ತುಮಕೂರು : ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರನ್ನು ಕಳೆದ ಲೋಕಸಭಾ ಚುನಾವಣೆಯಲ್ಲಿ ತುಮಕೂರಿನಿಂದ ಸ್ಪರ್ಧಿಸುವಂತೆ ಒತ್ತಾಯ ಮಾಡಿ, ಬಲಿಪಶು ಮಾಡಿದ ಬಗ್ಗೆ ಸ್ವತಃ ದೇವೇಗೌಡ ಅವರೇ ಪ್ರತಿಕ್ರಿಯೆ ನೀಡಿದ್ದಾರೆ.
ತುಮಕೂರು ಜಿಲ್ಲೆ ಮಧುಗಿರಿಯಲ್ಲಿ ಮಾತನಾಡಿದ ಅವರು, ಕೆಲವು ಕಾಂಗ್ರೆಸ್ ನಾಯಕರಿಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ. ನಾನು ಕಳೆದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಅಂದುಕೊಂಡಿರಲಿಲ್ಲ ಎಂದು ಹೇಳಿದ್ದಾರೆ.
ಚುನಾವಣಾ ರಾಜಕೀಯ ಸಾಕಾಗಿದೆ ಅಂತಾ ಹಿಂದೆಯೇ ಹೇಳಿದ್ದೆ. ಕೆಲವು ಮುಖಂಡರು ನನ್ನನ್ನು ಬಲಿಪಶು ಮಾಡಿದ್ರು ಅಂತಾ ಹೇಳಲ್ಲ. ಅವರ ಹೆಸರೂ ಕೂಡ ಹೇಳೋಕೆ ಹೋಗಲ್ಲ. ಜೆಡಿಎಸ್ಗೆ 20 ಸ್ಥಾನ ಬರುತ್ತದೆ ಅಂತಾ ಕಾಂಗ್ರೆಸ್ನವರು ಹೇಳುತ್ತಾರೆ. ಅವರಿಗೆ ಮಧುಗಿರಿ ಒಂದೇ ಸಾಕು ತಕ್ಕ ಉತ್ತರ ಕೊಡಲು ಎಂದು ಕುಟುಕಿದ್ದಾರೆ.
ಇದನ್ನೂ ಓದಿ : ಕುಮಾರಸ್ವಾಮಿ ಆರೋಗ್ಯ ವಿಚಾರಿಸಿದ ನಿರ್ಮಲಾನಂದ ಶ್ರೀಗಳು
ಕುಮಾರಸ್ವಾಮಿ ಮತ್ತೆ ಪ್ರಚಾರ ಮಾಡ್ತಾರೆ
ಸಿರಾದಲ್ಲಿ ಕೆಲವು ಅಭಿಮಾನಿಗಳು ನನ್ನ ಹೆಗಲ ಮೇಲೆ ಕುರಿ ಹೊರಿಸಿದ್ದರು. ನನಗೆ 92 ವರ್ಷ ವಯಸ್ಸಾದರೂ ನಿಮ್ಮ ಮುಂದೆ ಬಂದಿದ್ದೇನೆ. ಕುಮಾರಸ್ವಾಮಿ ಆಸ್ಪತ್ರೆಯಲ್ಲಿದ್ದಾರೆ. ಅದೆಲ್ಲ ದೇವರ ಇಚ್ಛೆ. ಅವರು ಮತ್ತೆ ಪ್ರಚಾರ ಮಾಡುತ್ತಾರೆ. ಕುಮಾರಸ್ವಾಮಿ ಹೇಳಿದ ಕಡೆ ನಾನು ಪ್ರಚಾರ ಮಾಡುತ್ತೇನೆ ಎಂದು ಕಾರ್ಯಕರ್ತರಿಗೆ ಶಕ್ತಿ ತುಂಬುವ ಮಾತುಗಳನ್ನಾಡಿದ್ದಾರೆ.
ಕುಮಾರಸ್ವಾಮಿ ಎರಡು ಬಾರಿ ಮುಖ್ಯಮಂತ್ರಿ ಆಗಿದ್ದಾರೆ. ಆದರೆ ಪಂಚರತ್ನ ಯೋಜನೆಯ ಅನುಷ್ಠಾನ ಮಾಡುವ ಸಲುವಾಗಿ ಈಗ ಹೋರಾಟ ಮಾಡುತ್ತಿದ್ದಾರೆ. ಮುಸ್ಲಿಂ ಮುಖಂಡರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಮುಸ್ಲಿಂ ಸಮಾಜವನ್ನು ಬಿಟ್ಟುಕೊಟ್ಟಿಲ್ಲ, ಬಿಟ್ಟುಕೊಡುವುದು ಇಲ್ಲ ಎಂದು ಹೇಳಿದ್ದಾರೆ.