ನಾವು ಯಾಕೆ ಅಕ್ಷಯ ತೃತೀಯವನ್ನು ಆಚರಣೆ ಮಾಡಬೇಕು ಎಂಬುವುದರ ಸಂಪೂರ್ಣ ಮಾಹಿತಿ ಇಲ್ಲಿಂದೆ ನೋಡಿ..
ಹೌದು, ಪ್ರತಿ ವರ್ಷ ವೈಶಾಖ ಮಾಸದ ಶುಕ್ಲ ಪಕ್ಷದ ತೃತೀಯ ತಿಥಿಯಂದು ನಾವು ಅಕ್ಷಯ ತೃತೀಯ ಹಬ್ಬವನ್ನು ಆಚರಿಸಲಾಗುತ್ತದೆ. ಹಿಂದೂ ಧರ್ಮದಲ್ಲಿ ಈ ದಿನಕ್ಕೆ ವಿಶೇಷ ಮಹತ್ವವಿದೆ. ಅಕ್ಷಯ ತೃತೀಯ ದಿನದಂದು ಚಿನ್ನವನ್ನು ಖರೀದಿಸುವುದು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ. ಈ ವರ್ಷ ಅಕ್ಷಯ ತೃತೀಯವನ್ನು ಏಪ್ರಿಲ್ 22 ರಂದು ಆಚರಿಸಲಾಗುತ್ತದೆ. ಈ ದಿನದಂದು ಲಕ್ಷ್ಮಿ ಮತ್ತು ಕುಬೇರ ದೇವರನ್ನು ಪೂಜಿಸುವುದರಿಂದ ಮನೆಯಲ್ಲಿ ಸುಖ-ಸಮೃದ್ಧಿ, ಸಂಪತ್ತು-ಅದೃಷ್ಟ ನೆಲೆಸುತ್ತದೆ ಎನ್ನುವ ನಂಬಿಕೆಯಿದೆ.
ಅಕ್ಷಯ ತೃತೀಯ ಇತಿಹಾಸ ಮತ್ತು ಮಹತ್ವ
ಪುರಾಣ ಮತ್ತು ಪ್ರಾಚೀನ ಇತಿಹಾಸದ ಪ್ರಕಾರ, ಈ ಅಕ್ಷಯ ತೃತೀಯ ದಿನದಂದು ಬಹಳಷ್ಟು ಘಟನೆಗಳು ನಡೆದಿವೆ. ಈ ದಿನದ ಇತಿಹಾಸವನ್ನು ಹೇಳುವುದಾದರೆ, ಒಂದು ದಂತಕಥೆಯ ಪ್ರಕಾರ, ಅಕ್ಷಯ ತೃತೀಯ ದಿನದಂದು ನಾಲ್ಕು ಯುಗಗಳಲ್ಲಿ ಎರಡನೇ ಯುಗವಾದ ತ್ರೇತಾಯುಗವು ಪ್ರಾರಂಭವಾಯಿತು ಎಂದು ಹೇಳಲಾಗುತ್ತದೆ. ಭಗವಾನ್ ವಿಷ್ಣುವಿನ ಆರನೇ ಅವತಾರವಾದ ಪರಶುರಾಮನು ಅಕ್ಷಯ ತೃತೀಯ ದಿನದಂದು ಜನಿಸಿದರು ಎಂದು ಹೇಳಲಾಗುತ್ತದೆ.
ಇದನ್ನೂ ಓದಿ: ಅಕ್ಷಯ ತೃತೀಯ ಯಾವಾಗ, ಹೇಗೆ ಆಚರಿಸಬೇಕು? : ಇಲ್ಲಿದೆ ನೋಡಿ ಮಾಹಿತಿ