ್, ಸತೀಶ್, ಚಿಕ್ಕಮುನಿಯಪ್ಪ, ಮುನಿರಾಜ್, ಚಂದ್ರಶೇಖರ್, ನಾಗರಾಜಪ್ಪ ಸೇರಿದಂತೆ ಹಲವರು ಬಿಜೆಪಿ ಸಿದ್ಧಾಂತ ಮೆಚ್ಚಿ ಪಕ್ಷಕ್ಕೆ ಸೇರಿದ್ದಾರೆ.
ಬಳಿಕ ಶಿಡ್ಲಘಟ್ಟ ಕ್ಷೇತ್ರದ ಗಂಗಾಪುರ ಗ್ರಾಮದ ಮುಖಂಡರು ಮಾಜಿ ಶಾಸಕರಾದ ರಾಜಣ್ಣ ಹಾಗೂ ಪಕ್ಷ ತಾಲೂಕು ಹಾಗೂ ಗ್ರಾಮ ಪಂಚಾಯತಿ ಮುಖಂಡರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಜಿ. ಟಿ ನಾರಾಯಣ ಸ್ವಾಮಿ, ಜಿ.ಎಂ.ವೆಂಕಟೇಶ್, ಹನುಮಪ್ಪ, ವೆಂಕಟೇಶ್, ನರಸಿಂಹಪ್ಪ ಕಾಶಿಹಳ್ಳಿ, ಮುನಿ ಶಾಮಪ್ಪ, ದೇವಪ್ಪ, ಮೂರ್ತಿ, ಲಕ್ಷ್ಮಿ ನಾರಾಯಣ ಹಾಗೂ ಇನ್ನಿತರ ಮುಖಂಡರು ಬಿಜೆಪಿ ಸೇರ್ಪಡೆಯಾಗಿದ್ದಾರೆ.