Thursday, January 23, 2025

ಟಾಸ್ ಗೆದ್ದ ಧೋನಿ : ಹೈದರಾಬಾದ್ ವಿರುದ್ಧ ಗೆಲ್ಲುತ್ತಾ ಚೆನ್ನೈ

ಬೆಂಗಳೂರು : ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಟೂರ್ನಿಯಲ್ಲಿ ಮೂರು ಗೆಲುವಿನೊಂದಿಗೆ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಚೈನ್ನೈ ತಂಡ ತವರಿನಲ್ಲಿ ಹೈದರಾಬಾದ್ ತಂಡದ ವಿರುದ್ಧ ಸೆಣಸಲಿದೆ. ಆರ್ ಸಿಬಿ ವಿರುದ್ಧದ ಗೆಲುವಿನೊಂದಿಗೆ ಉತ್ತಮ ಮೂಡ್‌ ನಲ್ಲಿರುವ ಧೋನಿ ಪಡೆ ಮತ್ತೊಂದು ಗೆಲುವಿನ ಮೇಲೆ ಕಣ್ಣಿಟ್ಟಿದೆ.

ಮತ್ತೊಂದೆಡೆ ಸತತ ಎರಡು ಗೆಲುವಿನೊಂದಿಗೆ ಆಕ್ರಮಣಕಾರಿ ಆಟವಾಡಿದ್ದ ಹೈದರಾಬಾದ್, ಕಳೆದ ಪಂದ್ಯದಲ್ಲಿ ಮುಂಬೈ ವಿರುದ್ಧ ಸೋತಿತ್ತು. ಹೈದರಾಬಾದ್ ತಂಡಕ್ಕೆ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿದೆ. ಇಂದಿನ ಪಂದ್ಯ ಮತ್ತೊಂದು ರೋಚಕ ಕದನವಾಗಿ ಮಾರ್ಪಡುವ ಸಾಧ್ಯತೆ ಹೆಚ್ಚಿದೆ.

Wow : ಆರ್​ಸಿಬಿ ಕಪ್ ಹಿಡಿದ ಅಮೂಲ್ಯ ಅವಳಿ ಮಕ್ಕಳು : ಇಲ್ಲಿವೆ ಕ್ಯೂಟ್ ಫೋಟೋಗಳು

ಚೆನ್ನೈ ಸೂಪರ್ ಕಿಂಗ್ಸ್ ತಂಡ

ಎಂ.ಎಸ್ ಧೋನಿ (ನಾಯಕ, ವಿಕೆಟ್ ಕೀಪರ್), ಡೆವೊನ್ ಕಾನ್ವೆ, ರುತುರಾಜ್ ಗಾಯಕ್ವಾಡ್, ಅಜಿಂಕ್ಯ ರಹಾನೆ, ಮೊಯಿನ್ ಅಲಿ, ಶಿವಂ ದುಬೆ, ರವೀಂದ್ರ ಜಡೇಜಾ, ಮತಿಶ ಪತಿರಣ, ತುಷಾರ್ ದೇಶಪಾಂಡೆ, ಮಹೇಶ್ ತೀಕ್ಷಣ, ಆಕಾಶ್ ಸಿಂಗ್

ಸನ್‌ರೈಸರ್ಸ್ ಹೈದರಾಬಾದ್ ತಂಡ

ಏಡೆನ್ ಮಾರ್ಕ್ರಾಮ್(ನಾಯಕ), ಹ್ಯಾರಿ ಬ್ರೂಕ್, ಮಯಾಂಕ್ ಅಗರ್ವಾಲ್, ರಾಹುಲ್ ತ್ರಿಪಾಠಿ, ಹೆನ್ರಿಚ್ ಕ್ಲಾಸೆನ್, ಅಭಿಷೇಕ್ ಶರ್ಮಾ, ವಾಷಿಂಗ್ಟನ್ ಸುಂದರ್, ಮಾರ್ಕೊ ಯಾನ್ಸೆನ್, ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಂಡೆ, ಉಮ್ರಾನ್ ಮಲಿಕ್.

RELATED ARTICLES

Related Articles

TRENDING ARTICLES