Saturday, April 20, 2024

ಎರಡೂ ದಿನ ‘ನನ್ನ ಹೆಲಿಕಾಪ್ಟರ್’ ಅನ್ನೇ ಪರಿಶೀಲಿಸಿದ್ದಾರೆ : ಫೋಟೋ ಹಂಚಿಕೊಂಡ ಡಿಕೆಶಿ

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಹೆಲಿಕಾಪ್ಟರ್‌ ಅನ್ನು ಚುನಾವಣಾಧಿಕಾರಿಗಳು ತಪಾಸಣೆ ಮಾಡಿದ್ದಾರೆ. ಈ ಸಂಬಂಧ ಸ್ವತಃ ಡಿಕೆಶಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಚುನಾವಣಾ ಆಯೋಗದ ಅಧಿಕಾರಿಗಳು ತಮ್ಮ ಹೆಲಿಕಾಪ್ಟರ್​ ತಪಾಸಣೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಕೆಲ ಫೋಟೋಗಳನ್ನು ಹಂಚಿಕೊಂಡು​ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಚುನಾವಣಾ ಆಯೋಗದ ಅಧಿಕಾರಿಗಳು ನಿನ್ನೆ ಮತ್ತು ಇಂದು ಎರಡೂ ದಿನ ನನ್ನ ಹೆಲಿಕಾಪ್ಟರ್‌ ಅನ್ನೇ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿಗಳು ಪ್ರತಿದಿನ ಪರಿಶೀಲಿಸಲು ನನ್ನ ಅಭ್ಯಂತರವೇನಿಲ್ಲ. ಆದರೆ, ಕಾಲಮಿತಿಯೊಳಗೆ ಪರಿಶೀಲನೆ ಮುಗಿಸಿ ಚುನಾವಣಾ ಪ್ರಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ : ‘ಸಿದ್ದು-ಡಿಕೆಶಿ’ ಇಬ್ಬರನ್ನೂ ಜೈಲಿಗೆ ಹಾಕ್ತೀವಿ : ಕೆ.ಎಸ್ ಈಶ್ವರಪ್ಪ ಗುಡುಗು

ಧರ್ಮಸ್ಥಳ, ಶೃಂಗೇರಿಗೆ ಭೇಟಿ

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ನಿನ್ನೆ ಕುಟುಂಬ ಸಮೇತರಾಗಿ ಧರ್ಮಸ್ಥಳ ಹಾಗೂ ಶೃಂಗೇರಿಗೆ ಭೇಟಿ ನೀಡಿದ್ದರು. ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ಚುನಾವಣಾಧಿಕಾರಿಗಳು ಡಿಕೆಶಿ ಹೆಲಿಕಾಪ್ಟರ್​ ತಪಾಸಣೆ ನಡೆಸಿದ್ದರು.

ಇಂದು ಕೊಲ್ಲೂರು ಮೂಕಾಂಬಿಕಾ ದರ್ಶನ

ಇಂದು ಡಿ.ಕೆ ಶಿವಕುಮಾರ್ ಅವರು ಕೊಲ್ಲೂರಿಗೆ ಭೇಟಿ ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಉಡುಪಿ ಜಿಲ್ಲೆಯ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯುಳ್ಳ ಕ್ಷೇತ್ರವಾಗಿದ್ದು, ಕರ್ನಾಟಕದಲ್ಲಿನ ‘ಸಪ್ತ ಮುಕ್ತಿಸ್ಥಳ’ ತೀರ್ಥಯಾತ್ರಾ ತಾಣಗಳ ಪೈಕಿ ಒಂದಾಗಿದೆ. ಇಂದು ಈ ಪ್ರಸಿದ್ಧ ಕ್ಷೇತ್ರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ, ದೇವರ ಆಶೀರ್ವಾದ ಪಡೆದು ನಾಡಿನ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದೆ ಎಂದು ಹೇಳಿದ್ದಾರೆ.

RELATED ARTICLES

Related Articles

TRENDING ARTICLES