Wednesday, January 22, 2025

ದೋಸ್ತಿಗೆ ಕೈ ಚಾಚಿದ್ದೀರಿ..’ಪವರ್ ಟಿವಿ’ಯೂ ಸ್ನೇಹಕ್ಕೆ ಸಿದ್ಧ : ದಾಸನಿಗೆ ‘ಅಭಯ’

ಬೆಂಗಳೂರು : ಸ್ಯಾಂಡಲ್​ವುಡ್​ನ ಚಾಲೆಂಜಿಂಗ್ ಸ್ಟಾರ್, ಅಭಿಮಾನಿಗಳ ನೆಚ್ಚಿನ ಡಿ ಬಾಸ್ ನಟ ದರ್ಶನ್ ಅವರು, ಮಾಧ್ಯಮಗಳಿಗೆ ವಿಷಾಧ ವ್ಯಕ್ತಪಡಿಸಿ ಬಹಿರಂಗ ಪತ್ರ ಬರೆದಿದ್ದಾರೆ.

ಹೌದು, ಕಳೆದ ಕೆಲವು ವರ್ಷಗಳಿಂದ ಮಾಧ್ಯಮಗಳ ಬಗ್ಗೆ ನಟ ದರ್ಶನ್ ಅವಹೇಳನಕಾರಿಯಾಗಿ ಮಾತನಾಡುತ್ತಾರೆ ಎಂಬ ಆರೋಪವಿತ್ತು. ಇದಕ್ಕೆ ಪ್ರತಿಕ್ರಿಯಿಸಿರುವ ದರ್ಶನ್, ಯಾವುದೋ ಒಂದು ಗಳಿಗೆಯಲ್ಲಿ ಕೆಲವು ಅಚಾತುರ್ಯದಿಂದ ಮಾತನಾಡಿರುತ್ತೇನೆ. ಮಾಧ್ಯಮ ಸಹೋದರರಿಗೆ, ಸಹೋದರಿಯರಿಗೆ ನೋವು ಉಂಟಾಗಿರುವುದರಿಂದ ಅದನ್ನು ನಾನು ವಿಷಾದಿಸುತ್ತೇನೆ. ಎಲ್ಲರೂ ನಗು ನಗುತಾ ಬಾಳೋಣ ಎಂದು ನಟ ದರ್ಶನ್ ಹೇಳಿದ್ದಾರೆ.

ಹೀಗಿದೆದಾಸನ ವಿಷಾಧ’ ಪತ್ರ

75 ವರ್ಷಗಳ ಇತಿಹಾಸವಿರುವ ಕನ್ನಡ ಚಿತ್ರರಂಗದಲ್ಲಿ ಅಳಿಸಲಾಗದ ಕೆಲವು ವ್ಯಕ್ತಿಗಳು ಮತ್ತು ಕೆಲವು ಹೆಸರುಗಳು ಮಾತ್ರ ಚರಿತ್ರೆಯಲ್ಲಿ ಉಳಿದಿರುತ್ತವೆ. ಆ ಸಾಲಿನಲ್ಲಿ ಡಾ.ರಾಜ್ ಕುಮಾರ್, ವಿಷ್ಣುವರ್ಧನ್, ಅಂಬರೀಶ್, ಶಂಕರ್ ನಾಗ್, ತೂಗುದೀಪ ಶ್ರೀನಿವಾಸ್, ಬಾಲಕೃಷ್ಣ, ದಿನೇಶ್, ಇವರ ಸಮಕಾಲೀನ ದಿಗ್ಗಜರುಗಳನ್ನು ಕರ್ನಾಟಕದ ಜನತೆ ಮೆಚ್ಚಿಕೊಂಡು ಮೆರೆಸಿದರು.

ಇದನ್ನೂ ಓದಿ : ನನ್ನ ಸೆಲೆಬ್ರಿಟಿಗಳನ್ನು ಕೆಣಕಲು ಬರಬೇಡಿ ಅಂದಿದ್ದೇಕೆ ದರ್ಶನ್?

