Monday, December 23, 2024

ಯುವಕನಿಗೆ ಎಂ.ಬಿ ಪಾಟೀಲ್ ಕಪಾಳಮೋಕ್ಷ

ಬೆಂಗಳೂರು : ಏನು ಕೆಲಸ ಮಾಡಿದ್ದೀರಿ ಎಂದು ಪ್ರಶ್ನಿಸಿದ್ದ ಯುವಕನಿಗೆ ಮಾಜಿ ಸಚಿವ ಎಂ.ಬಿ ಪಾಟೀಲ್ ಕಪಾಳ ಮೋಕ್ಷ ಮಾಡಿದ ಘಟನೆ ಬಬಲೇಶ್ವರ ಕ್ಷೇತ್ರದಲ್ಲಿ ನಡೆದಿದೆ.

ಶನಿವಾರ ತಡರಾತ್ರಿ ಪ್ರಚಾರಕ್ಕೆ ಬಂದಾಗ ವಿಜಯಪುರದ ದೇವಾಪೂರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬಬಲೇಶ್ವರ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಎಂಬಿ ಪಾಟೀಲ್ ಪ್ರಚಾರಕ್ಕೆಂದು ಆಗಮಿಸಿದ್ದರು. ಈ ವೇಳೆ ಬಬಲೇಶ್ವರ ಕ್ಷೇತ್ರದ ದೇವಾಪೂರ ಗ್ರಾಮದ ಯುವಕ ಹಣಮಂತ ತುಪ್ಪದ ಮೇಲೆ ಕಪಾಳ ಮೋಕ್ಷ ಮಾಡಿದ್ದಾರೆ.

ಬಬಲೇಶ್ವರ ಕ್ಷೇತ್ರದ ದೇವಾಪೂರ ಗ್ರಾಮದ ಯುವಕ, ಎಲೆಕ್ಷನ್ ಬರ್ತಿದ್ದಂತೆ 5 ವರ್ಷದ ನಂತರ ಗ್ರಾಮಕ್ಕೆ ಆಗಮಿಸಿದ್ದೀರಿ, ನಮ್ಮ ಗ್ರಾಮಕ್ಕೆ ಏನು ಅಭಿವೃದ್ಧಿ ಮಾಡಿದ್ದೀರಿ ಎಂದು ಪ್ರಶ್ನಿಸಿದ್ದಾನೆ. ಇದರಿಂದಾಗಿ ಕೋಪಗೊಂಡ ಎಂ.ಬಿ. ಪಾಟೀಲ್ ತುಂಬಿದ ಸಭೆಯಲ್ಲೇ ಯುವಕನಿಗೆ ಕಪಾಳ ಮೋಕ್ಷ ಮಾಡಿದ್ದಾರೆ. ಎಂ.ಬಿ ಪಾಟೀಲ್‌ ಕೃತ್ಯಕ್ಕೆ ಮತದಾರರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ರಾಹುಲ್ ಗಾಂಧಿ ಆಗಮನದಿಂದ ‘ಕಾಂಗ್ರೆಸ್ಸಿಗರಿಗೆ ಚೈತನ್ಯ’ : ಆನಂದ ನ್ಯಾಮಗೌಡ

ಕೈನಾಯಕರಿಗೆ ಮುಜುಗರ

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಇಂದು ವಿಜಯಪುರ ನಗರಕ್ಕೆ ಆಗಮಿಸಿದ್ದಾರೆ. ಬಸವವ ಜಯಂತಿ ಆಚರಣೆ ಮಾಡಲಾಗುತ್ತಿದ್ದು, ಕೂಡಲ ಸಂಗಮಕ್ಕೆ ಆಗಮಿಸಿದ್ದಾರೆ. ಇದು ಪಕ್ಷದ ಕಾರ್ಯಕ್ರಮ ಅಲ್ಲ, ಬಸವ ಭಕ್ತರ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಭಾಗಿಯಾಗಲಿದ್ದಾರೆ. ಈ ವೇಳೆ ಎಂ.ಬಿ ಪಾಟೀಲ್ ಯುವಕನಿಗೆ ಕಪಾಳಮೋಕ್ಷ ಮಾಡಿರುವ ಪ್ರಕರಣ ಕಾಂಗ್ರೆಸ್​ ಪಕ್ಷಕ್ಕೆ ಮುಜುಗರ ತರಿಸಿದೆ. ಈ ಹಿಂದೆ ಪಾವಗಡ ಶಾಸಕ ಹಾಗೂ ಮಾಜಿ ಸಚಿವ ವೆಂಕಟರಮಣಪ್ಪ ಅವರು ಸಹ ಯುವಕನಿಗೆ ಕಪಾಳಮೋಕ್ಷ ಮಾಡಿದ್ದರು.

RELATED ARTICLES

Related Articles

TRENDING ARTICLES