Monday, December 23, 2024

ಈಶ್ವರಪ್ಪಗೆ ಮೋದಿ ದೂರವಾಣಿ ಕರೆ : ಯಡಿಯೂರಪ್ಪ ಏನಂದ್ರು?

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರಿಗೆ ದೂರವಾಣಿ ಕರೆ ಮಾಡಿ ಕೆಲ ನಿಮಿಷ ಸಮಾಲೋಚನೆ ನಡೆಸಿದ್ದಾರೆ. ಈ ಕುರಿತು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸ್ವತಃ ಪ್ರಧಾನಿಯವರು ಈಶ್ವರಪ್ಪ ಅವರಿಗೆ ಕರೆ ಮಾಡಿದ್ದರು. ರಾಜಕೀಯ ವಿಚಾರ ತಿಳಿದುಕೊಂಡು ಧೈರ್ಯ ತುಂಬಿದ್ದಾರೆ ಎಂದು ಹೇಳಿದ್ದಾರೆ.

ಪ್ರಧಾನಿ ಮೋದಿ ಕರೆಯಿಂದ ಈಶ್ವರಪ್ಪ ಕುಟುಂಬ ಕೂಡ ಖುಷಿಯಾಗಿದೆ. ಈ ವೇಳೆ ಈಶ್ವರಪ್ಪ ಅವರು ಪಕ್ಷದ ಅಭ್ಯರ್ಥಿಗಳ ಹೆಚ್ಚು ಗೆಲುವಿಗೆ ಓಡೋದಾಗಿ ಹೇಳಿದ್ದಾರೆ. ಈಶ್ವರಪ್ಪ ಅವರನ್ನು ಮೋದಿ ಅಭಿನಂದಿಸಿದ್ದು, ಅವರಲ್ಲಿ ಹೊಸ ಹುರುಪು ಮೂಡಿಸಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಇಂದು ರಾಜ್ಯಕ್ಕೆ ಅಮಿತ್‌ ಶಾ ಎಂಟ್ರಿ 

140ಕ್ಕೂ ಹೆಚ್ಚು ಸ್ಥಾನ ಗೆಲ್ತಿವಿ

ಇಂದು ಸಂಜೆ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಬರ್ತಿದ್ದಾರೆ. ಸಂಜೆ ಪ್ರಮುಖರ ಜೊತೆ ಸಭೆ ಇದೆ. 140ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಮತ್ತೆ ಬಿಜೆಪಿ ಅಧಿಕಾರಕ್ಕೆ ತರುವ ಆಶಯ ಇದೆ. ಅದಕ್ಕಾಗಿ ರಾಜ್ಯದಲ್ಲಿ ಓಡಾಡ್ತಿದ್ದಾರೆ. ಅದಕ್ಕೆ ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರಿಗೆ ಅಭಿನಂದನೆ ಸಲ್ಲಿಸುತ್ತೇವೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಮೋದಿ ಕರೆಗೆ ಈಶ್ವರಪ್ಪ ಆಶ್ಚರ್ಯ

ಪ್ರಧಾನಿ ನರೇಂದ್ರ ಮೋದಿಯವರ ಕರೆ ಅಂದಾಗ ನನಗೆ ಆಶ್ಚರ್ಯವಾಯ್ತು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ಹಿರಿಯರ ಸೂಚನೆ ಪ್ರಕಾರ ನಿವೃತ್ತಿ ಪತ್ರ ಬರೆದಿದ್ದೆ. ಈ ಹಿನ್ನೆಲೆ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ಜಗದೀಶ್ ಶೆಟ್ಟರ್ ಪಕ್ಷ ಬಿಡುವಾಗ ಅವರಿಗೆ ಪತ್ರ ಬರೆದಿದ್ದೆ. ನನ್ನ ನಿರ್ಧಾರ ನನಗೆ ವಿಶೇಷ ಅನಿಸಿಲ್ಲ. ಸಾಮಾನ್ಯ ಕಾರ್ಯಕರ್ತನಿಗೂ ಪಕ್ಷ ಮರೆಯೋದಿಲ್ಲ ಎನ್ನುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರೇ ದೂರವಾಣಿ ಕರೆ ಮಾಡಿರುವುದು ಸಾಕ್ಷಿಯಾಗಿದೆ ಎಂದಿದ್ದಾರೆ.

RELATED ARTICLES

Related Articles

TRENDING ARTICLES