Monday, May 6, 2024

ರಿಸ್ಕ್ ತೆಗೆದುಕೊಳ್ಳೋದ್ರಲ್ಲಿ ‘ಬಿಜೆಪಿ ವರಿಷ್ಠರು ನಿಸ್ಸೀಮರು’ : ಬಿ.ವೈ ವಿಜಯೇಂದ್ರ

ಬೆಂಗಳೂರು : ಬಿಜೆಪಿ ಹೈಕಮಾಂಡ್ ಈ ಬಾರಿ ಹೊಸ ಮುಖಗಳಿಗೆ ಮಣೆ ಹಾಕಿರುವ ವಿಚಾರವಾಗಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಿಸ್ಕ್ ತೆಗೆದುಕೊಳ್ಳುವುದರಲ್ಲಿ ಬಿಜೆಪಿ ಹೈಕಮಾಂಡ್ ನಿಸ್ಸೀಮರು. ಪಕ್ಷದ ಹಿತದೃಷ್ಟಿಯಿಂದ ರಿಸ್ಕ್ ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

ಯಡಿಯೂರಪ್ಪ ಅವರು ಒಂದು‌ ಶಕ್ತಿ. ಯಡಿಯೂರಪ್ಪ ಅವರನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ. ವರುಣಾ ಕ್ಷೇತ್ರದಲ್ಲಿ ಪ್ರಚಾರ ಕಾರ್ಯಕರ್ತರ ಸಭೆ ನಡೆಸಿದ್ದೇನೆ. ಈ ಬಾರಿ ವರುಣಾ ಮತದಾರರು ಬದಲಾವಣೆ ಬಯಸಿದ್ದಾರೆ ಎಂದು ಸಿದ್ದರಾಮಯ್ಯಗೆ ಪರೋಕ್ಷವಾಗಿ ಕುಟುಕಿದ್ದಾರೆ.

ಬಿಜೆಪಿಗೆ ಸ್ಪಷ್ಟ ಬಹುಮತ

ಬಿ.ಎಸ್​ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಮಾಡಿರುವ ಕೆಲಸ, ಕಾಮನ್ ಸಿಎಂ ಬಸವರಾಜ ಬೊಮ್ಮಾಯಿ ಅವರ ಅಭಿವೃದ್ಧಿ ಕೆಲಸ ಬಿಜೆಪಿಗೆ ಸ್ಪಷ್ಟ ಬಹುಮತ ತಂದು ಕೊಡುತ್ತದೆ. ಬಿಜೆಪಿ ಒಬ್ಬರು ಇಬ್ಬರ ಮೇಲೆ ಅವಲಂಬನೆಯಾಗಿರುವ ಪಕ್ಷ ಅಲ್ಲ. ಕಾರ್ಯಕರ್ತರಿಂದ ಕಾರ್ಯಕರ್ತರಿಗಾಗಿ ಇರುವ ಪಕ್ಷ ಎಂದು ವಿಜಯೇಂದ್ರ ಬಣ್ಣಿಸಿದ್ದಾರೆ.

ಇದನ್ನೂ ಓದಿ : ನಿಮ್ಮ ‘ಕೈ’ ಕೆಸರಿನಲ್ಲಿ ನಮ್ಮ ‘ಕಮಲ’ ಅರಳಿಸಿ : ಸೀಕಲ್ ರಾಮಚಂದ್ರಗೌಡ

ಶೆಟ್ಟರ್ ಪಕ್ಷ ಬಿಟ್ಟಿದ್ದಕ್ಕೆ ನೋವಾಗಿದೆ

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷ ಸೇರಿರುವ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ವೀರೇಂದ್ರ ಪಾಟೀಲ್ ಅವರನ್ನು ಕಾಂಗ್ರೆಸ್ ಸರಿಯಾಗಿ ನಡೆಸಿಕೊಂಡಿಲ್ಲ. ಹಿರಿಯರ ಬಗ್ಗೆ ಕೀಳಾಗಿ ನಾನು ಮಾತನಾಡುವುದಿಲ್ಲ. ಆದರೆ, ಅವರು ಹೋಗಿರುವುದು ನೋವಾಗಿದೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಪಕ್ಷೇತರರಾಗಿ ನಿಲ್ಲಬಹುದಿತ್ತು

ವೀರಶೈವ ಲಿಂಗಾಯತ ಅಂತಾ ಒಡೆಯಲು ಹೋದ ಕಾಂಗ್ರೆಸ್ ಪಕ್ಷ ಸೇರಿದ್ದು ನೋವಾಗಿದೆ. ಕಾಂಗ್ರೆಸ್ ಸೇರುವ ಬದಲು ಪಕ್ಷೇತರರಾಗಬಹುದಿತ್ತು. ಬೇರೆ ಬೇರೆ ಜಾತಿಗಳನ್ನು ಒಡೆಯಲು ಪ್ರಯತ್ನಿಸಿದ್ದು ಕಾಂಗ್ರೆಸ್. ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷ ಸೇರಿದ್ದು ನಿಜಕ್ಕೂ ದುರಂತ. ಸಮಾಜ ಸಮಾಜಗಳನ್ನು ಒಡೆದು ಬೆಂಕಿ ಹಾಕುವ ಪಕ್ಷ ಕಾಂಗ್ರೆಸ್. ಅವರಿಗೆ ವೀರಶೈವ ಅಥವಾ ದಲಿತ ಸಮಾಜದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

RELATED ARTICLES

Related Articles

TRENDING ARTICLES