Wednesday, January 22, 2025

ಮೋದಿ ಮೇನಿಯಾಗೆ ಕೌಂಟ್ ಡೌನ್ : ಈ ಕ್ಷೇತ್ರದಿಂದಲೇ ಪ್ರಚಾರ ಶುರು

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 29ರಿಂದ ರಾಜ್ಯದಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ರಾಜ್ಯದಲ್ಲಿ ಒಟ್ಟು 180 ಕ್ಷೇತ್ರಗಳ ವ್ಯಾಪ್ತಿಯಲ್ಲಿ ಪ್ರಚಾರ ನಡೆಸಲಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಒಂದು ಸಮಾರಂಭದಲ್ಲಿ 10 ಕ್ಷೇತ್ರಗಳ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲು ಪ್ಲ್ಯಾನ್ ಮಾಡಿಕೊಳ್ಳಲಾಗಿದೆ. ಈಗಾಗಲೇ ನಮೋ ರೋಡ್​ ಶೋ, ಱಲಿ, ಸಾರ್ವಜನಿಕ ಸಭೆ ಆಯೋಜನೆಗೆ ಕಮಲ ನಾಯಕರು ನೀಲಿ ನಕ್ಷೆ ಸಿದ್ಧಪಡಿಸುತ್ತಿದ್ದಾರೆ.

ಏಪ್ರಿಲ್ 29ರಂದು ಪ್ರಧಾನಿ ಮೋದಿ ಅವರು ಬೀದರ್, ದಾವಣಗೆರೆ, ಚಿತ್ರದುರ್ಗ, ಬೆಂಗಳೂರಲ್ಲಿ ಪ್ರವಾಸ ಹಮ್ಮಿಕೊಳ್ಳಲಾಗಿದೆ. ಬೀದರ್​​, ದಾವಣಗೆರೆ, ಚಿತ್ರದುರ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಿ, ಭಾಷಣ ಮಾಡಲಿದ್ದಾರೆ.

ಚಿನ್ನದನಾಡಲ್ಲಿ ನಮೋ ಮೇನಿಯಾ

ಈ ನಡುವೆ ಏಪ್ರಿಲ್ 28ರಂದು ಕೋಲಾರದಲ್ಲಿ ಪ್ರಧಾನಿ ಮೋದಿ ಪ್ರಚಾರ ನಡೆಸಲಿದ್ದಾರೆ ಎನ್ನಲಾಗಿದೆ. ಮೋದಿ ಕಾರ್ಯಕ್ರಮಕ್ಕಾಗಿ ಸಿದ್ದತೆ ನಡೆಯುತ್ತಿದೆ. ಮೊದಲಿಗೆ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಭ್ಯರ್ಥಿಗಳ ಪರವಾಗಿ ಪ್ರಧಾನಿ ಮೋದಿ ಪ್ರಚಾರ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಈ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

ಇದನ್ನೂ ಓದಿ : ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಹೆಸರು ಘೋಷಣೆ : ನಟಿ ರಮ್ಯಾ, ರಾಗಾ ಸೇರಿ ಇವರಿಗೆಲ್ಲ ಸ್ಥಾನ

ರೇಷ್ಮೆನಗರಿಯಲ್ಲಿ ಮೋದಿ ಹವಾ

ಈ ಬಾರಿಯ ಚುನಾವಣೆಯಲ್ಲಿ ಕಮಲ ನಾಯಕರು ಹಳೇ ಮೈಸೂರು ಭಾಗವನ್ನು ಟಾರ್ಗೆಟ್ ಮಾಡೊದ್ದಾರೆ. ಈ ಭಾಗದಲ್ಲಿ ಕಮಲ‌ ಅರಳಿಸಲು ಬಿಜೆಪಿ ಮಾಸ್ಟರ್ ಪ್ಲಾನ್ ಮಾಡಿದೆ. ಮೇ 3ರಂದು ರಾಮನಗರ ಜಿಲ್ಲೆಯಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ನರೇಂದ್ರ ಮೋದಿ ಭಾಗಿಯಾಗಲಿದ್ದಾರೆ. ಚನ್ನಪಟ್ಟಣ ಸಮೀಪದ ಸುಮಾರು 40 ಎಕರೆ ಸ್ಥಳದಲ್ಲಿ ಬೃಹತ್ ಸಮಾವೇಶಕ್ಕೆ ಕೇಸರಿ ಕಲಿಗಳು ಮುಂದಾಗಿದ್ದಾರೆ.

ಚಾಮರಾಜನಗರದಿಂದ ನಮೋ ಮಿನಿಯಾ ಶುರು?

ಪ್ರಧಾನಿ ನರೇಂದ್ರ ಮೋದಿ ಚುನಾವಣಾ ಪ್ರಚಾರ ಚಾಮರಾಜನಗರದಿಂದ ಆರಂಭವಾಗಲಿದೆ ಎಂದು ಸಂಸದ ಪ್ರತಾಪ್​ ಸಿಂಹ ಹೇಳಿದ್ದಾರೆ. ಚಾಮರಾಜನಗರ, ಮೈಸೂರಿನಲ್ಲಿ ಮೋದಿ ಪ್ರಚಾರ ನಡೆಸಲಿದ್ದಾರೆ. ಕಾರ್ಯಕ್ರಮದ ರೂಪರೇಷೆ, ದಿನಾಂಕದ ಬಗ್ಗೆ ಚರ್ಚೆ ನಡೆದಿದೆ. ಶೀಘ್ರವೇ ಪ್ರಧಾನಿ ಮೋದಿ ಪ್ರಚಾರದ ಬಗ್ಗೆ ದಿನಾಂಕ ಪ್ರಕಟವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

RELATED ARTICLES

Related Articles

TRENDING ARTICLES