Tuesday, May 21, 2024

ತಂದೆಯನ್ನು ಕೆಣಕಿದ ‘ಡಿಕೆಶಿಗೆ ಟಕ್ಕರ್’ ಕೊಟ್ಟ ವಿಜಯೇಂದ್ರ

ಬೆಂಗಳೂರು : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬಿ.ಎಸ್‌ ಯಡಿಯೂರಪ್ಪ ಅವರನ್ನು ಮುಗಿಸಲು ಪ್ಲಾನ್ ಮಾಡಿದ್ದರು ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿಕೆಗೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ತಿರುಗೇಟು ನೀಡಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಟಕ್ಕರ್ ಕೊಟ್ಟಿದ್ದಾರೆ.

ಯಡಿಯೂರಪ್ಪ ಅವರು ಈಗಾಗಲೇ ಸ್ವಇಚ್ಛೆಯಿಂದ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದಿದ್ದಾರೆ. ಅವರನ್ನು ರಾಜಕೀಯವಾಗಿ ಮುಗಿಸಲು ಬಿಜೆಪಿಯಲ್ಲಿ ಪ್ಲ್ಯಾನ್ ಮಾಡಿಲ್ಲ. ಕಾಂಗ್ರೆಸ್ ನಾಯಕರ ಹೇಳಿಕೆ ಸತ್ಯಕ್ಕೆ ದೂರವಾದದ್ದು ಎಂದು ವಿಜಯೇಂದ್ರ ಹೇಳಿದ್ದಾರೆ.

ಇದನ್ನೂ ಓದಿ : ಸಾಯೋ ಸಮಯದಲ್ಲೂ ಎಲೆಕ್ಷನ್ ಗೆ ನಿಲ್ಲಬೇಕಾ? : ಮುನಿಸ್ವಾಮಿ ವಿವಾದಾತ್ಮಕ ಹೇಳಿಕೆ

ಕಾಂಗ್ರೆಸ್​ ಕಣ್ಣೊರೆಸುವ ತಂತ್ರ ಮಾಡ್ತಿದೆ

ಯಡ್ಡಿಯೂರಪ್ಪ, ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ಎಲ್ಲಾ ಬಿಜೆಪಿ ನಾಯಕರು ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದಾರೆ.  ಬಿಜೆಪಿ ಸರ್ಕಾರ ರಾಜ್ಯದ ಜನರಿಗೆ ಸಾಮಾಜಿಕ ನ್ಯಾಯ ಕೊಡುವ ಕೆಲಸ ಮಾಡಿದೆ. ಕಾಂಗ್ರೆಸ್​ ಮೀಸಲಾತಿ ವಿಚಾರದಲ್ಲಿ ಕಣ್ಣೊರೆಸುವ ತಂತ್ರ ಅನುಸರಿಸುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಕುಟುಕಿದ್ದಾರೆ.

ಮೇ 13ರಂದು ಯಾವ ಡ್ಯಾಂ​ ಒಡೆಯುತ್ತೆ ಎಂಬ ಡಿಕೆಶಿ ಹೇಳಿಕೆಗೆ, ವೀರೇಂದ್ರ ಪಾಟೀಲ್​ 170ಕ್ಕೂ ಹೆಚ್ಚು ಸ್ಥಾನ ಗೆಲ್ಲಿಸಿಕೊಂಡು ಬಂದಿದ್ದರು. ಬಳಿಕ ವೀರೇಂದ್ರ ಪಾಟೀಲ್​ರಿಗೆ ಕಾಂಗ್ರೆಸ್ ಪಕ್ಷ ಮೋಸ ಮಾಡಿತು. ವೀರಶೈವ ಲಿಂಗಾಯತ ಸಮಾಜ ಯಾವಾಗಲೂ ಬಿಜೆಪಿ ಪರ ಇದೆ. ಲಿಂಗಾಯತರ ಜೊತೆ ಒಕ್ಕಲಿಗ, ಕುರುಬ, ಎಸ್ಸಿ,ಎಸ್ಟಿ ಸಮುದಾಯ ಇದೆ. ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಬಿಜೆಪಿ ಧ್ಯೇಯೋದ್ದೇಶವಾಗಿದೆ ಎಂದು ಹೇಳಿದ್ದಾರೆ.

RELATED ARTICLES

Related Articles

TRENDING ARTICLES