Monday, December 23, 2024

ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಹೆಸರು ಘೋಷಣೆ : ನಟಿ ರಮ್ಯಾ, ರಾಗಾ ಸೇರಿ ಇವರಿಗೆಲ್ಲ ಸ್ಥಾನ

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ 40 ನಾಯಕರನ್ನೊಳಗೊಂಡ ತಾರಾ ಪ್ರಚಾರಕರ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ.

ಪಟ್ಟಿಯಲ್ಲಿ ಸ್ಯಾಂಡಲ್​ವುಡ್ ಕ್ವಿನ್ ರಮ್ಯಾ ಹಾಗೂ ಇತ್ತೀಚೆಗೆ ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರೂ ಸಹ ಸ್ಥಾನ ಪಡೆದಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್​ ಗಾಂಧಿ, ಪ್ರಿಯಾಂಕಾ ಗಾಂಧಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​​, ರಣದೀಪ್ ಸಿಂಗ್ ಸುರ್ಜೇವಾಲ, ಚಿದಂಬರಂ, ಶಶಿ ತರೂರ್, ನಟಿ ರಮ್ಯಾ, ನಟಿ ಹಾಗೂ ಮಾಜಿ ಸಚಿವೆ ಉಮಾಶ್ರೀ, ಜಗದೀಶ್​ ಶೆಟ್ಟರ್​, ಸತೀಶ್​ ಜಾರಕಿಹೊಳಿ, ಡಿ.ಕೆ.ಸುರೇಶ್​​, ವೀರಪ್ಪ ಮೊಯ್ಲಿ, ಡಾ.ಪರಮೇಶ್ವರ್​ ಸೇರಿ 40 ನಾಯಕರು ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ : ಕೆನ್ನೆ ಹಿಂಡಿದ ಯಡಿಯೂರಪ್ಪ, ಮುಗುಳ್ನಕ್ಕ ನಟಿ ಶೃತಿ

ಬಿಜೆಪಿ ಸ್ಟಾರ್​ ಪ್ರಚಾರಕರಾಗಿ ಮೋದಿ

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್​ ಸ್ಟಾರ್​ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ. 40 ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ್ದು, ಬಿಜೆಪಿ ಸ್ಟಾರ್​ ಪ್ರಚಾರಕರಾಗಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಕೇಂದ್ರ ಸಚಿವರಾದ ಅಮಿತ್ ಶಾ ಮತ್ತು ರಾಜನಾಥ್​ ಸಿಂಗ್​ ಪ್ರಚಾರದ ಕಣ್ಣಕ್ಕೆ ಇಳಿಯಲಿದ್ದಾರೆ.

RELATED ARTICLES

Related Articles

TRENDING ARTICLES