ಬೆಂಗಳೂರು : ನಿಶ್ಯಕ್ತಿ ಮತ್ತು ಅನಾರೋಗ್ಯದ ಲಕ್ಷಣಗಳು ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆ, ಮಾಜಿ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದೀಗ, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.
ಅನಾರೋಗ್ಯದ ನಡುವೆಯೂ ಎಚ್.ಡಿ ಕುಮಾರಸ್ವಾಮಿ ಅವರು ಚುನಾವಣೆಗೆ ಪ್ಲ್ಯಾನ್ ಮಾಡುತ್ತಿದ್ದಾರೆ. ಇದು ಅವರ ರಾಜಕೀಯ ಬದ್ಧತೆ ಎಂದು ಜೆಡಿಎಸ್ ಕಾರ್ಯಕರ್ತರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ಕುಮಾರಸ್ವಾಮಿ ಅವರು ಇಂದು ಜೆಡಿಎಸ್ ನಾಯಕರೊಂದಿಗೆ ರೋಡ್ ಮ್ಯಾಪ್ ಕುರಿತು ಚರ್ಚೆ ಮಾಡಿದ್ದಾರೆ. ಏಪ್ರಿಲ್ 28ರವರೆಗೆ ಬೆಂಗಳೂರು-ಮೈಸೂರಿನಲ್ಲಿ ಪ್ರಚಾರ ಹಮ್ಮಿಕೊಳ್ಳಲಾಗಿದ್ದು, ಆರೋಗ್ಯ ಸಂಪೂರ್ಣ ಸುಧಾರಣೆ ಆದ ಬಳಿಕ ಉಳಿದ ಭಾಗದಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ. ದಿನಕ್ಕೆ 8ಕ್ಕೂ ಹೆಚ್ಚು ಕ್ಷೇತ್ರದ ಪ್ರಚಾರಕ್ಕೆ ಪ್ಲ್ಯಾನ್ ಮಾಡಲಾಗಿದ್ದು, ಸರಿಯಾಗಿ ಕೋ ಆರ್ಡಿನೇಶನ್ ಮಾಡುವಂತೆ ಮುಖಂಡರಿಗೆ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ : ಹೆಚ್.ಡಿ ಕುಮಾರಸ್ವಾಮಿಯ ಎಲ್ಲಾ ಕಾರ್ಯಕ್ರಮಗಳು ರದ್ದು
ಎಚ್ಡಿಕೆ ಆರೋಗ್ಯ ಹೇಗಿದೆ?
ಕುಮಾರಸ್ವಾಮಿ ಅವರು ಆರೋಗ್ಯದ ಬಗ್ಗೆ ಮಣಿಪಾಲ್ ಆಸ್ಪತ್ರೆಯಿಂದ ಮಾಹಿತಿ ಲಭ್ಯವಾಗಿದೆ. ನಿನ್ನೆ ಕುಮಾರಸ್ವಾಮಿ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ವೈರಲ್ ಸೋಂಕು, ಜ್ವರ, ಸುಸ್ತಿನಿಂದ ಚಿಕಿತ್ಸೆಗೆ ದಾಖಲಾಗಿದ್ದರು. ಖ್ಯಾತ ವೈದ್ಯ ಸತ್ಯನಾರಾಯಣ ಮೈಸೂರು ನೇತ್ರತ್ವದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯಕೀಯ ಟೆಸ್ಟ್ ಮಾಡಿದ್ದ ವೈದ್ಯರು, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಮಾಹಿತಿ ನೀಡಿದ್ದಾರೆ.