Sunday, January 5, 2025

ಸಿದ್ದಗಂಗಾ ಮಠಕ್ಕೆ ನೂತನ ಉತ್ತರಾಧಿಕಾರಿ ನೇಮಕ

ಬೆಂಗಳೂರು : ಸಿದ್ಧಗಂಗಾ ಪಾಲಿಟೆಕ್ನಿಕ್ ಉಪನ್ಯಾಸಕರಾಗಿರುವ ಮನೋಜ್ ಕುಮಾರ್ ಅವರನ್ನು ತುಮಕೂರಿನ ಸಿದ್ದಗಂಗಾ ಮಠದ ಉತ್ತರಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.

ಏಪ್ರಿಲ್ 23ರ ಬಸವ ಜಯಂತಿಯಂದು ಶ್ರೀಮಠದಲ್ಲಿ ನಿರಂಜನ ಪಟ್ಟಾಧಿಕಾರ ಮತ್ತು ಉತ್ತರಾಧಿಕಾರಿ ನೇಮಕ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಮನೋಜ್ ಕುಮಾರ್ ಅವರು ಸಿದ್ದಗಂಗಾ ಮಠದ ಉತ್ತರಾಧಿಕಾರಿಯಾಗಿ ದೀಕ್ಷೆ ಪಡೆಯಲಿದ್ದಾರೆ.

ಇದನ್ನೂ ಓದಿ : 116 ಮಕ್ಕಳಿಗೆ ‘ಶಿವಕುಮಾರ ಶ್ರೀಗಳ’ ಹೆಸರು ನಾಮಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಮೈಲನಹಳ್ಳಿಯ ಷಡಕ್ಷರಯ್ಯ ಮತ್ತು ವಿರೂಪಾಕ್ಷಮ್ಮ ದಂಪತಿಯ ಪುತ್ರರಾಗಿರುವ ಮನೋಜ್ ಕುಮಾರ್ ಅವರು ಬಿಎ, ಬಿಇಡಿ, ಎಂ.ಎಸ್.ಸಿ, ಎಂ.ಎ ಹಾಗೂ ವಿದ್ವತ್ ಪೂರ್ಣಗೊಳಿಸಿ ಸಿದ್ಧಗಂಗಾ ಪಾಲಿಟೆಕ್ನಿಕ್ ನಲ್ಲಿ ಉಪನ್ಯಾಸಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ಶ್ರೀ ಕಂಚುಗಲ್ ಬಂಡೇಮಠದ ಉತ್ತರಾಧಿಕಾರಿಯನ್ನಾಗಿ ಹರ್ಷ ಕೆ.ಎಂ ಅವರನ್ನು ನೇಮಕ ಮಾಡಲಾಗಿದೆ. ಇನ್ನೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಬಸವಕಲ್ಯಾಣ ಮಠಕ್ಕೆ ಗೌರೀಶ್ ಕುಮಾರ್ ಅವರನ್ನು ಉತ್ತರಾಧಿಕಾರಿಯಾಗಿ ನೇಮಿಸಲಾಗಿದೆ.

RELATED ARTICLES

Related Articles

TRENDING ARTICLES