Monday, December 23, 2024

ನಾಳೆ ದ್ವಿತೀಯ PUC ಫಲಿತಾಂಶ ಪ್ರಕಟ : ರಿಸಲ್ಟ್ ನೋಡಲು ಹೀಗೆ ಮಾಡಿ

ಬೆಂಗಳೂರು : ನಾಳೆ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಲಿದೆ. ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದಾರೆ.

ಅಧಿಕೃತ ವೆಬ್ ಸೈಟ್ https://karresults.nic.in ಮೂಲಕ ಪರೀಕ್ಷಾರ್ಥಿಗಳು ಫಲಿತಾಂಶವನ್ನು ವೀಕ್ಷಿಸಬಹುದು. ಈಗಾಗಲೇ ಮೌಲ್ಯಮಾಪನ ಪ್ರಕ್ರಿಯೆ ಅಂತ್ಯವಾಗಿದ್ದು, ಮಾರ್ಚ್ 9ರಿಂದ 29 ರವರೆಗೆ ಪರೀಕ್ಷೆ ನಡೆಸಲಾಗಿತ್ತು.

ಕಳೆದ ಮಾರ್ಚ್‌ 9 ರಿಂದ 29ರ ವರೆಗೆ 2023ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಸಲಾಗಿತ್ತು. ಸುಮಾರು 7.26 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

ಇದನ್ನೂ ಓದಿ : SSLC Exam 2023 : ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ನಿಷೇಧಾಜ್ಞೆ

ರಿಸಲ್ಟ್​ ನೋಡಲು ಹೀಗೆ ಮಾಡಿ

  1. ವಿದ್ಯಾರ್ಥಿಗಳು ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ www.karresults.nic.in ಗೆ ಭೇಟಿ ನೀಡಿ.
  2. ಪೇಜ್‌ನಲ್ಲಿ ಪಿಯುಸಿ ಫಲಿತಾಂಶಕ್ಕೆ ಸಂಬಂಧಸಿದ ಲಿಂಕ್‌ ಮೇಲೆ ಕ್ಲಿಕ್‌ ಮಾಡಿ.
  3. ಆಗ ಮತ್ತೊಂದು ಪೇಜ್‌ ಓಪನ್‌ ಆಗುತ್ತದೆ. ಆ ಪೇಜ್‌ನಲ್ಲಿ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್‌ ನಂಬರ್‌ ಟೈಪ್‌ ಮಾಡಬೇಕು.
  4. ನಂತರ ‘Submit’ ಎಂಬಲ್ಲಿ ಕ್ಲಿಕ್ ಮಾಡಿ. ಆಗ ನಿಮ್ಮ ಫಲಿತಾಂಶ ಪ್ರದರ್ಶನವಾಗುತ್ತದೆ.

RELATED ARTICLES

Related Articles

TRENDING ARTICLES