Sunday, May 19, 2024

ಪಕ್ಷೇತರ ಅಭ್ಯರ್ಥಿಯಾಗಿ ಗೂಳಿಹಟ್ಟಿ ನಾಮಪತ್ರ ಸಲ್ಲಿಕೆ

ಬೆಂಗಳೂರು : ಹೊಸದುರ್ಗದಲ್ಲಿ ಪಕ್ಷೇತರ ಅಭ್ಯರ್ಥಿ ಹಾಲಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

ಬೃಹತ್ ಮೆರವಣಿಗೆ ಮೂಲಕ ಆಗಮಿಸಿದ ಗೂಳಿಹಟ್ಟಿ ಶೇಖರ್, ಕೆಂಪು ಶಲ್ಯ ಧರಿಸಿ, ಬರಿಗಾಲಲ್ಲಿ ಆಗಮಿಸಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ವೀರಭದ್ರೇಶ್ವರ ದೇವಸ್ಥಾನದಿಂದ ಟಿ.ಬಿ ಸರ್ಕಲ್‌ವರೆಗೆ ಸಹಸ್ರಾರು ಕಾರ್ಯಕರ್ತರು, ಬೆಂಬಲಿಗರ ಸಮ್ಮುಖದಲ್ಲಿ ರೋಡ್ ಶೋ ನಡೆಸಿದರು.

ಹೊಸದುರ್ಗ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಗೂಳಿಹಟ್ಟಿ ಡಿ ಶೇಖರ್ ಅವರು ಬಿಜೆಪಿ ಟಿಕೆಟ್ ಸಿಗದ ಹಿನ್ನಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದರು. ತನ್ನ ಬೆಂಬಲಿಗರೊಂದಿಗೆ ಚುನಾವಣಾ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ಜವಳಿ ಸಚಿವರಾಗಿ ಸೇವೆ

2008ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಕಂಡು ಬಿಜೆಪಿ ಸರ್ಕಾರದಲ್ಲಿ ಜವಳಿ ಸಚಿವರಾಗಿದ್ದ ಗೂಳಿಹಟ್ಟಿ ಶೇಖರ್ ನಂತರ ಚುನಾವಣೆಯಲ್ಲಿ ಸೋಲು ಕಂಡಿದ್ದರು. 2018ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು. ಇದೀಗ, ಬಿಜೆಪಿ ಪಕ್ಷದಿಂದ ಟಿಕೆಟ್ ಕೈತಪ್ಪಿರುವ ಹಿನ್ನಲೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿದ್ದಾರೆ.

ಇದನ್ನೂ ಓದಿ : ನಾಮಪತ್ರ ಸಲ್ಲಿಕೆ ಅಂತ್ಯ : ಕೊನೆ ಕ್ಷಣದಲ್ಲಿ ಅಚ್ಚರಿ ಬೆಳವಣಿಗೆ

ಹೊಸದುರ್ಗ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್ ಲಿಂಗಮೂರ್ತಿ ಅವರು ಚುನಾವಣಾ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು. ಮೊದಲು ವಿವಿಧ ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಹೊಸದುರ್ಗ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಶಾಸಕ ಬಿ.ಜಿ ಗೋವಿಂದಪ್ಪ ಅವರು ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಮಂಜುನಾಥ್ ಉಮೇದುವಾರಿಕೆ ಸಲ್ಲಿಸಿದ್ದಾರೆ.

RELATED ARTICLES

Related Articles

TRENDING ARTICLES