Wednesday, January 22, 2025

Karnataka Election 2023 : ಕಾಂಗ್ರೆಸ್​​ ಅಭ್ಯರ್ಥಿಗಳ ಅಂತಿಮ ಪಟ್ಟಿ ರಿಲೀಸ್ : ಯಾರಿಗೆಲ್ಲ ಸಿಕ್ತು ಟಿಕೆಟ್..?

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್​ ತನ್ನ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ ಮಾಡಿದ್ದು, ಇನ್ನೂ ಬಾಕಿ ಉಳಿಸಿಕೊಂಡಿದ್ದ ಐದು ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ ಮಾಡಿದೆ. ಇದರೊಂದಿಗೆ ಕಾಂಗ್ರೆಸ್‌ ಈ ಬಾರಿಯ ಚುನಾವಣೆಗೆ ಎಲ್ಲಾ ಕ್ಷೇತ್ರಗಳಿಗೂ ಅಭ್ಯರ್ಥಿ ಘೋಷಣೆ ಮಾಡಿದಂತಾಗಿದೆ.

ಇನ್ನುಳಿದಂತೆ, ಕಾಂಗ್ರೆಸ್ ಬಿಡುಗಡೆ ಮಾಡಿರುವ ಅಂತಿಮಪಟ್ಟಿಯಲ್ಲಿ, ಕಾಂಗ್ರೆಸ್‌ ರಾಯಚೂರು ನಗರ ವಿಧಾಸಭಾ ಕ್ಷೇತ್ರಕ್ಕೆ ಮೊಹಮ್ಮದ್‌ ಶಲಾಂ, ಶಿಡ್ಲಘಟ್ಟ ವಿಧಾಸಭಾ ಕ್ಷೇತ್ರಕ್ಕೆ ಬಿ ವಿ ರಾಜೀವ್‌ ಗೌಡ, ರಾಜಧಾನಿ ಬೆಂಗಳೂರಿನ ಸಿ ವಿ ರಾಮನ್‌ ನಗರ ವಿಧಾನಸಭಾ ಕ್ಷೇತ್ರಕ್ಕೆ (ಪರಿಶಿಷ್ಟ ಜಾತಿ ಮೀಸಲು ) ಎಸ್‌. ಆನಂದ್‌ ಕುಮಾರ್, ಅರಕಲಗೂಡು ವಿಧಾನಸಭಾ ಕ್ಷೇತ್ರಕ್ಕೆ ಎಚ್‌.ಪಿ ಶ್ರೀಧರ್‌ ಗೌಡ, ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರಕ್ಕೆ ಇನಾಯತ್‌ ಅಲಿ ಎಂಬುವವರಿಗೆ ಟಿಕೆಟ್‌ ನೀಡಲಾಗಿದೆ.

ಇನ್ನೂ ಬಾಕಿ ಉಳಿದಿದ್ದ 5 ಕ್ಷೇತ್ರಗಳಿಗೆ ಬುಧವಾರ ತಡರಾತ್ರಿ 2 ಗಂಟೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ ಕಾಂಗ್ರೆಸ್ ಈ ಮೂಲಕ ಎಲ್ಲಾ 224 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

 

ಬಾಕಿ ಉಳಿದಿದ್ದ 5 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಇಂತಿದೆ

  • ರಾಯಚೂರು – ಮೊಹಮ್ಮದ್ ಶಾಲಮ್
  • ಶಿಡ್ಲಘಟ್ಟ – ಬಿ ವಿ ರಾಜೀವ್ ಗೌಡ
  • ಸಿ ವಿ ರಾಮನ್ ನಗರ – ಎಸ್ ಆನಂದ್ ಕುಮಾರ್
  • ಅರಕಲಗೂಡು – ಎಚ್.ಪಿ. ಶ್ರೀಧರ್ ಗೌಡ
  • ಮಂಗಳೂರು ಉತ್ತರ – ಇನಾಯತ್ ಅಲಿ

ಮೇ 10ರಂದು ಕರ್ನಾಟಕ 224 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.

RELATED ARTICLES

Related Articles

TRENDING ARTICLES