Wednesday, January 22, 2025

‘ಕೈ’ಗೆ ಬಿಗ್ ಶಾಕ್ : ಅಖಂಡ ಶ್ರೀನಿವಾಸ್‌ಮೂರ್ತಿ ಬಿಎಸ್‌ಪಿ ಸೇರ್ಪಡೆ

ಬೆಂಗಳೂರು: ಕಾಂಗ್ರೆಸ್ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಬೆಂಗಳೂರಿನ ಪುಲಿಕೇಶಿ ನಗರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಬಿಎಸ್‌ಪಿ ಸೇರ್ಪಡೆಯಾಗಿದ್ದಾರೆ.

ಕಾಂಗ್ರೆಸ್ ಟಿಕೆಟ್‌ಗಾಗಿ ಕೊನೆಯ ಕ್ಷಣದವರೆಗೆ ಅಖಂಡ ಕಸರತ್ತು ನಡೆಸಿದ್ದರು. ಈ ಕುರಿತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಹಲವಾರು ಬಾರಿ ಚರ್ಚೆ ನಡೆಸಿದ್ದರು. ಆದರೂ, ಟಿಕೆಟ್ ಸಿಗದ ಕಾರಣಕ್ಕೆ ಅವರು ಬಿಎಸ್‌ಪಿ ಪಕ್ಷದಿಂದ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ.

ಕಳೆದ ವಾರ ಮೂರ್ತಿ ಅವರು ಸುಮಾರು 2,36,000 ಜನಸಂಖ್ಯೆಯನ್ನು ಹೊಂದಿರುವ ಮೀಸಲು ಪುಲಕೇಶಿನಗರ ವಿಧಾನಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು, ಈ ಕ್ಷೇತ್ರದಲ್ಲಿ ಶೇ. 50 ರಷ್ಟು ಮುಸ್ಲಿಮರು ದಲಿತರು, ಹಿಂದೂಗಳು ಮತ್ತು ಇತರ ಸಮುದಾಯದವರಿದ್ದಾರೆ.

ಇನ್ನೂ ಅಖಂಡ ಶ್ರೀನಿವಾಸ್‌ಮೂರ್ತಿ, 2018 ರಲ್ಲಿ 81,626 ಮತಗಳಿಂದ ಗೆದ್ದಿದ್ದರು. ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪ್ರತಿಸ್ಪರ್ಧಿ ಜನತಾ ದಳ (ಜಾತ್ಯತೀತ) ಬಿ ಪ್ರಸನ್ನ ಕುಮಾರ್ ವಿರುದ್ಧ ಅತಿ ಹೆಚ್ಚು ಅಂತರದಲ್ಲಿ ಗೆಲುವು ಸಾಧಿಸಿದ್ದರು. ಪುಲಕೇಶಿ ನಗರದಲ್ಲಿ ಅಲ್ಪ ಸಂಖ್ಯಾತ ಮತಗಳು ಹೆಚ್ಚಿರುವ ಕಾರಣ ಈ ನಿರ್ಧಾರ ತೆಗೆದುಕೊಂಡಿದ್ದಾರೆ.

RELATED ARTICLES

Related Articles

TRENDING ARTICLES