Wednesday, January 22, 2025

ಇಂದು ಜೆಡಿಎಸ್‌ ಅಂತಿಮ‌ಪಟ್ಟಿ ಬಿಡುಗಡೆ ಸಾಧ್ಯತೆ

ಬೆಂಗಳೂರು: ನಾಮಪತ್ರ ಸಲ್ಲಿಕೆಗೆ ಇನ್ನೂ ಎರಡು ದಿನಗಳು ಮಾತ್ರ ಬಾಕಿ ಉಳಿದ್ದು,ಇನ್ನೂ 30 ರಿಂದ 35 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಜೆಡಿಎಸ್ ಇಂದು ಬಿಡುಗಡೆ ಮಾಡುವ ಸಾಧ್ಯತೆ ಇದೆ.

ಹೌದು, ವಿಧಾನಸಭೆ ಚುನಾವಣೆ ಘೋಷಣೆಗೂ ಮುನ್ನವೇ ಜೆಡಿಎಸ್‌ ತನ್ನ 93 ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಬಿಡುಗಡೆ ಮಾಡಿತ್ತು. ಇನ್ನೂ ದಳಪತಿಗಳು ಎರಡನೇ ಪಟ್ಟಿಯಲ್ಲಿ ಒಟ್ಟು 49 ಕ್ಷೇತ್ರಗಳಿಗೆ 49 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದಾರೆ.

ಇದನ್ನೂ ಓದಿ :  ಇಂದೇ ಬಿಡುಗಡೆಯಾಗಲಿದೆ ಜೆಡಿಎಸ್‌ 2ನೇ ಪಟ್ಟಿ

ಇನ್ನೂ ಉಳಿದ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಬಾಕಿ ಉಳಿಸಿಕೊಂಡಿರುವ ಜೆಡಿಎಸ್​ ತನ್ನ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ.

ಹೌದು, ಈಗಾಗಲೇ 148 ಜನರ ಪಟ್ಟಿ ಘೋಷಿಸಿರುವ JDS ಇಂದು‌ ಸಂಜೆ ಕೊನೆ ಪಟ್ಟಿ ಬಿಡುಗಡೆಗೆ ತಯಾರಿ ನಡೆಸಿದೆ.

 

 

RELATED ARTICLES

Related Articles

TRENDING ARTICLES