Tuesday, May 14, 2024

ಮತ್ತೆ ಬೊಮ್ಮಾಯಿಗೆ ಸಿಎಂ ಪಟ್ಟ : ಸುಳಿವು ಕೊಟ್ಟ ಜೆ.ಪಿ ನಡ್ಡಾ

ಬೆಂಗಳೂರು : ಬಸವರಾಜ ಬೊಮ್ಮಾಯಿ ಅವರಿಗೆ ಮುಂದಿನ ಐದು ವರ್ಷಗಳ ಕಾಲ ಮತ್ತೆ ಅವಕಾಶ ಸಿಗಲಿದೆ ಎನ್ನುವ ಮೂಲಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಮುಂದಿನ ಸಿಎಂ ಬೊಮ್ಮಾಯಿ ಎಂಬ ಸುಳಿವು ನೀಡಿದ್ದಾರೆ.

ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ಸಿಎಂ ಬಸವರಾಜ ಬೊಮ್ಮಾಯಿ ಅವರಲ್ಲಿರುವ ಆತ್ಮ ವಿಶ್ವಾಸ, ಉತ್ಸಾಹ ನೋಡಿದರೇ ಅವರಿಗೆ ಮುಂದಿನ ಐದು ವರ್ಷಗಳ ಕಾಲ ಮತ್ತೆ ಅವಕಾಶ ಸಿಗಲಿದೆ ಎಂದು ಪರೋಕ್ಷವಾಗಿ ಬೊಮ್ಮಾಯಿ ಅವರೇ ಸಿಎಂ ಆಗಲಿದ್ದಾರೆ ಎಂದಿದ್ದಾರೆ.

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ವಿಧಾನಸಭಾ ಚುನಾವಣೆಗಾಗಿ ನಾಮ ಪತ್ರ ಸಲ್ಲಿಕೆ ಮಾಡುತ್ತಿದ್ದಾರೆ. ಇವರ ನಾಮಪತ್ರ ಸಲ್ಲಿಕೆ ಕೇವಲ ಶಾಸಕ ಸ್ಥಾನಕ್ಕಾಗಿ ಅಲ್ಲ. ಕರ್ನಾಟಕವನ್ನು ಹೊಸ ದಿಕ್ಕಿಗೆ ಕೊಂಡೊಯ್ಯುವ ಕಾರ್ಯ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಸಿಎಂ ಬೊಮ್ಮಾಯಿಯನ್ನು ಮತ್ತೊಮ್ಮೆ ಗೆಲ್ಲಿಸಿ : ಸುದೀಪ್‌ ಮನವಿ

ಕಾಂಗ್ರೆಸ್ ನಾಯಕರು ಎಟಿಎಂ ಇದ್ದಂತೆ

ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಜೆ.ಪಿ ನಡ್ಡಾ ಅವರು, ಕಾಂಗ್ರೆಸ್ ಎಂದರೆ ಕಮಿಷನ್. ಕಾಂಗ್ರೆಸ್ ಎಂದರೆ ಭ್ರಷ್ಟಾಚಾರ. ಕಾಂಗ್ರೆಸ್ ನಾಯಕರು ಎಟಿಎಂ ಇದ್ದಂತೆ. ವಂದೇ ಭಾರತ ರೈಲು ಇಲ್ಲಿ ಓಡಾಡುತ್ತಿದೆ. ರಾಜ್ಯದಲ್ಲಿ ಅನೇಕ ಹೊಸ ರೈಲುಗಳು ಸಂಚಾರ ಮಾಡುತ್ತಿವೆ. ರಾಜ್ಯದಲ್ಲಿ ರೈಲು ಸಂಚಾರಗಳ ಸಂಖ್ಯೆ ಹೆಚ್ಚಿಗೆ ಆಗಬೇಕಾದರೇ ಬಿಜೆಪಿಗೆ ಮತ ಕೊಡಿ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಪಿಎಫ್​ಐ ಬ್ಯಾನ್ ಮಾಡಿದ್ದನ್ನು ಹಿಂಪಡೆಯುತ್ತೆವೆ ಎಂದು ಹೇಳುತ್ತಿದ್ದಾರೆ. ಪಿಎಫ್​ಐ ಬ್ಯಾನ್ ಮಾಡಿದ್ದರಿಂದ ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಕಡಿಮೆ ಆಗಿದೆ. ಸಿಎಂ ಬೊಮ್ಮಾಯಿ ಅವರಿಂದ ರಾಜ್ಯದಲ್ಲಿ ಅಪರಾಧ ಸಂಖ್ಯೆ ಕಡಿಮೆ ಆಗಿದೆ. ಅನೇಕ ಕ್ರಿಮಿನಲ್​ಗಳು ಜೈಲಿನಲ್ಲಿದ್ದಾರೆ ಎಂದು ಬಿಜೆಪಿ ಸರ್ಕಾರವನ್ನು ಕೊಂಡಾಡಿದ್ದಾರೆ.

RELATED ARTICLES

Related Articles

TRENDING ARTICLES