Wednesday, January 22, 2025

‘ಸವಾಲು ಸ್ವೀಕರಿಸಿದ್ದೇವೆ’ : ಡಿಕೆಶಿ ವಿರುದ್ಧ ಬೊಮ್ಮಾಯಿ ಟ್ವಿಟಾಸ್ತ್ರ

ಬೆಂಗಳೂರು : ರಾಜ್ಯ ರಾಜಕೀಯದಲ್ಲೀಗ ಪ್ರತಿಪಕ್ಷಗಳ ನಾಯಕರು ಆಡಳಿತರೂಢ ಬಿಜೆಪಿ ವಿರುದ್ಧ ಲಿಂಗಾಯತ ಅಸ್ತ್ರ ಪ್ರಯೋಗಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಟಕ್ಕರ್ ಕೊಟ್ಟಿದ್ದಾರೆ.

ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ಸಿಎಂ ಬೊಮ್ಮಾಯಿ, ಡಿ.ಕೆ ಶಿವಕುಮಾರ್ ಅವರೇ ಲಿಂಗಾಯತ ಡ್ಯಾಮಿನ ಬಗ್ಗೆ ಮಾತನಾಡಿದ್ದೀರಿ. ಇದು ಎಷ್ಟು ಗಟ್ಟಿ ಇದೆ ಎಂದು ಅರಿವು ನಿಮಗಿಲ್ಲ. ನೀವು ಅದನ್ನು ಒಡೆಯುವ ಭ್ರಮೆಯಲ್ಲಿದ್ದೀರಿ ಎಂದು ಕುಟುಕಿದ್ದಾರೆ.

ಡಿಕೆಶಿ ಹೇಳಿಕೆ ಸವಾಲಾಗಿ ಸ್ವೀಕರಿಸಿದ್ದೇವೆ

2018ರಲ್ಲಿ ನಿಮ್ಮ ಸರ್ಕಾರ ಇದ್ದು, ಇದನ್ನು ಒಡೆಯಲು ಸಾಧ್ಯವಾಗಿಲ್ಲ. ಈಗೇನು ಮಾಡಲು ಸಾಧ್ಯ. ಮೊದಲು ನಿಮ್ಮ ಕಾಂಗ್ರೆಸ್ಸಿನ ಗುಂಡಿಯಲ್ಲಿ ನೀರಿಲ್ಲ. ಅದರ ಬಗ್ಗೆ ಚಿಂತನೆ ಮಾಡಿ, ನಿಮ್ಮ ಹೇಳಿಕೆಯನ್ನು ಸವಾಲಾಗಿ ಸ್ವೀಕರಿಸಿದ್ದೇವೆ ಎಂದು ಸಿಎಂ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.

ಲಿಂಗಾಯತ ಧರ್ಮ ಒಡೆಯುವ ಹುನ್ನಾರ

ಇದೇ ಮೇ 13ಕ್ಕೆ ಯಾರ್ ಯಾರ ಡ್ಯಾಮ್ ನಲ್ಲಿ ಎಷ್ಟು ನೀರಿದೆ ಅಂತ ಗೊತ್ತಾಗುತ್ತದೆ. ನಿಮ್ಮ ಹೇಳಿಕೆಯಿಂದ ಲಿಂಗಾಯತ ಧರ್ಮವನ್ನು ಒಡೆಯುವ ಮತ್ತೊಂದು ಹುನ್ನಾರ ಬಯಲಾಗಿದೆ. ರಾಜ್ಯದ ಜನತೆ ಇದನ್ನು ಗಮನಿಸುತ್ತಿದ್ದಾರೆ. ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಛೇಡಿಸಿದ್ದಾರೆ.

ಇದನ್ನೂ ಓದಿ : ‘ರಾಹುಲ್ ಗಾಂಧಿಯನ್ನೇ ಬಿಡಲಿಲ್ಲ’, ಇನ್ನು ನನ್ನ ಬಿಡ್ತಾರಾ? : ಡಿ.ಕೆ ಶಿವಕುಮಾರ್

ಬಿಜೆಪಿ ಲಿಂಗಾಯತರಿಗೆ ನ್ಯಾಯ ಒದಗಿಸಿದೆ

ಲಿಂಗಾಯತ ಸಮುದಾಯ ಸೇರಿ ಎಲ್ಲಾ ಸಮುದಾಯಕ್ಕೆ ನ್ಯಾಯ ಕೊಡುವಂತ ಕೆಲಸ ನಮ್ಮ ಸರ್ಕಾರ ಮಾಡಿದೆ. ಲಿಂಗಾಯತ ಸೇರಿದಂತೆ ಎಲ್ಲಾ ಸಮುದಾಯಗಳಿಗೂ ಮಾನ್ಯತೆ ನೀಡಿದ್ದು‌ ಬಿಜೆಪಿ ಸರ್ಕಾರ ಎಂದು ಸಿಎಂ ಬೊಮ್ಮಾಯಿ‌ ಹೇಳಿದ್ದಾರೆ.

ಕಾಂಗ್ರೆಸ್ ಲಿಂಗಾಯತ ಸಮಾಜವನ್ನು ಒಡೆಯುವಂತ ಕೆಲಸ ಮಾಡಿದೆ. ಕಾಂಗ್ರೆಸ್ 50 ವರ್ಷದಿಂದ ಲಿಂಗಾಯತರನ್ನು ಸಿಎಂ ಮಾಡಿಲ್ಲ. ಕಾಂಗ್ರೆಸ್‌ನಲ್ಲಿ ಎಸ್. ನಿಜಲಿಂಗಪ್ಪ ಹೊರತುಪಡಿಸಿ ಲಿಂಗಾಯತ ಸಿಎಂ ಆಗಿಲ್ಲ. ವಿರೇಂದ್ರ ಪಾಟೀಲರನ್ನು ಎಷ್ಟು ಹೀನಾಯವಾಗಿ ನಡೆಸಿಕೊಂಡಿದ್ದಾರೆ ಎನ್ನುವುದು ಎಲ್ಲರಿಗೂ ಗೊತ್ತಿದೆ ಎಂದು ಕುಟುಕಿದ್ದಾರೆ.

RELATED ARTICLES

Related Articles

TRENDING ARTICLES