Tuesday, December 24, 2024

ರಾಹುಲ್ ಗಾಂಧಿ ಆಗಮನದಿಂದ ‘ಕಾಂಗ್ರೆಸ್ಸಿಗರಿಗೆ ಚೈತನ್ಯ’ : ಆನಂದ ನ್ಯಾಮಗೌಡ

ಬೆಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೂಡಲಸಂಗಮಕ್ಕೆ ಆಗಮಿಸುತ್ತಿರುವುದು ಕಾಂಗ್ರೆಸ್ಸಿಗರಿಗೆ ಚೈತನ್ಯ ತುಂಬಲಿದೆ ಎಂದು ಜಮಖಂಡಿ ಶಾಸಕ ಆನಂದ ನ್ಯಾಮಗೌಡ ಅಭಿಪ್ರಾಯಪಟ್ಟಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ರಾಮೇಶ್ವರ ಕಾಲೋನಿಯಲ್ಲಿ ಇಂದು ಶಾಸಕ ಆನಂದ ನ್ಯಾಮಗೌಡ ಅವರು ಮನೆ ಮನೆ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ.

ಬಸವಣ್ಣನವರ ಐಕ್ಯತಾಣ, ತ್ರಿವೇಣಿ ಸಂಗಮದ ನಾಡು ಕೂಡಲಸಂಗಮಕ್ಕೆ ಏಪ್ರಿಲ್ 23 ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗಮಿಸುತ್ತಿರುವುದು ಬಾಗಲಕೋಟೆ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಇನ್ನಷ್ಟು ಪರಿಣಾಮ ಬೀರಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಬಿಜೆಪಿಗೆ ಬಿಗ್ ಶಾಕ್ : ಕಮಲ ಬಿಟ್ಟು ‘ಕೈ’ ಹಿಡಿದ ಆನಂದಸಿಂಗ್ ಸಹೋದರಿ

ಬಿಜೆಪಿ ನಾಯಕರದ್ದು ನಾಟಕ

ರಾಹುಲ್ ಗಾಂಧಿ ದೇಶದ ತುಂಬೆಲ್ಲಾ ಸಂಚರಿಸಿ ಬಂದವರು. ಅವರು ಈಗ ಕೂಡಲಸಂಗಮಕ್ಕೆ ಬರುತ್ತಿರೋದು ಕಾಂಗ್ರೆಸ್ ಪಕ್ಷಕ್ಕೆ ವರದಾನವಾಗಲಿದೆ. ಆದರೆ ಈ ಬಗ್ಗೆ ಬಿಜೆಪಿಯವರು ಟೀಕೆ ಮಾಡೋದು ದುರದೃಷ್ಟಕರ. ಈ ಹಿಂದೆ ಬಿಜೆಪಿಗರು ಮಠಮಾನ್ಯಗಳಿಗೆ ಸ್ಪಂದಿಸುವ ನಾಟಕವಾಡಿದರು. ಆದರೆ, ನಿಜಕ್ಕೂ ಲಿಂಗಾಯತರಿಗೆ ಕಾಂಗ್ರೆಸ್ ಪಕ್ಷದಲ್ಲಿ ಹೆಚ್ಚಿನ ಮನ್ನಣೆ ಇದೆ. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರೋದು ಖಚಿತ ಎಂದು ಶಾಸಕ ಆನಂದ ನ್ಯಾಮಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಸವಜಯಂತಿ ಕಾರ್ಯಕ್ರಮದಲ್ಲಿ ಭಾಗಿ

ನಾಳೆ (ಏ.23) ವಿಜಯಪುರ ನಗರಕ್ಕೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆಗಮಿಸಲಿದ್ದಾರೆ. ನಾಳೆ ಬಸವವ ಜಯಂತಿ ಆಚರಣೆ ಮಾಡಲಾಗುತ್ತಿದ್ದು, ಕೂಡಲ ಸಂಗಮಕ್ಕೆ ಆಗಮಿಸುತ್ತಿದ್ದಾರೆ. ಇದು ಪಕ್ಷದ ಕಾರ್ಯಕ್ರಮ ಅಲ್ಲ, ಬಸವ ಭಕ್ತರ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಭಾಗಿಯಾಗಲಿದ್ದಾರೆ.

RELATED ARTICLES

Related Articles

TRENDING ARTICLES