Wednesday, January 22, 2025

Big Breaking : ಕನಕಪುರದಿಂದ ಡಿ.ಕೆ ಸುರೇಶ್ ನಾಮಪತ್ರ

ಬೆಂಗಳೂರು : ನಾಮಪತ್ರ ಸಲ್ಲಿಕೆಗೆ ಕೇವಲ ಮೂರೇ ಗಂಟೆ ಬಾಕಿ ಇರುವಂತೆ ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಕನಕಪುರ ಕ್ಷೇತ್ರದಿಂದ ಡಿ.ಕೆ ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ.

ಕನಕಪುರದ ಅಧಿಕೃತ ಅಭ್ಯರ್ಥಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ನಾಮಪತ್ರ ತಿರಸ್ಕೃತವಾಗುವ ಆತಂಕದ ಹಿನ್ನೆಲೆಯಲ್ಲಿ ದಿಢೀರ್ ಈ ಬೆಳವಣಿಗೆ ನಡೆದಿದೆ. ಈ ಹಿಂದೆ ಕಂದಾಯ ಸಚಿವ ಆರ್. ಅಶೋಕ್‌ ಅವರಿಗೆ ಟಕ್ಕರ್ ನೀಡಲು ಸಂಸದ ಡಿ.ಕೆ ಸುರೇಶ್ ಸ್ಪರ್ಧೆ ಮಾಡುತ್ತಾರೆ ಎಂಬ ಸುದ್ದಿ ಹಬ್ಬಿತ್ತು.

ಇದನ್ನೂ ಓದಿ : ಕಾಂಗ್ರೆಸ್ 5ನೇ ಪಟ್ಟಿ ಬಿಡುಗಡೆ : ಶಿಗ್ಗಾವಿ ಅಭ್ಯರ್ಥಿ ಬದಲಾವಣೆ

ಕನಕಪುರದಲ್ಲಿ ಸಚಿವ ಆರ್.ಅಶೋಕ್ ಕಣಕ್ಕಿಳಿದಿದ್ದು, ಪ್ರಬಲ ಪೈಪೋಟಿ ನೀಡುತ್ತಿದ್ದಾರೆ. ಇದಕ್ಕೆ ತಿರುಗೇಟು ನೀಡಲು ಅಶೋಕ್ ಪ್ರತಿನಿಧಿಸುತ್ತಿರುವ ಸ್ವಕ್ಷೇತ್ರ ಪದ್ಮನಾಭನಗರದಲ್ಲಿ ಸಂಸದ ಡಿ.ಕೆ ಸುರೇಶ್ ಕಣಕ್ಕಿಳಿಯಲಿದ್ದಾರೆ ಎಂಬ ಮಾತು ಕೇಳಿಬಂದಿತ್ತು.

ಆದರೆ, ದಿಢೀರ್ ಬೆಳವಣಿಗೆಯಲ್ಲಿ ಸಂಸದ ಡಿ.ಕೆ ಸುರೇಶ್ ಕನಕಪುರದಲ್ಲೇ ನಾಮಪತ್ರ ಸಲ್ಲಿಸಿರುವುದು ಭಾರೀ ಕುತೂಹಲ ಕೆರಳಿಸಿದೆ. ಡಿ.ಕೆ ಸುರೇಶ್ ಅವರು ನಿನ್ನೆಯೇ ನಾಮಪತ್ರ ಸಲ್ಲಿಕೆಗೆ ಅಗತ್ಯವಾದ ಎಲ್ಲ ದಾಖಲೆಗಳನ್ನು ಸಿದ್ಧ ಮಾಡಿಕೊಂಡಿದ್ದರು.

ಆರಂಭದಿಂದಲೂ ಗೊಂದಲ

ಸಂಸದ ಡಿ.ಕೆ ಸುರೇಶ್ ಅವರು ಸಚಿವ ಮುನಿರತ್ನ ಅವರಿಗೆ ಟಾಂಗ್ ಕೊಡಲು ರಾಜರಾಜೇಶ್ವರಿನಗರ ಕ್ಷೇತ್ರದಿಂದ ಕಣಕ್ಕಿಳಿಸಲಾಗುವುದು ಎಂಬ ಸುದ್ದಿ ಹಬ್ಬಿತ್ತು. ಬಳಿಕ, ಪದ್ಮನಾಭನಗರ ಕ್ಷೇತ್ರದಿಂದ ಡಿ.ಕೆ ಸುರೇಶ್ ಹೆಸರು ಪ್ರಸ್ತಾಪವಾಗಿತ್ತು.

RELATED ARTICLES

Related Articles

TRENDING ARTICLES