ತಪ್ಪುಗಳ ಬಗ್ಗೆ ಎಚ್ಚೆತ್ತುಕೊಂಡಿದ್ದೇನೆ

ಒಪ್ಪುವ ಮಾಧ್ಯಮಗಳು ಮತ್ತು ದೃಶ್ಯ ಮಾಧ್ಯಮಗಳು ಪ್ರೋತ್ಸಾಹಿಸಿರುತ್ತೀರಿ. ಈ ಸಾಲಿನಲ್ಲಿ ಇದ್ದಂತಹ ಕನ್ನಡ ಚಿತ್ರರಂಗ ಮರೆಯಲಾಗದಂತಹ ನಟ ತೂಗುದೀಪ ಶ್ರೀನಿವಾಸ್ ರವರ ಕುಟುಂಬದಿಂದ ಬಂದಂತಹ ಸಣ್ಣ ಕುಡಿ ನಾನು ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದಾಗ ನನ್ನನ್ನು ಆಶೀರ್ವದಿಸಿ ಪ್ರೋತ್ಸಾಹಿಸಿ ಹಲವಾರು ಬಾರಿ ನಾನು ಮಾಡಿರುವ ಪಾತ್ರಗಳ ಬಗ್ಗೆ ವಿಶ್ಲೇಷಣೆ ಮಾಡಿ, ನನ್ನ ಪಾತ್ರದಲ್ಲಿರುವ ತಪ್ಪುಗಳನ್ನು ತಿದ್ದಿ ಹೇಳಿರುವಿರಿ, ನಾನು ಸಹ ಮುಂದಿನ ದಿನಗಳಲ್ಲಿ ಮಾಡಿರುವಂತೆ ಚಿತ್ರಗಳಲ್ಲಿ ನನ್ನ ಪಾತ್ರಗಳಲ್ಲಿ ಬರುವ ತಪ್ಪುಗಳ ಬಗ್ಗೆ ಎಚ್ಚೆತ್ತುಕೊಂಡು ಉತ್ತಮ ಚಿತ್ರಗಳನ್ನು ಆಯ್ಕೆ ಮಾಡಿಕೊಂಡಿರುವೆನು. ಅದೇ ರೀತಿಯಲ್ಲಿ ನಿಜ ಜೀವನದಲ್ಲಿ ಸಹ.

ನಗು ನಗುತಾ ಬಾಳೋಣ..!

ಯಾವುದೋ ಒಂದು ಗಳಿಗೆಯಲ್ಲಿ ಕೆಲವು ಅಚಾತುರ್ಯದಿಂದ ಮಾತನಾಡಿರುತ್ತೇನೆ. ಮಾಧ್ಯಮ ಸಹೋದರರಿಗೆ ಸಹೋದರಿಯರಿಗೆ ನೋವು ಉಂಟಾಗಿರುವುದರಿಂದ ಅದನ್ನು ನಾನು ವಿಷಾದಿಸುತ್ತೇನೆ. ಜೀವನವೆಂಬುದು ಬಹಳ ಅಮೂಲ್ಯ ಹಾಗೂ ತುಂಬಾ ಚಿಕ್ಕದ್ದು. ಈ ಚಿಕ್ಕ ಸಮಯದಲ್ಲಿ ನಗು ನಗುತಾ ಬಾಳೋಣ, ನನ್ನ ಈ ಭಾವನೆಯನ್ನು ನನ್ನ ಎಲ್ಲಾ ಮಿತ್ರರು ಹಾಗೂ ಅಭಿಮಾನಿಗಳು ಅರ್ಥ ಮಾಡಿಕೊಂಡು ಗೌರವಿಸಬೇಕು. ಇಂತಿ ನಿಮ್ಮ ದಾಸ.. ಎಂದು ಬಹಿರಂಗ ಪತ್ರ ಬರೆದಿದ್ದಾರೆ.

‘ದಾಸ’ನ ದೋಸ್ತಿಗೆ ಪವರ್ಸಿದ್ಧ

ನಟ ದರ್ಶನ್​​ ನಡೆಯನ್ನು ನಿಮ್ಮ ಪವರ್ ಟಿವಿ ಸ್ವಾಗತಿಸುತ್ತದೆ. ಜಿದ್ದು, ಹಠ ತೊರೆದು ಸ್ನೇಹಹಸ್ತ ಚಾಚಿದ್ದನ್ನು ಸ್ವಾಗತಿಸುತ್ತೇವೆ. ಮಾಧ್ಯಮದ ಜೊತೆ ಜಿದ್ದಿಗೆ ಬಿದ್ದು ಸಾಧಿಸುವುದು ಏನೂ ಇಲ್ಲ. ನಟ ದರ್ಶನ್​ ಅವರೇ, ನಿಮ್ಮ ಪ್ರತಿಭೆ, ಸಾಧನೆ, ಯಶಸ್ಸಿನ ಬಗ್ಗೆ ಹೆಮ್ಮೆಯಿದೆ. ಆದರೆ, ನಿಮ್ಮ ವರ್ತನೆಗೆ ನಮ್ಮ ತಕರಾರು, ಆಕ್ಷೇಪವಿತ್ತು. ಇದೀಗ ದೋಸ್ತಿಗೆ ಕೈ ಚಾಚಿದ್ದೀರಿ…’ಪವರ್ ಟಿವಿ’ಯೂ ಸ್ನೇಹಕ್ಕೆ ಸಿದ್ಧವಾಗಿದೆ.

RELATED ARTICLES

Related Articles

TRENDING ARTICLES