Thursday, January 23, 2025

ಆರ್ ಸಿಬಿಗೆ ದಿಗ್ವಿಜಯ : ‘ಗೇಲ್ ದಾಖಲೆ ದ್ವಂಸ’ ಮಾಡಿದ ಕಿಂಗ್ ಕೊಹ್ಲಿ

ಬೆಂಗಳೂರು : ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಆರ್ ಸಿಬಿ ದಿಗ್ವಿಜಯ ಸಾಧಿಸಿದೆ. ಆ ಮೂಲಕ ಸತತ ಎರಡು ಸೋಲಿನ ಬಳಿಕ ಗೆಲುವಿನ ಹಳಿಗೆ ಮರಳಿದೆ.

ಮೊಹಾಲಿಯಲ್ಲಿ ಇಂದು ನಡೆದ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು 24 ರನ್ ಗಳ ರೋಚಕ ಗೆಲುವು ಸಾಧಿಸಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ್ದ ಆರ್ ಸಿಬಿ 175 ರನ್ ಟಾರ್ಗೆಟ್ ನೀಡಿತ್ತು. ಈ ಗುರಿ ಬೆನ್ನಟ್ಟಿದ ಪಂಜಾಬ್ 150 ರನ್ ಗಳಿಗೆ ಆಲೌಟ್ ಆಯಿತು.

ಪಂಜಾಬ್ ಪರ ಪ್ರಭಾಸಿಮ್ರಾನ್ ಸಿಂಗ್ 46 ರನ್, ಭಾಟಿಯಾ 13, ಸ್ಯಾಮ್ ಕರನ್ 10 ರನ್ ಗಳಿಸಿದರು. ಕೊನೆಯಲ್ಲಿ ಜಿತೇಶ್ ಶರ್ಮಾ 41 ರನ್ ಗಳಿಸಿ ಅಬ್ಬರಿಸಿದರೂ ಜಯ ತಂದುಕೊಡುವಲ್ಲಿ ಸಫಲರಾಗಲಿಲ್ಲ. ಆರ್ ಸಿಬಿ ಪರ ಮೊಹಮ್ಮದ್ ಸಿರಾಜ್ 4 ವಿಕೆಟ್ ಹಾಗೂ ಹಸರಂಗ-2 ವಿಕೆಟ್ ಪಡೆದು ಮಿಂಚಿದರು. ಹರ್ಷಲ್ ಪಟೇಲ್ ಹಾಗೂ ಪರ್ನೆಲ್ ತಲಾ ಒಂದು ವಿಕೆಟ್ ಪಡೆದು ಇವರಿಗೆ ಸಾಥ್ ನೀಡಿದರು.

ವಿರಾಟ್ ಕೊಹ್ಲಿ ಹೊಸ ದಾಖಲೆ

ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಅರ್ಧಶತಕ ಬಾರಿಸುವ ಮೂಲಕ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. 47 ಎಸೆತಗಳಲ್ಲಿ 1 ಸಿಕ್ಸರ್ ಹಾಗೂ 5 ಬೌಂಡರಿಗಳೊಂದಿಗೆ 59 ರನ್ ಸಿಡಿಸಿ ವಿರಾಟ್ ಕೊಹ್ಲಿ ಔಟಾದರು. ಈ ಅರ್ಧಶತಕದೊಂದಿಗೆ ವಿರಾಟ್ ಕೊಹ್ಲಿ ಟಿ-20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಅರ್ಧಶತಕ ಬಾರಿಸಿದ ಬ್ಯಾಟರ್​ಗಳ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ್ದಾರೆ.

ಗೇಲ್ ದಾಖಲೆ ದ್ವಂಸ

ಇದಕ್ಕೂ ಮುನ್ನ ವೆಸ್ಟ್ ಇಂಡೀಸ್​ನ ಕ್ರಿಸ್ ಗೇಲ್ ದ್ವಿತೀಯ ಸ್ಥಾನದಲ್ಲಿದ್ದರು. ಗೇಲ್ 463 ಟಿ-20 ಇನಿಂಗ್ಸ್​ಗಳಲ್ಲಿ 88 ಅರ್ಧಶತಕ ಬಾರಿಸಿ ದಾಖಲೆ ನಿರ್ಮಿಸಿದ್ದರು. ಇದೀಗ 366 ಟಿ20 ಇನಿಂಗ್ಸ್​ಗಳ ಮೂಲಕ ವಿರಾಟ್ ಕೊಹ್ಲಿ ಒಟ್ಟು 89 ಅರ್ಧಶತಕಗಳನ್ನು ಬಾರಿಸಿದ್ದಾರೆ. ಈ ಮೂಲಕ ಕ್ರಿಸ್ ಗೇಲ್ ಅವರನ್ನು ಹಿಂದಿಕ್ಕಿ ಹಾಫ್ ಸೆಂಚುರಿ ದಾಖಲೆ ಸರದಾರರ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದ್ದಾರೆ.

RELATED ARTICLES

Related Articles

TRENDING ARTICLES