Wednesday, January 22, 2025

Big Breaking : ಎಚ್.ಡಿ. ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಜ್ವರದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಅವರಿಗೆ ವಿಶ್ರಾಂತಿಯ ಅಗತ್ಯವಿದೆ ಎಂದು ವೈದ್ಯರು ಸಲಹೆ ನೀಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಎಚ್‌.ಡಿ ಕುಮಾರಸ್ವಾಮಿ ಅವರು, ಗುಣಮುಖರಾದ ನಂತರ ಪ್ರಚಾರ ಕಾರ್ಯದಲ್ಲಿ ತೊಡಗಿಕೊಳ್ಳುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ : ಎರಡು ಬಾರಿ ಹೃದಯ ಚಿಕಿತ್ಸೆ ಮಾಡಿಸಿಕೊಂಡರೂ, ನಿಮಗಾಗಿ ಯೋಚನೆ ಮಾಡ್ತಿದ್ದೀನಿ : ಕುಮಾರಸ್ವಾಮಿ

ಆತಂಕಕ್ಕೆ ಒಳಗಾಗುವುದು ಬೇಡ

ಜೆಡಿಎಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಈ ಬಗ್ಗೆ ಆತಂಕಕ್ಕೆ ಒಳಗಾಗುವುದು ಬೇಡ. ವೈದ್ಯರ ಸಲಹೆಯಂತೆ ನಾನು ವಿಶ್ರಾಂತಿ ಪಡೆಯುತ್ತಿದ್ದೇನೆ. ಆರೋಗ್ಯ ಚೇತರಿಕೆ ಬಳಿಕ ಎಂದಿನಂತೆ ಚುನಾವಣಾ ಪ್ರಚಾರ ಕೈಗೊಂಡು ನಿಮ್ಮನ್ನು ಭೇಟಿಯಾಗುತ್ತೇನೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

ರಾಮನಗರ ಭೇಟಿ ರದ್ದು

ಎಚ್.ಡಿ ಕುಮಾರಸ್ವಾಮಿ ಅವರು ರಾಮನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಪರವಾಗಿ ಚುನಾವಣಾ ಪ್ರಚಾರ ಮಾಡಬೇಕಿತ್ತು. ರಾಮನಗರ ಕ್ಷೇತ್ರ ವ್ಯಾಪ್ತಿಯ ಹಾಗಲಹಳ್ಳಿ, ಗುಡ್ಡದಹಳ್ಳಿ, ಸುಗ್ಗನಹಳ್ಳಿ, ಬಿಳಗುಂಬ, ಮಾಯಗಾನಹಳ್ಳಿ‌ ಸೇರಿದಂತೆ ವಿವಿಧ ಭಾಗಗಳಲ್ಲಿ ಪ್ರಚಾರದ ಸಿದ್ಧತೆ ನಡೆಸಲಾಗಿತ್ತು. ಆದರೆ, ಅನಾರೋಗ್ಯದ ಕಾರಣ ಎಚ್ ಡಿಕೆ ಪ್ರಚಾರ ಕಾರ್ಯಗಳು ರದ್ದಾಗಿದೆ.

RELATED ARTICLES

Related Articles

TRENDING ARTICLES